ವಿಜಯ್‌ ಸೇತುಪತಿ ಜೊತೆ ದುನಿಯಾ ವಿಜಯ್ ಸಿನಿಮಾ; ಪುರಿ ಜಗನ್ನಾಥ್ ನಿರ್ದೇಶನ

ಹೊಸ ಪ್ಯಾನ್ ಇಂಡಿಯಾ ಸಿನಿಮಾಗೆ ಪುರಿ ಜಗನ್ನಾಥ್‌ ಮತ್ತು ಚಾರ್ಮಿ ಕೌರ್‌ ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್‌ ಜೂನ್‌ನಿಂದ ಆರಂಭ ಆಗಲಿದೆ. ನಟ ವಿಜಯ್ ಸೇತುಪತಿ ಮುಖ್ಯ ಭೂಮಿಕೆ ನಿಭಾಯಿಸಲಿರುವ ಈ ಚಿತ್ರತಂಡದ ಪಾತ್ರವರ್ಗಕ್ಕೆ ದುನಿಯಾ ವಿಜಯ್ ಅವರು ಸೇರ್ಪಡೆ ಆಗಿದ್ದಾರೆ.

ವಿಜಯ್‌ ಸೇತುಪತಿ ಜೊತೆ ದುನಿಯಾ ವಿಜಯ್ ಸಿನಿಮಾ; ಪುರಿ ಜಗನ್ನಾಥ್ ನಿರ್ದೇಶನ
Charmi Kaur, Duniya Vijay, Puri Jagannath

Updated on: Apr 28, 2025 | 6:47 PM

ನಟ ದುನಿಯಾ ವಿಜಯ್ (Duniya Vijay) ಅವರು ಕನ್ನಡದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ಬೇಡಿಕೆ ಹೊಂದಿದ್ದಾರೆ. ತೆಲುಗು ಮತ್ತು ತಮಿಳು ಚಿತ್ರರಂಗದಿಂದ ಅವರಿಗೆ ಅವಕಾಶಗಳು ಬರುತ್ತಿವೆ. ಪುರಿ ಜಗನ್ನಾಥ್‌ (Puri Jagannath) ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ಪ್ರಮುಖ ಪಾತ್ರವೊಂದನ್ನು ಮಾಡಲಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಸಿನಿಮಾದಲ್ಲಿ ವಿಜಯ್ ಸೇತುಪತಿ (Vijay Sethupathi) ಅವರು ಮುಖ್ಯ ಭೂಮಿಕೆ ನಿಭಾಯಿಸಲಿದ್ದಾರೆ.

ಮಾಸ್ ಸಿನಿಮಾಗಳನ್ನು ಮಾಡುವಲ್ಲಿ ನಿರ್ದೇಶಕ ಪುರಿ ಜಗನ್ನಾಥ್‌ ಸಿಕ್ಕಾಪಟ್ಟೆ ಫೇಮಸ್. ಕನ್ನಡದಲ್ಲಿ ‘ಅಪ್ಪು’ ಸಿನಿಮಾ ಮಾಡಿದ್ದ ಅವರು ಟಾಲಿವುಡ್​ನಲ್ಲಿ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ವಿಜಯ್‌ ಸೇತುಪತಿ ಜೊತೆ ಕೈ ಜೋಡಿಸಿರುವುದರಿಂದ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಮೂಡಿದೆ. ಇದೇ ಸಿನಿಮಾದ ಪಾತ್ರವರ್ಗಕ್ಕೆ ದುನಿಯಾ ವಿಜಯ್ ಕೂಡ ಸೇರ್ಪಡೆ ಆಗಿರುವುದರಿಂದ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ.

ಇದನ್ನೂ ಓದಿ
ದುನಿಯಾ ವಿಜಯ್ ತಮಿಳು ಸಿನಿಮಾದ ಮುಹೂರ್ತ: ಇಲ್ಲಿವೆ ಚಿತ್ರಗಳು
ತಮಿಳು ಸಿನಿಮಾದಲ್ಲಿ ದುನಿಯಾ ವಿಜಯ್, ನಯನತಾರಾ ಜೊತೆ ನಟನೆ
ಚಿಕ್ಕವಯಸ್ಸಲ್ಲೇ ಅಪ್ಪ ಜಿಮನಾಸ್ಟಿಕ್ ಕಲಿಸಿದರು; ದುನಿಯಾ ವಿಜಯ್ ಮಗಳು ಮೋನಿಷ
‘ಸಿಟಿ ಲೈಟ್ಸ್​’ ಸಿನಿಮಾದ ಕಥೆ ಬಗ್ಗೆ ಸುಳಿವು ನೀಡಿದ ದುನಿಯಾ ವಿಜಯ್

ಈ ಸಿನಿಮಾಗೆ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅದನ್ನು ತಿಳಿಯಲು ಕೂಡ ಅಭಿಮಾನಿಗಳಿಗೆ ಕುತೂಹಲ ಇದೆ. ಈಗಾಗಲೇ ತಾರಾಬಳಗದ ಕಾರಣದಿಂದ ಕುತೂಹಲ ಹೆಚ್ಚಿಸಿದೆ.

ಬಾಲಿವುಡ್ ನಟಿ ಟಬು ಕೂಡ ಇತ್ತೀಚೆಗಷ್ಟೇ ಚಿತ್ರತಂಡಕ್ಕೆ ಎಂಟ್ರಿ ಆಗಿದ್ದಾರೆ. ಘಟಾನುಘಟಿ ಕಲಾವಿದರ ಎಂಟ್ರಿಯಿಂದಾಗಿ ಪಾತ್ರವರ್ಗದ ತೂಕ ಹೆಚ್ಚುತ್ತಿದೆ.

ಇದನ್ನೂ ಓದಿ: ಕೇರೆ ಹಾವು ರಕ್ಷಿಸಿ ಅದರ ಮಹತ್ವ ತಿಳಿಸಿದ ದುನಿಯಾ ವಿಜಯ್

ದುನಿಯಾ ವಿಜಯ್ ಅವರು ‘ವೀರ ಸಿಂಹ ರೆಡ್ಡಿ’ ಸಿನಿಮಾ ಮೂಲಕ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಈಗ ಅವರು ನಟಿಸುತ್ತಿರುವ ಎರಡನೇ ಟಾಲಿವುಡ್ ಸಿನಿಮಾ ಇದಾಗಿದೆ. ಈ ಚಿತ್ರತಂಡಕ್ಕೆ ಅವರನ್ನು ಪುರಿ ಜಗನ್ನಾಥ್‌ ಹಾಗೂ ನಿರ್ಮಾಪಕಿ ಚಾರ್ಮಿ ಬರ ಮಾಡಿಕೊಂಡಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ‘ಪುರಿ ಕನೆಕ್ಟ್‌’ ಬ್ಯಾನರ್‌ ಮೂಲಕ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us