AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಬಗ್ಗೆ ಸುಳ್ಳು ಸುದ್ದಿ ಯೂಟ್ಯೂಬ್ ವಿರುದ್ಧ ದೂರು ದಾಖಲು

Megastar Chiranjeevi: ಕೆಲವು ಯೂಟ್ಯೂಬ್ ಚಾನೆಲ್​​ಗಳಂತೂ ವೀವ್ಸ್​ಗಾಗಿ ಸಿನಿಮಾ ನಟ-ನಟಿಯರಿಗೆ ಸಂಬಂಧಿಸಿದ ಅತಿ ರಂಜಿತ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತವೆ. ಹಲವು ಸಿನಿಮಾ ನಟ-ನಟಿಯರು ಇಂಥಹಾ ಚಾನೆಲ್​​ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಿದೆ. ಆದರೆ ಈ ಕುಕೃತ್ಯ ದಕ್ಷಿಣ ಭಾರತದಲ್ಲಿ ತುಸು ಕಡಿಮೆ ಇತ್ತು. ಆದರೆ ಇದೀಗ ಮೆಗಾಸ್ಟಾರ್ ಚಿರಂಜೀವಿ ಕುರಿತು ಸುಳ್ಳು ಸುದ್ದಿ ಮತ್ತು ತಿರುಚಿದ ವಿಡಿಯೋಗಳನ್ನು ಯೂಟ್ಯೂಬ್ ಚಾನೆಲ್ ಒಂದು ಹಂಚಿಕೊಂಡಿದ್ದು, ಚಾನೆಲ್ ವಿರುದ್ಧ ದೂರು ದಾಖಲಾಗಿದೆ.

ಚಿರಂಜೀವಿ ಬಗ್ಗೆ ಸುಳ್ಳು ಸುದ್ದಿ ಯೂಟ್ಯೂಬ್ ವಿರುದ್ಧ ದೂರು ದಾಖಲು
Megastar Chiranjeevi
ಮಂಜುನಾಥ ಸಿ.
|

Updated on: May 27, 2026 | 12:08 PM

Share

ಸಿನಿಮಾ (Cinema) ನಟ-ನಟಿಯರ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಸಾಮಾಜಿಕ ಜಾಲತಾಣಗಳ ಈ ಕಾಲದಲ್ಲಿ ಸುಳ್ಳು ಸುದ್ದಿಗಳು ಬಹು ಬೇಗ ಹರಡುತ್ತವೆ. ಕೆಲವು ಯೂಟ್ಯೂಬ್ ಚಾನೆಲ್​​ಗಳಂತೂ ವೀವ್ಸ್​ಗಾಗಿ ಸಿನಿಮಾ ನಟ-ನಟಿಯರಿಗೆ ಸಂಬಂಧಿಸಿದ ಅತಿ ರಂಜಿತ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತವೆ. ಹಲವು ಸಿನಿಮಾ ನಟ-ನಟಿಯರು ಇಂಥಹಾ ಚಾನೆಲ್​​ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಿದೆ. ಆದರೆ ಈ ಕುಕೃತ್ಯ ದಕ್ಷಿಣ ಭಾರತದಲ್ಲಿ ತುಸು ಕಡಿಮೆ ಇತ್ತು. ಆದರೆ ಇದೀಗ ಮೆಗಾಸ್ಟಾರ್ ಚಿರಂಜೀವಿ ಕುರಿತು ಸುಳ್ಳು ಸುದ್ದಿ ಮತ್ತು ತಿರುಚಿದ ವಿಡಿಯೋಗಳನ್ನು ಯೂಟ್ಯೂಬ್ ಚಾನೆಲ್ ಒಂದು ಹಂಚಿಕೊಂಡಿದ್ದು, ಚಾನೆಲ್ ವಿರುದ್ಧ ದೂರು ದಾಖಲಾಗಿದೆ.

ಯೂಟ್ಯೂಬ್ ಚಾನೆಲ್ ಒಂದು ಚಿರಂಜೀವಿ ಅವರ ತಿದ್ದಿದ ಚಿತ್ರಗಳನ್ನು ಬಳಸಿ ನಟನ ಬಗ್ಗೆ ಸುಳ್ಳು ಸುದ್ದಿ ಹರಿಡಿಸುತ್ತಿರುವ ಕುರಿತಾಗಿ ವಕೀಲರೊಬ್ಬರು ಪೊಲೀಸರಿಗೆ ದೂರು ದಾಖಲಿಸಿದ್ದು, ಜೂಬ್ಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್ ಚಾನೆಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಯೂಟ್ಯೂಬ್ ಚಾನೆಲ್​​ಗೆ ಸಂಬಂಧಿಸಿದ ಮಾಹಿತಿ ಜೊತೆಗೆ ಕೆಲವು ಸ್ಕ್ರೀನ್ ಶಾಟ್​​ಗಳು ಮತ್ತು ವಿಡಿಯೋಗಳನ್ನು ವಕೀಲ ರಾಮಕೃಷ್ಣ ಮಿರಿಯಾಲ ಅವರು ಪೊಲೀಸರಿಗೆ ನೀಡಿದ್ದಾರೆ. ವಕೀಲರ ದೂರು ಆಧರಿಸಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:‘ಪೆದ್ದಿ’ ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್

ಮೆಗಾಸ್ಟಾರ್ ಚಿರಂಜೀವಿ ಭಾರತದ ಸೂಪರ್ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿದ್ದು, ಸಿನಿಮಾಗಳಲ್ಲಿ ನಟಿಸುವ ಜೊತೆಗೆ ಹಲವು ಸಾಮಾಜಿಕ ಕಾರ್ಯಗಳಲ್ಲಿಯೂ ಸಹ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆದರೆ ಅವರ ಆಸ್ತಿ, ಸಿನಿಮಾ, ಕುಟುಂಬದ ಬಗ್ಗೆ ಹಾಗೂ ವ್ಯಕ್ತಿತ್ವದ ಬಗ್ಗೆ ಸುಳ್ಳು ಸುದ್ದಿಗಳನ್ನು ಯೂಟ್ಯೂಬ್ ಚಾನೆಲ್​​ನಲ್ಲಿ ಹರಿಬಿಡಲಾಗಿತ್ತಂತೆ. ಈ ಬಗ್ಗೆ ಚಿರಂಜೀವಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ಇದೀಗ ಕಾನೂನಾತ್ಮಕವಾಗಿ ಯೂಟ್ಯೂಬ್ ಚಾನೆಲ್ ಅನ್ನು ಬಂದ್ ಮಾಡುವ ಪ್ರಯತ್ನ ಚಾಲ್ತಿಯಲ್ಲಿದೆ.

ಚಿರಂಜೀವಿ ನಟನೆಯ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಇದೇ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ‘ವಿಶ್ವಂಭರ’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು ಆ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಅದರ ಜೊತೆಗೆ ನಿರ್ದೇಶಕ ಬಾಬಿ ಜೊತೆಗೆ ಒಂದು ಸಿನಿಮಾನಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಒದೆಲ ನಿರ್ದೇಶನ ಮಾಡಲಿರುವ ಮತ್ತೊಂದು ಸಿನಿಮಾನಲ್ಲಿ ಚಿರಂಜೀವಿ ನಟಿಸುತ್ತಿದ್ದು ಆ ಸಿನಿಮಾವನ್ನು ಕೆವಿಎನ್ ನಿರ್ಮಾಣ ಮಾಡುತ್ತಿದೆ. ಇನ್ನೂ ಕೆಲವು ಸಿನಿಮಾಗಳು ಚಿರಂಜೀವಿ ಕೈಯಲ್ಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ
ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ನನ್ನ 1 ವರ್ಷದ ಸಂಬಳ ಕೊಡ್ತೇನೆ
Live: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ KPCC ವತಿಯಿಂದ ಪ್ರತಿಭಟನೆ
Live: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ KPCC ವತಿಯಿಂದ ಪ್ರತಿಭಟನೆ