Fact Check: ಲಾರೆನ್ಸ್ ಬಿಷ್ಣೋಯ್ ಭೇಟಿಯಾಗಲು ಸಲ್ಮಾನ್ ಖಾನ್ ಜೈಲಿಗೆ ಹೋಗಿದ್ದು ನಿಜವೇ?: ಇಲ್ಲಿದೆ ಸತ್ಯಾಂಶ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಜಾಮೀನು ಪಡೆದು ಜೋಧ್‌ಪುರ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದ 2018 ರ ಈ ವಿಡಿಯೋ ಇದಾಗಿದೆ. ಈಗ ಕೆಲವರು ಅದೇ ವಿಡಿಯೋವನ್ನು ಇತ್ತೀಚಿನದು ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.

Fact Check: ಲಾರೆನ್ಸ್ ಬಿಷ್ಣೋಯ್ ಭೇಟಿಯಾಗಲು ಸಲ್ಮಾನ್ ಖಾನ್ ಜೈಲಿಗೆ ಹೋಗಿದ್ದು ನಿಜವೇ?: ಇಲ್ಲಿದೆ ಸತ್ಯಾಂಶ
ವೈರಲ್​​ ಪೋಸ್ಟ್
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 19, 2024 | 4:09 PM

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹೆಚ್ಚು ವೈರಲ್ ಆಗುತ್ತಿದೆ. ಇದರಲ್ಲಿ ಸಲ್ಮಾನ್ ಖಾನ್ ಅಂಗರಕ್ಷಕ ಶೇರಾ ಅವರು ಜೈಲಿನ ಹೊರಗೆ ನಿಂತಿರುವುದು ಕಾಣಿಸುತ್ತದೆ. ಜೊತೆಗೆ ವಿಡಿಯೋದಲ್ಲಿ ಇನ್ನೂ ಅನೇಕ ಜನರು ಕಾಣಿಸಿಕೊಂಡಿದ್ದಾರೆ. ಇದೀಗ ಕೆಲವರು ಈ ವಿಡಿಯೋವನ್ನು ಶೇರ್ ಮಾಡಿದ್ದು, ಲಾರೆನ್ಸ್ ಬಿಷ್ಣೋಯ್ ಅವರನ್ನು ಭೇಟಿ ಮಾಡಲು ಸಲ್ಮಾನ್ ಖಾನ್ ಜೈಲಿಗೆ ಹೋಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಅನೇಕ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

ವೈರಲ್ ಆಗುತ್ತಿರುವುದು ಏನು?:

ಫೇಸ್‌ಬುಕ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡು, ‘‘ಸಲ್ಮಾನ್ ಖಾನ್ ಲಾರೆನ್ಸ್ ಬಿಷ್ಟೋಯಿ ಅವರನ್ನು ಭೇಟಿ ಮಾಡಲು ಜೈಲಿಗೆ ತಲುಪಿದ್ದಾರೆ ಮತ್ತು ಅವರ ಅಂಗರಕ್ಷಕ ಶೇರಾ ಬೇರೆ ಯಾರಾದರೂ ಇದನ್ನು ನೋಡುತ್ತಿದ್ದಾರೆಯೇ ಎಂದು ಪದೇ ಪದೇ ತಿರುಗಿ ಗಮನಿಸುತ್ತಿದ್ದಾರೆ’’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಜಾಮೀನು ಪಡೆದು ಜೋಧ್‌ಪುರ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದ 2018 ರ ಈ ವಿಡಿಯೋ ಇದಾಗಿದೆ. ಈಗ ಕೆಲವರು ಅದೇ ವಿಡಿಯೋವನ್ನು ಇತ್ತೀಚಿನದು ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಸದ್ಯದ ಪರಿಸ್ಥಿತಿಗೂ ಈ ವಿಡಿಯೋಗೂ ಯಾವುದೇ ಸಂಬಂಧವಿಲ್ಲ. ನಿಜಾಂಶವನ್ನು ತಿಳಿಯಲು ನಾವು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್ ತೆಗೆದುಕೊಂಡು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದೇವೆ. ಆಗ ANI ಸುದ್ದಿ ಸಂಸ್ಥೆ ಏಪ್ರಿಲ್ 7, 2018 ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ಇದೇ ಕ್ಲಿಪ್​ನ ದೀರ್ಘ ವಿಡಿಯೋ ಆವೃತ್ತಿಯನ್ನು ನಾವು ಕಂಡುಕೊಂಡಿದ್ದೇವೆ. ವಿಡಿಯೋದೊಂದಿಗೆ ನೀಡಿರುವ ಮಾಹಿತಿಯ ಪ್ರಕಾರ, 1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್‌ಗೆ ಜೋಧ್‌ಪುರದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದ ಸಮಯದ ವಿಡಿಯೋ ಆಗಿದೆ.

ಈ ಕುರಿತು ಗೂಗಲ್​ನಲ್ಲಿ ಹುಡುಕಿದಾಗ ಇದಕ್ಕೆ ಸಂಬಂಧಿಸಿದ ಅನೇಕ ವರದಿಯನ್ನು ನಾವು ಕಂಡುಕೊಂಡಿದ್ದೇವೆ. ಸಲ್ಮಾನ್ ಖಾನ್ ಎರಡು ರಾತ್ರಿಗಳನ್ನು ಕಳೆದ ನಂತರ ಜೋಧ್‌ಪುರ ಜೈಲಿನಿಂದ ಹೊರಬಂದಿದ್ದಾರೆ. ಏಪ್ರಿಲ್ 5, 2018 ರಂದು ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ದೋಷಿ ಎಂದು ಘೋಷಿಸಲಾಯಿತು ಮತ್ತು ಏಪ್ರಿಲ್ 7 ರಂದು ಜಾಮೀನು ನೀಡಲಾಯಿತು. ಲಾರೆನ್ಸ್ ಬಿಷ್ಣೋಯ್ ಅವರು ಪ್ರಸ್ತುತ ಗುಜರಾತ್‌ನ ಸಬರಮತಿ ಜೈಲಿನಲ್ಲಿದ್ದಾರೆ ಮತ್ತು ಸಲ್ಮಾನ್ ಖಾನ್ ಅವರ ವೈರಲ್ ವಿಡಿಯೋ ಜೋಧ್‌ಪುರ ಜೈಲಿನಿಂದ ಬಂದಿದ್ದಾಗಿದೆ. ಹೀಗಾಗಿ ಜನರು ಸುಳ್ಳು ಹೇಳಿಕೆಗಳೊಂದಿಗೆ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜಾಮೀನು ಪಡೆದು ಸಲ್ಮಾನ್ ಖಾನ್ ಜೋಧ್‌ಪುರ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದ 2018 ನೇ ವರ್ಷದ ವಿಡಿಯೋವನ್ನು ಈಗ ಸಲ್ಮಾನ್ ಖಾನ್ ಅವರು ಲಾರೆನ್ಸ್ ಬಿಷ್ಣೋಯ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ ಎಂದು ಹೇಳುವುದರೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಸದ್ಯದ ಪರಿಸ್ಥಿತಿಗೂ ವಿಡಿಯೋಗೂ ಯಾವುದೇ ಸಂಬಂಧವಿಲ್ಲ ಎಂದು ಟಿವಿ9 ಕನ್ನಡ ತನ್ನ ಫ್ಯಾಕ್ಟ್​ಚೆಕ್​ನಿಂದ ಸ್ಪಷ್ಟಪಡಿಸುತ್ತಿದೆ.

ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿರೋಧ ಪಕ್ಷದ ತಾಕತ್ತನ್ನು ಸರ್ಕಾರಕ್ಕೆ ತೋರಿಸಿದ್ದೇವೆ: ಅರ್ ಆಶೋಕ
ವಿರೋಧ ಪಕ್ಷದ ತಾಕತ್ತನ್ನು ಸರ್ಕಾರಕ್ಕೆ ತೋರಿಸಿದ್ದೇವೆ: ಅರ್ ಆಶೋಕ
ಬೀದರ್​: ನ.24ರಿಂದ ಎರಡು ದಿನಗಳ ಕಾಲ ಅನುಭವಮಂಟಪ ಉತ್ಸವ
ಬೀದರ್​: ನ.24ರಿಂದ ಎರಡು ದಿನಗಳ ಕಾಲ ಅನುಭವಮಂಟಪ ಉತ್ಸವ
IND vs AUS: ಮೊದಲ ಪಂದ್ಯಕ್ಕೆ ನಾನು ರೆಡಿ ಎಂದ ಕನ್ನಡಿಗ ಕೆಎಲ್ ರಾಹುಲ್
IND vs AUS: ಮೊದಲ ಪಂದ್ಯಕ್ಕೆ ನಾನು ರೆಡಿ ಎಂದ ಕನ್ನಡಿಗ ಕೆಎಲ್ ರಾಹುಲ್
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ
ಜಮೀನು ಖರೀದಿಸಲು ಮುಡಾ ನಿರ್ಧರಿಸಿದ್ದರೂ ರೈತರು ತಯಾರಿರಲಿಲ್ಲ: ಧ್ರುವಕುಮಾರ್
ಜಮೀನು ಖರೀದಿಸಲು ಮುಡಾ ನಿರ್ಧರಿಸಿದ್ದರೂ ರೈತರು ತಯಾರಿರಲಿಲ್ಲ: ಧ್ರುವಕುಮಾರ್
ಸಂಪುಟ ಪುನಾರಚನೆ ಬಗ್ಗೆ ಗೊತ್ತಿಲ್ಲ, ಸಿಎಂರನ್ನು ಕೇಳಬೇಕು: ಹರಿಪ್ರಸಾದ್
ಸಂಪುಟ ಪುನಾರಚನೆ ಬಗ್ಗೆ ಗೊತ್ತಿಲ್ಲ, ಸಿಎಂರನ್ನು ಕೇಳಬೇಕು: ಹರಿಪ್ರಸಾದ್
ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್ ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್
ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್ ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್
ಪಿಎಂ ಮೋದಿ ಹಂಚಿಕೊಂಡ ಬ್ರೆಜಿಲ್​ನ ಜಿ-20 ಶೃಂಗಸಭೆಯ ಮೊದಲ ದಿನದ ಝಲಕ್
ಪಿಎಂ ಮೋದಿ ಹಂಚಿಕೊಂಡ ಬ್ರೆಜಿಲ್​ನ ಜಿ-20 ಶೃಂಗಸಭೆಯ ಮೊದಲ ದಿನದ ಝಲಕ್
ಕೇವಲ ಒಂದು ಆರೋಪದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ಸಿಕ್ಕಿದೆ: ಪರಮೇಶ್ವರ್
ಕೇವಲ ಒಂದು ಆರೋಪದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ಸಿಕ್ಕಿದೆ: ಪರಮೇಶ್ವರ್
ಉಡುಪಿ ಜಿಲ್ಲೆ ಪೀತೆಬೈಲ್ ಅರಣ್ಯಪ್ರದೇಶದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ
ಉಡುಪಿ ಜಿಲ್ಲೆ ಪೀತೆಬೈಲ್ ಅರಣ್ಯಪ್ರದೇಶದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ