AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ದಿನಕ್ಕೆ ಸಾಯಿ ಪಲ್ಲವಿ, ನಾಗ ಚೈತನ್ಯ ವಿಶೇಷ ವಿಡಿಯೋ; ಮದುವೆ ಆಗಲು ಫ್ಯಾನ್ಸ್​ ಒತ್ತಾಯ

ಎರಡನೇ ಬಾರಿ ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ರಿಯಲ್​ ಲೈಫ್​ನಲ್ಲಿಯೂ ಅವರು ಜೋಡಿಯಾಗಬೇಕು ಎಂಬುದು ಅಭಿಮಾನಿಗಳ ಆಸೆ. ಫ್ಯಾನ್ಸ್ ಆಸೆಗೆ ನೀರೆರೆಯುವ ರೀತಿಯಲ್ಲಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ಪ್ರೇಮಿಗಳ ದಿನದಂದು ವಿಶೇಷವಾದ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದು ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಪ್ರೇಮಿಗಳ ದಿನಕ್ಕೆ ಸಾಯಿ ಪಲ್ಲವಿ, ನಾಗ ಚೈತನ್ಯ ವಿಶೇಷ ವಿಡಿಯೋ; ಮದುವೆ ಆಗಲು ಫ್ಯಾನ್ಸ್​ ಒತ್ತಾಯ
ನಾಗ ಚೈತನ್ಯ, ಸಾಯಿ ಪಲ್ಲವಿ
ಮದನ್​ ಕುಮಾರ್​
|

Updated on: Feb 14, 2024 | 6:00 PM

Share

ಸಮಂತಾ ರುತ್​ ಪ್ರಭು ಅವರಿಗೆ ವಿಚ್ಛೇದನ ನೀಡಿರುವ ನಟ ನಾಗ ಚೈತನ್ಯ (Naga Chaitanya) ಅವರು ಈಗ ಯಾರನ್ನು ಮದುವೆ ಆಗಬಹುದು ಎಂಬುದನ್ನು ತಿಳಿಯುವ ಕೌತುಕ ಎಲ್ಲರಲ್ಲೂ ಇದೆ. ಶೋಭಿತಾ ಧೂಲಿಪಾಲ ಜೊತೆ ಅವರು ಸುತ್ತಾಡುತ್ತಿದ್ದಾರೆ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಅದೇನೇ ಇದ್ದರೂ ಅಭಿಮಾನಿಗಳ ಆಸೆ ಬೇರೆಯೇ ಇದೆ. ಸಾಯಿ ಪಲ್ಲವಿ (Sai Pallavi) ಜೊತೆ ನಾಗ ಚೈತನ್ಯ ಮದುವೆಯಾಗಲಿ ಎಂದು ಫ್ಯಾನ್ಸ್​ ಆಸೆಪಡುತ್ತಿದ್ದಾರೆ. ‘ವ್ಯಾಲೆಂಟೈನ್ಸ್​ ಡೇ’ (Valentine’s Day) ಸಂದರ್ಭದಲ್ಲಿ ಈ ಬಯಕೆಯನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ. ಅದಕ್ಕೆಲ್ಲ ಕಾರಣ ಆಗಿರುವುದು ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಹಂಚಿಕೊಂಡಿರುವ ಒಂದು ಸ್ಪೆಷಲ್​ ವಿಡಿಯೋ. ಇವರಿಬ್ಬರು ‘ತಂಡೇಲ್​’ ಸಿನಿಮಾದಲ್ಲಿ ಜೋಡಿಯಾಗಿ ನಟಿಸುತ್ತಿದ್ದಾರೆ.

ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ನಟಿಸುತ್ತಿರುವ ‘ತಂಡೇಲ್​’ ಸಿನಿಮಾದ ಟೀಸರ್​ ಒಂದಷ್ಟು ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಅದರಲ್ಲಿನ ಒಂದು ರೊಮ್ಯಾಂಟಿಕ್​ ಡೈಲಾಗ್​ಗೆ ಈಗ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರು ರೀಲ್ಸ್​ ಮಾಡಿದ್ದಾರೆ. ವಿಶೇಷವಾಗಿ ಪ್ರೇಮಿಗಳ ದಿನದಂದೇ ಅದನ್ನು ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.

ಸಾಯಿ ಪಲ್ಲವಿ ಜೊತೆ ಆಮಿರ್​ ಖಾನ್​ ಮಗನ ಸುತ್ತಾಟ; ಫೋಟೋ ವೈರಲ್​

‘ನಿಮ್ಮಿಬ್ಬರ ಜೋಡಿ ತುಂಬ ಚೆನ್ನಾಗಿ ಕಾಣುತ್ತಿದೆ’ ಎಂದು ಕೆಲವರು ಅಭಿಪ್ರಾಯ ತಿಳಿಸಿದ್ದಾರೆ. ‘ಅಣ್ಣಾ ನೀವು ಸಾಯಿ ಪಲ್ಲವಿ ಅವರನ್ನೇ ಮದುವೆ ಆಗಿ. ಅವರು ನಿಮಗೆ ತುಂಬ ಚೆನ್ನಾಗಿ ಜೋಡಿಯಾಗುತ್ತಾರೆ’ ಎಂದು ಮತ್ತೋರ್ವ ಅಭಿಮಾನಿ ಕಮೆಂಟ್​ ಮಾಡಿದ್ದಾರೆ. ಈ ರೀತಿಯ ಕಮೆಂಟ್​ಗಳಿಗೆ ಸಾಯಿ ಪಲ್ಲವಿ ಅವರಾಗಲಿ, ನಾಗ ಚೈತನ್ಯ ಅವರಾಗಲಿ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಒಟ್ಟಿನಲ್ಲಿ ವ್ಯಾಲೆಂಟೈನ್ಸ್​ ಡೇ ಪ್ರಯುಕ್ತ ಹಂಚಿಕೊಂಡ ಈ ವಿಡಿಯೋ ಸಖತ್​ ವೈರಲ್​ ಆಗಿದೆ.

ಈ ಮೊದಲು ‘ಲವ್​ ಸ್ಟೋರಿ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಮತ್ತು ನಾಗ ಚೈತನ್ಯ ಅವರು ಜೋಡಿಯಾಗಿ ನಟಿಸಿದ್ದರು. ಈಗ ಅವರು ಎರಡನೇ ಬಾರಿಗೆ ‘ತಂಡೇಲ್​’ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಲವ್ ಸ್ಟೋರಿ ಮತ್ತು ದೇಶಭಕ್ತಿಯ ಕಹಾನಿ ಈ ಸಿನಿಮಾದಲ್ಲಿ ಇರಲಿದೆ. ಟೀಸರ್​ ನೋಡಿದ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಒಂದು ದೊಡ್ಡ ಗೆಲುವಿಗಾಗಿ ನಾಗ ಚೈತನ್ಯ ಕಾದಿದ್ದಾರೆ. ‘ತಂಡೇಲ್​’ ಸಿನಿಮಾ ಮೂಲಕ ಅವರಿಗೆ ಆ ಗೆಲುವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್