
ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸಾಕಷ್ಟು ವಿಚಾರಗಳಿಗೆ ಸುದ್ದಿಯಲ್ಲಿದೆ. ಈ ಚಿತ್ರ ಎರಡು ಪಾರ್ಟ್ಗಳಲ್ಲಿ ಬರಲಿದೆ ಎನ್ನುವ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಮಲಯಾಳಂನ ಖ್ಯಾತ ನಟ ಫಹಾದ್ ಫಾಸಿಲ್ ಈ ಸಿನಿಮಾದಲ್ಲಿ ನಟಿಸುತ್ತಿದ್ದು, ಅವರ ಲುಕ್ ಇಂದು ಬಿಡುಗಡೆಯಾಗಿದೆ.
ಫಹಾದ್ ಫಾಸಿಲ್ ಲುಕ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಫಹಾದ್ ತಲೆಯ ಮೇಲೆ ಒಂದೇ ಒಂದು ಕೂದಲಿಲ್ಲ. ಸೊಂಟದ ಮೇಲೆ ಗನ್ ಇದೆ. ಬನ್ವರ್ ಸಿಂಗ್ ಶೇಖಾವತ್ ಎಂಬುದು ಫಹಾದ್ ಪಾತ್ರದ ಹೆಸರು. ಅವರ ಕಣ್ಣಿನ ನೋಟ ಭಯ ಬೀಳಿಸುವಂತಿದೆ. ಸದ್ಯ, ಈ ಲುಕ್ ಸಾಕಷ್ಟು ವೈರಲ್ ಅಗಿದೆ. ಈ ಚಿತ್ರದಲ್ಲಿ ಅವರದ್ದು ಪೊಲೀಸ್ ಪಾತ್ರ. ಈ ಸಿನಿಮಾ ಕಳ್ಳಸಾಗಣೆ ಕಥೆಯನ್ನು ಹೇಳುತ್ತಿರುವುದರಿಂದ ಪೊಲೀಸ್ ಕ್ಯಾರೆಕ್ಟರ್ ಪ್ರಮುಖ ಎನಿಸಿಕೊಳ್ಳಲಿದೆ.
‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ‘ರಂಗಸ್ಥಲಂ’ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ‘ಪುಷ್ಪ’ ಚಿತ್ರ ಕಾಡಿನ ಹಿನ್ನೆಲೆ ಹೊಂದಿದೆ. ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಟ್ರಕ್ ಡ್ರೈವರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಹಲವು ಭಾಷೆಗಳಲ್ಲಿ ಮೂಡಿಬರುತ್ತಿರುವ ‘ಪುಷ್ಪ’ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಎಲ್ಲ ಸಿನಿಮಾದಲ್ಲೂ ಐಟಂ ಸಾಂಗ್ಗೆ ಸುಕುಮಾರ್ ಹೆಚ್ಚು ಮಹತ್ವ ನೀಡುತ್ತಾರೆ. ಅದನ್ನು ‘ಪುಷ್ಪ’ ಚಿತ್ರದಲ್ಲೂ ಮುಂದುವರಿಸಿದ್ದಾರೆ. ಮೂಲಗಳ ಪ್ರಕಾರ ಸನ್ನಿ ಲಿಯೋನ್ ಜೊತೆಗೆ ಚಿತ್ರತಂಡ ಈಗಾಗಲೇ ಒಂದು ಸುತ್ತಿನ ಮಾತುಕಥೆ ಮುಗಿಸಿದೆ. ಅವರು ಈ ಒಂದು ಐಟಂ ಸಾಂಗ್ನಲ್ಲಿ ಹೆಜ್ಜೆ ಹಾಕಲು ಬರೋಬ್ಬರಿ 50 ಲಕ್ಷ ರೂ. ಸಂಭಾವನೆ ಕೇಳುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.
ಇದನ್ನೂ ಓದಿ: ಕಮಲ್ ಹಾಸನ್ ಎದುರುಹಾಕಿಕೊಂಡ ಮಲಯಾಳಂ ನಟ ಫಹಾದ್ ಫಾಸಿಲ್