AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಕೈಯಿಂದ ಮೊಬೈಲ್​ ಕಿತ್ತುಕೊಂಡ ಯುವಕ; ಹೇಗಿತ್ತು ನಟಿಯ ರಿಯಾಕ್ಷನ್​?

Rashmika Mandanna Viral Video: ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಮೊಬೈಲ್​ ಅನ್ನು ರಶ್ಮಿಕಾ ಮಂದಣ್ಣ ಹಿಡಿದುಕೊಂಡರು. ಆಗ ಅದನ್ನು ಆತ ವಾಪಸ್​ ಕಿತ್ತುಕೊಂಡಿದ್ದಾನೆ.

Rashmika Mandanna: ರಶ್ಮಿಕಾ ಮಂದಣ್ಣ ಕೈಯಿಂದ ಮೊಬೈಲ್​ ಕಿತ್ತುಕೊಂಡ ಯುವಕ; ಹೇಗಿತ್ತು ನಟಿಯ ರಿಯಾಕ್ಷನ್​?
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on:Jul 11, 2023 | 10:58 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿರುವ ಅವರು ಹೆಚ್ಚಾಗಿ ಮುಂಬೈನಲ್ಲೇ ಇರುತ್ತಾರೆ. ಅವರನ್ನು ಕಂಡಾಗಲೆಲ್ಲ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಒಂದೇ ಒಂದು ಸೆಲ್ಫಿ ಸಿಕ್ಕರೂ ಸಾಕು ಎಂದು ಜನರು ಬಯಸುತ್ತಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಮುಂಬೈನಲ್ಲಿ ಶೂಟಿಂಗ್​ ಮಾಡುವಾಗ ಹಾಗೆಯೇ ಆಯಿತು. ಅವರ ಕ್ಯಾರವ್ಯಾನ್​ ಎದುರು ಒಂದಷ್ಟು ಅಭಿಮಾನಿಗಳು (Rashmika Mandanna Fans) ಜಮಾಯಿಸಿದ್ದರು. ಕ್ಯಾರವ್ಯಾನ್​ನಿಂದ ಹೊರಬಂದ ರಶ್ಮಿಕಾ ಅವರು ಎಲ್ಲರಿಗೂ ತಾಳ್ಮೆಯಿಂದ ಸೆಲ್ಫಿ ನೀಡುತ್ತಿದ್ದರು. ಅಭಿಮಾನಿಯೊಬ್ಬನು ರಶ್ಮಿಕಾ ಅವರ ಕೈಯಲ್ಲಿದ್ದ ಮೊಬೈಲ್​ ಕಿತ್ತುಕೊಂಡಿದ್ದಾನೆ. ಆ ವಿಡಿಯೋ (Rashmika Mandanna Viral Video) ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಸೆಲೆಬ್ರಿಟಿಗಳ ಜೊತೆ ಅಭಿಮಾನಿಗಳು ಕೆಲವೊಮ್ಮೆ ಮಿತಿ ಮೀರಿ ನಡೆದುಕೊಳ್ಳುತ್ತಾರೆ. ಆಗ ಅವರಿಗೆ ಕೋಪ ಬರುವುದು ಸಹಜ. ಆದರೆ ರಶ್ಮಿಕಾ ಮಂದಣ್ಣ ಅವರು ಕೋಪ ಮಾಡಿಕೊಂಡಿಲ್ಲ. ಆ ಪರಿಸ್ಥಿತಿಯನ್ನು ಅವರು ತುಂಬ ಕೂಲ್​ ಆಗಿ ನಿಭಾಯಿಸಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಮೊಬೈಲ್​ ಅನ್ನು ರಶ್ಮಿಕಾ ಹಿಡಿದುಕೊಂಡರು. ಆಗ ಅದನ್ನು ಆತ ವಾಪಸ್​ ಕಿತ್ತುಕೊಂಡಿದ್ದಾನೆ. ಆ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಅವರು ನಗುತ್ತಲೇ ಪ್ರತಿಕ್ರಿಯಿಸಿದ್ದಾರೆ. ಅವರು ಖಾರವಾಗಿ ರಿಯಾಕ್ಷನ್​ ನೀಡಿಲ್ಲ.

‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ರಶ್ಮಿಕಾ ಮಂದಣ್ಣ ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆದರು. ದಕ್ಷಿಣ ಭಾರತದ ಚಿತ್ರರಂಗ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ಅವರಿಗೆ ಬೇಡಿಕೆ ಇದೆ. ರಣಬೀರ್​ ಕಪೂರ್​ ಜೊತೆ ಅವರು ‘ಅನಿಮಲ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಸಂದೀಪ್​ ರೆಡ್ಡಿ ವಂಗ ನಿರ್ದೇಶನ ಮಾಡಿರುವ ಈ ಸಿನಿಮಾ ಡಿಸೆಂಬರ್​ 1ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Rashmika Mandanna: ಬ್ರೇಕಪ್​ ಸುಳಿವು ನೀಡಿದ ರಶ್ಮಿಕಾ ಮಂದಣ್ಣ: ನಟಿಯ ಜೀವನದಿಂದ ಈಗ ದೂರಾಗಿದ್ದು ಯಾರು?

ಸದ್ಯಕ್ಕೆ ರಶ್ಮಿಕಾ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲು ಅರ್ಜುನ್​ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಅನೇಕ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಹಲವು ಪ್ರತಿಷ್ಠಿತ ಕಂಪನಿಗಳಿಗೆ ರಶ್ಮಿಕಾ ಮಂದಣ್ಣ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಹತ್ತು ಹಲವು ಜಾಹೀರಾತುಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದು, ಅವುಗಳ ಶೂಟಿಂಗ್​ನಲ್ಲೂ ಬ್ಯುಸಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:57 am, Tue, 11 July 23

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!