AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಪಕರಿಂದ ಮೋಸ; ಬಂತು ಜಾರಿ ನಿರ್ದೇಶನಾಲಯದ ನೋಟಿಸ್

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸುಮಾರು 250 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಚಿತ್ರದ ನಿರ್ಮಾಪಕರು ಈಗ ತೊಂದರೆ ಎದುರಾಗಿದೆ. ಎರ್ನಾಕುಲಂನ ಮರಾಡು ಪೊಲೀಸ್ ಠಾಣೆಯವರು ಕೇರಳ ಹೈಕೋರ್ಟ್​ಗೆ ವರದಿ ಒಂದನ್ನು ಸಲ್ಲಿಕೆ ಮಾಡಿದ್ದರು.

‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಪಕರಿಂದ ಮೋಸ; ಬಂತು ಜಾರಿ ನಿರ್ದೇಶನಾಲಯದ ನೋಟಿಸ್
‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಪಕರಿಂದ ಮೋಸ; ಬಂತು ಜಾರಿ ನಿರ್ದೇಶನಾಲಯದ ನೋಟಿಸ್
ರಾಜೇಶ್ ದುಗ್ಗುಮನೆ
|

Updated on: Jun 13, 2024 | 10:51 AM

Share

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ‘ಮಂಜುಮ್ಮೇಲ್ ಬಾಯ್ಸ್’ (Manjummel Boys) ನಿರ್ಮಾಪಕರು ಸಂಕಷ್ಟ ಎದುರಿಸಿದ್ದಾರೆ. ಈ ಸಿನಿಮಾದ ನಿರ್ಮಾಪಕರಾದ ಸೌಬಿನ್ ಶಾಹಿರ್, ಶಾನ್ ಆ್ಯಂಥೋನಿ, ಬಾಬು ಶಾಹಿರ್​ಗೆ ನೋಟಿಸ್ ನೀಡಲಾಗಿದೆ. ಕೊಚ್ಚಿಯಲ್ಲಿರುವ ಇವರ ಕಚೇರಿಗೆ ನೋಟಿಸ್ ಹೋಗಿದೆ. ಇವರು ಶೀಘ್ರವೇ ‘ಇಡಿ’ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕಿದೆ.

ಎರ್ನಾಕುಲಂನ ಮರಾಡು ಪೊಲೀಸ್ ಠಾಣೆಯವರು ಕೇರಳ ಹೈಕೋರ್ಟ್​ಗೆ ವರದಿ ಒಂದನ್ನು ಸಲ್ಲಿಕೆ ಮಾಡಿದ್ದರು. ‘ಮಂಜುಮ್ಮೇಲ್ ಬಾಯ್ಸ್’ ತಂಡದವರು ಹಗರಣ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

ಈ ಚಿತ್ರಕ್ಕೆ ಸಿರಾಜ್ ಎಂಬ ವ್ಯಕ್ತಿ 7 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರು. ಸಿನಿಮಾದಿಂದ ಬಂದ ಒಟ್ಟೂ ಲಾಭದಲ್ಲಿ ಶೇ. 40ರಷ್ಟು ಲಾಭವನ್ನು ಇವರಿಗೆ ನೀಡುವ ಬಗ್ಗೆ ಮಾತುಕತೆ ನಡೆದಿತ್ತು. ಆದರೆ, ಹೂಡಿಕೆದಾರ ಸಿರಾಜ್​ಗೆ ಈ ಮೊತ್ತ ಸಿಕ್ಕಿಲ್ಲ. ಅವರಿಗೆ ಕೇವಲ 50 ಲಕ್ಷ ರೂಪಾಯಿ ಮಾತ್ರ ಸಿಕ್ಕಿದೆ ಎನ್ನಲಾಗಿದೆ. ಈ ಚಿತ್ರ 250 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಕಮರ್ಷಿಯಲ್ ಕೋರ್ಟ್​ಗೆ ಸಿರಾಜ್ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಬಳಿಕ ಅವರು ಮರಾಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದರು. ತಮಗೆ ಮೋಸ ಆಗಿದೆ ಎಂದು ಅವರು ಹೇಳಿದ್ದರು. ಈಗ ಜಾರಿ ನಿರ್ದೇಶನಾಲಯದ ನೋಟಿಸ್​ಗೆ ನಿರ್ಮಾಪಕರು ಯಾವ ರೀತಿ ಉತ್ತರಿಸುತ್ತಾರೆ ನೋಡಬೇಕಿದೆ.

ಇದನ್ನೂ ಓದಿ: ‘ಈ ವರ್ಷದ ಫೇವರಿಟ್ ಸಿನಿಮಾ’; ಒಟಿಟಿಯಲ್ಲಿ ‘ಮಂಜುಮ್ಮೇಲ್ ಬಾಯ್ಸ್’ ನೋಡಿ ಹೊಗಳಿದ ಸ್ಟಾರ್ ನಟ 

ಮೇ ತಿಂಗಳಲ್ಲಿ ಈ ಸಿನಿಮಾ ತಂಡಕ್ಕೆ ಸಂಕಷ್ಟ ಎದುರಾಗಿತ್ತು. ‘ಗುಣ’ ಚಿತ್ರದ ಗೀತೆ ಬಳಸಿದ್ದಕ್ಕೆ ಇಳಯರಾಜ ಅವರು ತಂಡದ ಮೇಲೆ ಕೇಸ್ ಹಾಕಿದ್ದರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು