ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂಪಾಯಿ ದಂಡ ವಿಧಿಸಿದ ನ್ಯಾಯಾಲಯ; ಏನಿದು ಕೇಸ್​?

6 Months Imprisonment for Jayaprada: ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಈ ಹಿಂದೆ ಕೂಡ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಚಿತ್ರಮಂದಿರದ ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು.

ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂಪಾಯಿ ದಂಡ ವಿಧಿಸಿದ ನ್ಯಾಯಾಲಯ; ಏನಿದು ಕೇಸ್​?
ಜಯಪ್ರದಾ
Follow us
ಮದನ್​ ಕುಮಾರ್​
|

Updated on:Aug 11, 2023 | 4:10 PM

ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ (Jayaprada) ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ (Imprisonment) ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ (ESI) ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಇಎಸ್​ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್​ನ ಕುರ್ಚಿ, ಪ್ರೊಜೆಕ್ಟರ್​ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.

ಚೆನ್ನೈನಲ್ಲಿ ಜಯಪ್ರದಾ ಅವರು ರಾಮ್​ ಕುಮಾರ್​ ಮತ್ತು ರಾಜ ಬಾಬು ಜೊತೆ ಸೇರಿ ಎರಡು ಚಿತ್ರಮಂದಿರಗಳನ್ನು ನಡೆಸುತ್ತಿದ್ದರು. ಅಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್​ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಜಯಪ್ರದಾ ಪಾವತಿಸುತ್ತಿರಲಿಲ್ಲ. ತಮಗೆ ತಮ್ಮ ಪಾಲಿನ ಇಎಸ್​ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ತಕರಾರು ತೆಗೆದಿದ್ದರು. ಆಗ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ದೂರು ದಾಖಲಿಸಿತ್ತು.

ಇದನ್ನೂ ಓದಿ: ಜಯಪ್ರದಾ ಕುಟುಂಬದಿಂದ ಅನ್ಯಾಯವಾಗಿದೆ, ದಯವಿಟ್ಟು ನ್ಯಾಯ ಕೊಡಿಸಿ: ಸಂಸದೆ ಸುಮಲತಾ ಬಳಿ ವಿಜಯಲಕ್ಷ್ಮಿ ಮನವಿ

ಬಹುಭಾಷೆಯ ಸಿನಿಮಾಗಳಲ್ಲಿ ನಟಿಸುವ ಮೂಲಕ ಜಯಪ್ರದಾ ಅವರು ಮನೆ ಮಾತಾಗಿದ್ದಾರೆ. ಕನ್ನಡ, ತೆಲುಗು, ತಮಿಳು ಮಲಯಾಳಂ ಮತ್ತು ಹಿಂದಿ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ‘ಸನಾದಿ ಅಪ್ಪಣ್ಣ’, ‘ಹುಲಿಯ ಹಾಲಿನ ಮೇವು’, ‘ಕವಿರತ್ನ ಕಾಳಿದಾಸ’, ‘ಶಬ್ದವೇದಿ’ ಮುಂತಾದ ಸೂಪರ್​ ಹಿಟ್​ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕಿರುತೆರೆಯ ಕಾರ್ಯಕ್ರಮಗಳಲ್ಲಿ ಜಡ್ಜ್​ ಆಗಿಯೂ ಅವರು ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪುನೀತ್​ ನಿವಾಸಕ್ಕೆ ಬಂದು ಸಾಂತ್ವನ ಹೇಳಿದ ಜಯಪ್ರದಾ; ಅಪ್ಪು ನೆನೆದು ಕಣ್ಣೀರಿಟ್ಟ ಹಿರಿಯ ನಟಿ

ನಟನೆಯ ಜೊತೆಗೆ ರಾಜಕೀಯದಲ್ಲೂ ಜಯಪ್ರದಾ ಆಸಕ್ತಿ ಬೆಳೆಸಿಕೊಂಡರು. 1994ರಲ್ಲಿ ಅವರು ‘ತೆಲುಗು ದೇಶಂ ಪಕ್ಷ’ ಸೇರಿಕೊಂಡರು. ನಂತರ ಅವರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿ ಸಂಸದೆಯಾದರು. 2019ರಲ್ಲಿ ಅವರು ಭಾರತೀಯ ಜನತಾ ಪಕ್ಷವನ್ನು ಸೇರಿಕೊಂಡರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:31 pm, Fri, 11 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ