AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಗ್ಲಿಂಗ್ ಪ್ರಕರಣ: ಮಮ್ಮುಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ

Dulquer Salmaan-Mammootty: ಕಾರು ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕೇರಳ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮುಟಿ, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರ್ ಹಾಗೂ ಇನ್ನೂ ಕೆಲವರ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಒಟ್ಟು 17 ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ಸ್ಮಗ್ಲಿಂಗ್ ಪ್ರಕರಣ: ಮಮ್ಮುಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ
Dulquer Pruthviraj Mammootty
ಮಂಜುನಾಥ ಸಿ.
| Edited By: |

Updated on:Oct 08, 2025 | 11:17 AM

Share

ಕೇರಳ ರಾಜ್ಯದಾದ್ಯಂತ ಕಳೆದ ಕೆಲ ವಾರಗಳಿಂದ ಸ್ಮಗ್ಲಿಂಗ್ ಪ್ರಕರಣದ ತನಿಖೆ ಜೋರಾಗಿದೆ. ವಿದೇಶಗಳ ಐಶಾರಾಮಿ ಕಾರುಗಳನ್ನು ಅಕ್ರಮವಾಗಿ ಖರೀದಿ ಮಾಡಲಾಗಿದೆ ಎಂಬ ಗುಮಾನಿಯ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಕೆಲ ವಾರಗಳ ಹಿಂದಷ್ಟೆ ಮಲಯಾಳಂ ಸ್ಟಾರ್ ನಟರಾದ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಇನ್ನೂ ಹಲವಾರು ಜನರ ಮನೆಗಳ ಮೇಲೆ ದಾಳಿ ಮಾಡಿದ್ದರು. ದಾಳಿ ಸಮಯದಲ್ಲಿ ಪೃಥ್ವಿರಾಜ್ ಸುಕುಮಾರ್ ಅವರಿಗೆ ಸೇರಿದ ವಾಹನವನ್ನು ಜಪ್ತಿ ಸಹ ಮಾಡಲಾಗಿತ್ತು. ಇದೀಗ ಇಡಿ (Enforcement Directorate) ಸಹ ದುಲ್ಕರ್ ಸಲ್ಮಾನ್ ಮತ್ತು ಅವರ ತಂದೆ ಮಮ್ಮುಟಿ, ಪೃಥ್ವಿರಾಜ್ ಸುಕುಮಾರ್ ಮನೆಗಳ ಮೇಲೆ ದಾಳಿ ಮಾಡಿದೆ.

ಮಮ್ಮುಟಿ ಅವರಿಗೆ ಸೇರಿದ ಚೆನ್ನೈನ ಕಚೇರಿ, ಮಮ್ಮುಟಿ ಅವರ ಮನೆಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ದುಲ್ಕರ್ ಸಲ್ಮಾನ್ ಅವರ ಕಚೇರಿ, ನಿವಾಸ. ಪೃಥ್ವಿರಾಜ್ ಸುಕುಮಾರ್ ಅವರ ಮನೆ, ನಟ ಅಮಿತ್ ಚಕ್ಕಲಕಲ್ ಅವರ ನಿವಾಸದ ಮೇಲೆಯೂ ಸಹ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಒಟ್ಟು 17 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಇದನ್ನೂ ಓದಿ:ಸ್ಮಗ್ಲಿಂಗ್ ಪ್ರಕರಣ: ಖ್ಯಾತ ನಟ ದುಲ್ಕರ್ ಸಲ್ಮಾನ್​​ಗೆ ಸಮನ್ಸ್ ಜಾರಿ

ಕೆಲ ದಿನಗಳ ಹಿಂದಷ್ಟೆ ಕಸ್ಟಮ್ಸ್ ಅಧಿಕಾರಿಗಳು ‘ನೂಮ್ಕೂರ್’ ಹೆಸರಿನಲ್ಲಿ ಕೇರಳ ರಾಜ್ಯದಾದ್ಯಂತ ಹಲವು ನಗರಗಳಲ್ಲಿ ಸಿನಿಮಾ ನಟರು, ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆಸಿ ಅವರು ಹೊಂದಿರುವ ವಿದೇಶಿ ಕಾರುಗಳು ಅವುಗಳ ದಾಖಲೆಗಳನ್ನು ಪರಿಶೀಲನೆ ಮಾಡಿದರು. ಈ ವೇಳೆ ದುಲ್ಕರ್ ಸಲ್ಮಾನ್ ಅವರಿಗೆ ಸೇರಿದ ಕಾರೊಂದನ್ನು ಜಪ್ತಿ ಮಾಡಲಾಗಿತ್ತು. ದುಲ್ಕರ್ ಸಲ್ಮಾನ್ ಅವರ ಬಳಿ ವಿದೇಶಿ ಬ್ರ್ಯಾಂಡುಗಳ ಸುಮಾರು 40ಕ್ಕೂ ಹೆಚ್ಚು ಕಾರುಗಳ ಸಂಗ್ರಹ ಇರುವುದು ಬೆಳಕಿಗೆ ಬಂದಿತ್ತು. ದುಲ್ಕರ್ ಮಾತ್ರವಲ್ಲದೆ, ಪೃಥ್ವಿರಾಜ್ ಸುಕುಮಾರ್ ಅವರ ನಿವಾಸದ ಮೇಲೂ ಕಸ್ಟಮ್ಸ್ ಅಧಿಕಾರಿಗಳು ದಾಳಿ ನಡೆಸಿದ್ದರು. ಅದೇ ಕಾರಣಕ್ಕೆ ಈಗ ಇಡಿ ಸಹ ದುಲ್ಕರ್, ಮಮ್ಮುಟಿ, ಪೃಥ್ವಿರಾಜ್ ಹಾಗೂ ಇನ್ನೂ ಕೆಲವರ ಮೇಲೆ ದಾಳಿ ನಡೆಸಿದೆ.

ಭೂತಾನ್ ಸೇನೆಯಿಂದ ವಿದೇಶಿ ಐಶಾರಾಮಿ ಕಾರುಗಳನ್ನು ಕಡಿಮೆ ದರಕ್ಕೆ ಖರೀದಿ ಮಾಡಿ ಅವನ್ನು ಕಳ್ಳದಾರಿಯಿಂದ ಭಾರತಕ್ಕೆ ತಂದು, ನಕಲಿ ಹೆಸರುಗಳಲ್ಲಿ ನೊಂದಣಿ ಮಾಡಿ ಮಾರಾಟ ಮಾಡುಲಾಗುತ್ತಿದೆ. ಇಂಥಹಾ ನಕಲಿ ದಾಖಲೆಯ, ತೆರಿಗೆ ವಂಚಿಸಿ ತಂದಿರುವ ಕಾರುಗಳು ಕೇರಳದಲ್ಲಿ ಹೆಚ್ಚಾಗಿದ್ದರಿಂದ ಕಸ್ಟಮ್ಸ್ ಅಧಿಕಾರಿಗಳು ರಾಜ್ಯದಾದ್ಯಂತ ಹಲವಾರು ಉದ್ಯಮಿಗಳು, ಸಿನಿಮಾ ಸೆಲೆಬ್ರಿಟಿಗಳ ಮನೆಗಳ ಮೇಲೆ ದಾಳಿ ಮಾಡಿ, ಹಲವು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:48 am, Wed, 8 October 25

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು