AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ ಬಿಂದು ಘೋಷ್ ಇನ್ನಿಲ್ಲ; ದೀರ್ಘಕಾಲದ ಅನಾರೋಗ್ಯದಿಂದ ನಿಧನ

ಹಾಸ್ಯ ಪಾತ್ರಗಳ ಮೂಲಕ ಬಿಂದು ಘೋಷ್ ಅವರು ಗುರುತಿಸಿಕೊಂಡಿದ್ದರು. ಕಮಲ್ ಹಾಸನ್, ರಜನಿಕಾಂತ್, ಶಿವಾಜಿ ಗಣೇಶನ್, ಪ್ರಭು ಗಣೇಶನ್, ವಿಜಯಕಾಂತ್ ಮುಂತಾದ ನಟರ ಜೊತೆ ಬಿಂದು ಘೋಷ್ ಅವರು ಅಭಿನಯಿಸಿದ್ದರು. ಹಲವು ತಿಂಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು (ಮಾರ್ಚ್​ 16) ನಿಧನರಾಗಿದ್ದಾರೆ.

ಹಿರಿಯ ನಟಿ ಬಿಂದು ಘೋಷ್ ಇನ್ನಿಲ್ಲ; ದೀರ್ಘಕಾಲದ ಅನಾರೋಗ್ಯದಿಂದ ನಿಧನ
Bindu Ghosh
ಮದನ್​ ಕುಮಾರ್​
|

Updated on: Mar 16, 2025 | 10:29 PM

Share

ದಕ್ಷಿಣ ಭಾರತದ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದ ನಟಿ ಬಿಂದು ಘೋಷ್ (Bindu Ghosh) ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಅವರು ಭಾನುವಾರ (ಮಾ.16) ಕೊನೆಯುಸಿರು ಎಳೆದಿದ್ದಾರೆ. ಬಿಂದು ಘೋಷ್ ನಿಧನದಿಂದ ಅವರ ಆಪ್ತರಿಗೆ ಮತ್ತು ಅಭಿಮಾನಿಗಳಿಗೆ ನೋವಾಗಿದೆ. ಸೋಶಿಯಲ್ ಮೀಡಿಯಾ ಮೂಲಕ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಬಿಂದು ಘೋಷ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ತಮಿಳು ಚಿತ್ರರಂಗದಲ್ಲಿ ಬಿಂದು ಘೋಷ್ ಅವರು ಹೆಚ್ಚು ಸಕ್ರಿಯವಾಗಿದ್ದರು. ತಮಿಳು ಮಾತ್ರಲ್ಲದೇ ತೆಲುಗು, ಮಲಯಾಳ ಸಿನಿಮಾಗಳಲ್ಲಿ ಕೂಡ ಅವರು ನಟಿಸಿದ್ದರು. 1982ರಲ್ಲಿ ಅವರು ಸಿನಿಮಾ ರಂಗಕ್ಕೆ ಕಾಲಿಟ್ಟರು. ಅವರು ನಟಿಸಿದ ಮೊದಲ ಸಿನಿಮಾ ‘ಕೋಳಿ ಕೂವುದು’. ಆ ಚಿತ್ರದಲ್ಲಿ ಅವರು ಪ್ರಭು ಗಣೇಶನ್ ಜೊತೆ ನಟಿಸಿದ್ದರು.

ಮೊದಲ ಸಿನಿಮಾದ ನಂತರ ಬಿಂದು ಘೋಷ್ ಅವರಿಗೆ ಸಾಕಷ್ಟು ಅವಕಾಶಗಳು ಸಿಕ್ಕವು. ಉರುವಂಗಲ್ ಮಲರಂ, ಡೌರಿ ಕಲ್ಯಾಣಂ, ತಲೈ ಮಗನ್, ಸೂರಕೊಟ್ಟೈ ಸಿಂಗಕುಟ್ಟಿ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದರು. ರಜನಿಕಾಂತ್, ಕಮಲ್ ಹಾಸನ್, ಶಿವಾಜಿ ಗಣೇಶನ್, ವಿಜಯಕಾಂತ್, ಪ್ರಭು ಗಣೇಶನ್ ಮುಂತಾದ ನಟರ ಜೊತೆ ಬಿಂದು ಘೋಷ್ ಅವರು ಅಭಿನಯಿಸಿದ್ದರು.

‘ವೇಳೈ ಪುರ ಒಂಡ್ರು’ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತು. ಅವರ ಹಾಸ್ಯ ಮತ್ತು ಡ್ಯಾನ್ಸ್ ಪರ್ಫಾರ್ಮೆನ್ಸ್ ಕೂಡ ಸಾಕಷ್ಟು ಮನರಂಜನೆ ನೀಡಿತ್ತು. ವಿಶೇಷವಾದ ಡೈಲಾಗ್ ಡೆಲಿವರಿ ಮತ್ತು ಆಂಗಿಕ ಅಭಿನಯದ ಮೂಲಕ ಬಿಂದು ಅವರು ಮನೆಮಾತಾಗಿದ್ದರು.

ಇದನ್ನೂ ಓದಿ: ಭಾರತೀಯ ಚಿತ್ರರಂಗಕ್ಕೆ ಅನರ್ಘ್ಯ ರತ್ನ ಹುಡುಕಿ ಕೊಟ್ಟ ನಿರ್ಮಾಪಕಿ, ನಟಿ ನಿಧನ

ಬಿಂದು ಘೋಷ್ ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರ ನಿಧನದ ಸುದ್ದಿಯನ್ನು ಕುಟುಂಬದವರು ಖಚಿತಪಡಿಸಿದ್ದಾರೆ. ಬಿಂದು ಇನ್ನಿಲ್ಲ ಎಂಬುದನ್ನು ತಿಳಿದು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಅನಾರೋಗ್ಯಕ್ಕೆ ಒಳಗಾದ ಬಿಂದು ಅವರಿಗೆ ಆರ್ಥಿಕ ಸಂಕಷ್ಟ ಕೂಡ ಉಂಟಾಗಿತ್ತು. ಅವರ ಚಿಕಿತ್ಸೆಗೆ ಚಿತ್ರರಂಗದ ಕೆಲವರು ಸಹಾಯ ಮಾಡಿದ್ದರು. ನಟ ಬಾಲ, ರಿಚರ್ಡ್​ ಮತ್ತು ರಾಮಲಿಂಗಂ ಅವರು ಆರ್ಥಿಕ ಬೆಂಬಲ ನೀಡಿದ್ದಕ್ಕೆ ಬಿಂದು ಅವರು ಧನ್ಯವಾದ ತಿಳಿಸಿದ್ದರು.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!