ಐದು ಕಡೆ ಐಷಾರಾಮಿ ಅಪಾರ್ಟ್​ಮೆಂಟ್ ಹೊಂದಿದ್ದಾರೆ ರಶ್ಮಿಕಾ ಮಂದಣ್ಣ? ಸ್ಪಷ್ಟನೆ ನೀಡಿದ ನಟಿ

ರಶ್ಮಿಕಾ ಮಂದಣ್ಣ ಅವರು 2016ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು. 2016ರಲ್ಲಿ ‘ಕಿರಿಕ್ ಪಾರ್ಟಿ’ ಸಿನಿಮಾ ತೆರೆಗೆ ಬಂತು. ಆ ಬಳಿಕ ಎರಡು ಕನ್ನಡ ಸಿನಿಮಾದಲ್ಲಿ ನಟಿಸಿದರು. ನಂತರ ಅವರು ಹಾರಿದ್ದು ಟಾಲಿವುಡ್​ಗೆ.

ಐದು ಕಡೆ ಐಷಾರಾಮಿ ಅಪಾರ್ಟ್​ಮೆಂಟ್ ಹೊಂದಿದ್ದಾರೆ ರಶ್ಮಿಕಾ ಮಂದಣ್ಣ? ಸ್ಪಷ್ಟನೆ ನೀಡಿದ ನಟಿ
ರಶ್ಮಿಕಾ ಮಂದಣ್ಣ
Edited By:

Updated on: Feb 11, 2023 | 7:42 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಬೇಡಿಕೆ ದಿನ ಕಳೆದಂತೆ ಹೆಚ್ಚುತ್ತಿದೆ. ಅವರು ಈ ವರ್ಷದ ಆರಂಭದಲ್ಲೇ ಎರಡು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಸದ್ಯ ಅವರ ಕೈಯಲ್ಲಿ ಎರಡು ದೊಡ್ಡ ಪ್ರಾಜೆಕ್ಟ್ ಇದೆ. ವೃತ್ತಿ ಜೀವನದಲ್ಲಿ ಅವರು ಹಲವು ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಇದರ ಜತೆಗೆ ಹಲವು ವದಂತಿಗಳು ಅವರ ಬಗ್ಗೆ ಹುಟ್ಟಿಕೊಂಡಿವೆ. ಎಲ್ಲದಕ್ಕೂ ರಶ್ಮಿಕಾ ಸ್ಪಷ್ಟನೆ ನೀಡುವ ಗೋಜಿಗೆ ಹೋಗುವುದಿಲ್ಲ. ಕೆಲವೇ ಕೆಲವು ವಿಚಾರಗಳಲ್ಲಿ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಈಗ ರಶ್ಮಿಕಾ ಒಂದು ವಿಚಾರಕ್ಕೆ ಉತ್ತರ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು 2016ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು. 2016ರಲ್ಲಿ ‘ಕಿರಿಕ್ ಪಾರ್ಟಿ’ ಸಿನಿಮಾ ತೆರೆಗೆ ಬಂತು. ಆ ಬಳಿಕ ಎರಡು ಕನ್ನಡ ಸಿನಿಮಾದಲ್ಲಿ ನಟಿಸಿದರು. ನಂತರ ಅವರು ಹಾರಿದ್ದು ಟಾಲಿವುಡ್​ಗೆ. ಮಹೇಶ್ ಬಾಬು, ನಿತೀನ್, ಅಲ್ಲು ಅರ್ಜುನ್ ಮೊದಲಾದವರ ಜತೆ ತೆರೆ ಹಂಚಿಕೊಂಡರು. ಅವರು ಪ್ರತಿ ಚಿತ್ರಕ್ಕೆ ಕೋಟಿ ಕೋಟಿ ರೂಪಾಯಿ ಪಡೆದುಕೊಳ್ಳುತ್ತಾರೆ. ಅವರು ಹೈದರಾಬಾದ್, ಮುಂಬೈ ಮೊದಲಾದ ಕಡೆಗಳಲ್ಲಿ ಮನೆ ಹೊಂದಿದ್ದಾರೆ ಎನ್ನಲಾಗಿತ್ತು. ಈಗ ಈ ವಿಚಾರದಲ್ಲಿ ರಶ್ಮಿಕಾ ಸ್ಪಷ್ಟನೆ ನೀಡಿದ್ದಾರೆ.

‘ರಶ್ಮಿಕಾ ಮಂದಣ್ಣ ಅವರು ಐದು ವರ್ಷದ ವೃತ್ತಿ ಜೀವನದಲ್ಲಿ ಐದು ಕಡೆಗಳಲ್ಲಿ ಐದು ಐಷಾರಾಮಿ ಅಪಾರ್ಟ್​​ಮೆಂಟ್ ಹೊಂದಿದ್ದಾರೆ. ಹೈದರಾಬಾದ್, ಗೋವಾ, ಕೂರ್ಗ್​, ಮುಂಬೈ ಹಾಗೂ ಬೆಂಗಳೂರಿನಲ್ಲಿ ಮನೆ ಇದೆ. 2021ರಲ್ಲಿ ಅವರು ಪ್ರಾಪರ್ಟಿಗಳ ಮೇಲೆ ಹೂಡಿಕೆ ಮಾಡಿದ್ದಾರೆ’ ಎಂದು ಟ್ರೋಲ್ ಪೇಜ್ ಒಂದರಲ್ಲಿ ಬರೆಯಲಾಗಿತ್ತು.

ಇದನ್ನೂ ಓದಿ
Mili Twitter Review: ಜಾನ್ವಿ ಕಪೂರ್​ ಅಭಿನಯಕ್ಕೆ ಕೇಳಿಬರ್ತಿದೆ ಮೆಚ್ಚುಗೆ; ‘ಮಿಲಿ’ ನೋಡಿ ವಿಮರ್ಶೆ ತಿಳಿಸಿದ ಸಿನಿಪ್ರಿಯರು
Gandhada Gudi Twitter Review: ಹೇಗಿದೆ ‘ಗಂಧದ ಗುಡಿ’?; ಪ್ರೀಮಿಯರ್​ ಶೋ ಬಳಿಕ ಟ್ವಿಟರ್​ ಮೂಲಕ ವಿಮರ್ಶೆ ತಿಳಿಸಿದ ಫ್ಯಾನ್ಸ್​
Ram Setu Twitter Review: ‘ರಾಮ್​ ಸೇತು’ ಟ್ವಿಟರ್​ ವಿಮರ್ಶೆ: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಜನರಿಂದ ಸಿಕ್ತಾ ಪ್ರಶಂಸೆ?
Goodbye Twitter Review: ರಶ್ಮಿಕಾ ಮೊದಲ ಹಿಂದಿ ಚಿತ್ರ ‘ಗುಡ್​ಬೈ’ ಹೇಗಿದೆ? ಜನರು ತಿಳಿಸಿದ ಟ್ವಿಟರ್ ವಿಮರ್ಶೆ ಇಲ್ಲಿದೆ ಓದಿ..

ಇದನ್ನೂ ಓದಿ: ಸೆಟ್​ನಲ್ಲಿ ರಶ್ಮಿಕಾ ಮಂದಣ್ಣ ವರ್ತನೆ ಕಂಡು ಅಚ್ಚರಿಗೊಂಡಿದ್ದ ಸಿದ್ದಾರ್ಥ್​ ಮಲ್ಹೋತ್ರ

ಇದಕ್ಕೆ ಉತ್ತರಿಸಿರುವ ರಶ್ಮಿಕಾ ಮಂದಣ್ಣ ಅವರು, ‘ಇದು ನಿಜವಾಗಲಿ ಎಂದು ನಾನು ಕೋರುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಉತ್ತರ ನೀಡಿದ್ದಾರೆ. ಈ ಮೂಲಕ ಇದೆಲ್ಲವೂ ಸುಳ್ಳು ಎಂದು ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ. ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಹಾಗೂ ‘ಅನಿಮಲ್’ ಸಿನಿಮಾ ಶೂಟಿಂಗ್​​ನಲ್ಲಿ ಬ್ಯುಸಿ ಇದ್ದಾರೆ. ವಿಶಾಖಪಟ್ಟಣದಲ್ಲಿ ‘ಪುಷ್ಪ 2’ ಶೂಟಿಂಗ್ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ