AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಸಿನಿಮಾದಲ್ಲಿ ಫಹಾದ್ ಫಾಸಿಲ್​ ಲುಕ್​ ನೋಡಿ ಫಿದಾ ಆದ ಅಭಿಮಾನಿಗಳು

ಫಹಾದ್​ ಫಾಸಿಲ್​ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ. ಫಹಾದ್​ ತಲೆಯ ಮೇಲೆ ಒಂದೇ ಒಂದು ಕೂದಲಿಲ್ಲ. ಸೊಂಟದ ಮೇಲೆ ಗನ್​ ಇದೆ. ಬನ್ವರ್​ ಸಿಂಗ್​ ಶೇಖಾವತ್​ ಎಂಬುದು ಫಹಾದ್​ ಪಾತ್ರದ ಹೆಸರು.

‘ಪುಷ್ಪ’ ಸಿನಿಮಾದಲ್ಲಿ ಫಹಾದ್ ಫಾಸಿಲ್​ ಲುಕ್​ ನೋಡಿ ಫಿದಾ ಆದ ಅಭಿಮಾನಿಗಳು
‘ಪುಷ್ಪ’ ಸಿನಿಮಾದಲ್ಲಿ ಫಹಾದ್ ಫಾಸಿಲ್​ ಲುಕ್​ ನೋಡಿ ಫಿದಾ ಆದ ಅಭಿಮಾನಿಗಳು
TV9 Web
| Edited By: |

Updated on: Aug 28, 2021 | 9:48 PM

Share

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ ಸಾಕಷ್ಟು ವಿಚಾರಗಳಿಗೆ ಸುದ್ದಿಯಲ್ಲಿದೆ. ಈ ಚಿತ್ರ ಎರಡು ಪಾರ್ಟ್​​ಗಳಲ್ಲಿ ಬರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ರಗಡ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಮಲಯಾಳಂನ ಖ್ಯಾತ ನಟ ಫಹಾದ್​ ಫಾಸಿಲ್​ ಈ ಸಿನಿಮಾದಲ್ಲಿ ನಟಿಸುತ್ತಿದ್ದು, ಅವರ ಲುಕ್​ ಇಂದು ಬಿಡುಗಡೆಯಾಗಿದೆ. 

ಫಹಾದ್​ ಫಾಸಿಲ್​ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ. ಫಹಾದ್​ ತಲೆಯ ಮೇಲೆ ಒಂದೇ ಒಂದು ಕೂದಲಿಲ್ಲ. ಸೊಂಟದ ಮೇಲೆ ಗನ್​ ಇದೆ. ಬನ್ವರ್​ ಸಿಂಗ್​ ಶೇಖಾವತ್​ ಎಂಬುದು ಫಹಾದ್​ ಪಾತ್ರದ ಹೆಸರು. ಅವರ ಕಣ್ಣಿನ ನೋಟ ಭಯ ಬೀಳಿಸುವಂತಿದೆ. ಸದ್ಯ, ಈ ಲುಕ್​ ಸಾಕಷ್ಟು ವೈರಲ್​ ಅಗಿದೆ. ಈ ಚಿತ್ರದಲ್ಲಿ ಅವರದ್ದು ಪೊಲೀಸ್​ ಪಾತ್ರ. ಈ ಸಿನಿಮಾ ಕಳ್ಳಸಾಗಣೆ ಕಥೆಯನ್ನು ಹೇಳುತ್ತಿರುವುದರಿಂದ ಪೊಲೀಸ್​ ಕ್ಯಾರೆಕ್ಟರ್​ ಪ್ರಮುಖ ಎನಿಸಿಕೊಳ್ಳಲಿದೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ‘ರಂಗಸ್ಥಲಂ’ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ‘ಪುಷ್ಪ’ ಚಿತ್ರ ಕಾಡಿನ ಹಿನ್ನೆಲೆ ಹೊಂದಿದೆ. ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹಲವು ಭಾಷೆಗಳಲ್ಲಿ ಮೂಡಿಬರುತ್ತಿರುವ ‘ಪುಷ್ಪ’ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಎಲ್ಲ ಸಿನಿಮಾದಲ್ಲೂ ಐಟಂ ಸಾಂಗ್​ಗೆ ಸುಕುಮಾರ್​ ಹೆಚ್ಚು ಮಹತ್ವ ನೀಡುತ್ತಾರೆ. ಅದನ್ನು ‘ಪುಷ್ಪ’ ಚಿತ್ರದಲ್ಲೂ ಮುಂದುವರಿಸಿದ್ದಾರೆ. ಮೂಲಗಳ ಪ್ರಕಾರ ಸನ್ನಿ ಲಿಯೋನ್​ ಜೊತೆಗೆ ಚಿತ್ರತಂಡ ಈಗಾಗಲೇ ಒಂದು ಸುತ್ತಿನ ಮಾತುಕಥೆ ಮುಗಿಸಿದೆ. ಅವರು ಈ ಒಂದು ಐಟಂ ಸಾಂಗ್​ನಲ್ಲಿ ಹೆಜ್ಜೆ ಹಾಕಲು ಬರೋಬ್ಬರಿ 50 ಲಕ್ಷ ರೂ. ಸಂಭಾವನೆ ಕೇಳುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.

ಇದನ್ನೂ ಓದಿ: ಕಮಲ್​ ಹಾಸನ್​ ಎದುರುಹಾಕಿಕೊಂಡ ಮಲಯಾಳಂ ನಟ ಫಹಾದ್​ ಫಾಸಿಲ್​

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ