ಸೈಫ್ ಅಲಿ ಖಾನ್ ವಿಚಾರದಲ್ಲಿ ಜೂನಿಯರ್ ಎನ್​ಟಿಆರ್ ಅಭಿಮಾನಿಗಳಿಗೆ ಶುರುವಾಗಿದೆ ಟೆನ್ಷನ್

ಸೈಫ್ ಅಲಿ ಖಾನ್ ಅವರನ್ನು ಚಿತ್ರಕ್ಕೆ ಸೇರ್ಪಡೆ ಮಾಡಿಕೊಂಡು ಹಿಂದಿ ಭಾಗದಲ್ಲಿ ಚಿತ್ರಕ್ಕೆ ಮೈಲೇಜ್ ಪಡೆಯುವ ಆಲೋಚನೆಯಲ್ಲಿ ‘ಆದಿಪುರುಷ್’ ಚಿತ್ರದವರು ಇದ್ದರು. ಆದರೆ, ಲೆಕ್ಕಾಚಾರ ಉಲ್ಟಾ ಆಗಿತ್ತು.

ಸೈಫ್ ಅಲಿ ಖಾನ್ ವಿಚಾರದಲ್ಲಿ ಜೂನಿಯರ್ ಎನ್​ಟಿಆರ್ ಅಭಿಮಾನಿಗಳಿಗೆ ಶುರುವಾಗಿದೆ ಟೆನ್ಷನ್
ಸೈಫ್​ ಅಲಿ ಖಾನ್-ಜೂನಿಯರ್ ಎನ್​ಟಿಆರ್
Follow us
ರಾಜೇಶ್ ದುಗ್ಗುಮನೆ
|

Updated on: Jul 13, 2023 | 1:59 PM

ಸೈಫ್ ಅಲಿ ಖಾನ್ (Saif Ali Khan) ಅವರು ಬಾಲಿವುಡ್​ನಲ್ಲಿ ಬೇಡಿಕೆ ಹೊಂದಿದ್ದಾರೆ. ಈಗ ಅವರು ದಕ್ಷಿಣ ಭಾರತಕ್ಕೂ ಕಾಲಿಟ್ಟಿದ್ದಾರೆ. ‘ಆದಿಪುರುಷ್’ ಸಿನಿಮಾ ಮೂಲಕ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರು ಮಾಡಿದ ರಾವಣನ ಪಾತ್ರ ಟೀಕೆಗೆ ಒಳಗಾಗಿತ್ತಾದರೂ, ಅವರ ನಟನೆಯನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಈಗ ‘ದೇವರ’ (Devara Movie) ಚಿತ್ರದಲ್ಲಿ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಹೀಗಿರುವಾಗಲೇ ಅಭಿಮಾನಿಗಳಿಗೆ ಒಂದು ಟೆನ್ಷನ್ ಶುರುವಾಗಿದೆ. ಇದಕ್ಕೆ ಚಿತ್ರತಂಡದವರು ಇನ್ನಷ್ಟೇ ಸ್ಪಷ್ಟನೆ ನಿಡಬೇಕಿದೆ.

ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾ ಟ್ರೆಂಡ್ ಜೋರಾಗಿದೆ. ಸ್ಟಾರ್ ಹೀರೋಗಳು ತಮ್ಮ ಸಿನಿಮಾನ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ಹೆಚ್ಚು ಒತ್ತು ನೀಡುತ್ತಿದ್ದಾರೆ. ದಕ್ಷಿಣದ ಸಿನಿಮಾಗಳು ಬಾಲಿವುಡ್​ನಲ್ಲಿ ಹೆಚ್ಚು ಸದ್ದು ಮಾಡಲಿ ಎಂಬ ಕಾರಣಕ್ಕೆ ಹಿಂದಿ​ ಹೀರೋ/ಹೀರೋಯಿನ್​​ಗಳನ್ನು ಕರೆತರಲಾಗುತ್ತಿದೆ. ‘ಆದಿಪುರುಷ್’ ಚಿತ್ರದವರೂ ಇದೇ ರೀತಿ ಆಲೋಚಿಸಿದ್ದರು. ಸೈಫ್ ಅಲಿ ಖಾನ್ ಅವರನ್ನು ಚಿತ್ರಕ್ಕೆ ಸೇರ್ಪಡೆ ಮಾಡಿಕೊಂಡು ಹಿಂದಿ ಭಾಗದಲ್ಲಿ ಚಿತ್ರಕ್ಕೆ ಮೈಲೇಜ್ ಪಡೆಯುವ ಆಲೋಚನೆಯಲ್ಲಿದ್ದರು. ಆದರೆ, ಲೆಕ್ಕಾಚಾರ ಉಲ್ಟಾ ಆಗಿತ್ತು.

ಸೈಫ್ ಅಲಿ ಖಾನ್ ಅವರು ‘ಆದಿಪುರುಷ್’ ಚಿತ್ರದ ಪ್ರಚಾರದಲ್ಲಿ ಭಾಗಿ ಆಗಿಲ್ಲ. ಈ ಸಿನಿಮಾ ರಿಲೀಸ್ ಆಗುವ ಸಂದರ್ಭದಲ್ಲಿ ಅವರು ವಿದೇಶದಲ್ಲಿ ಪತ್ನಿ ಜೊತೆ ಸುತ್ತಾಡುತ್ತಿದ್ದರು. ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿದ ನಿರ್ಮಾಪಕರು ಇದರಿಂದ ನಷ್ಟ ಅನುಭವಿಸಿದರು. ಆದರೆ, ಸೈಫ್ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ. ಈಗ ಅವರು ‘ದೇವರ’ ಸಿನಿಮಾಗೂ ಹೀಗೇ ಮಾಡಿದರೆ ಹೇಗೆ ಎನ್ನುವ ಪ್ರಶ್ನೆ ಎದುರಾಗಿದೆ.

‘ದೇವರ’ ಸಿನಿಮಾ ತಂಡದ ಟೈಟಲ್ ರಿವೀಲ್ ಕಾರ್ಯಕ್ರಮಕ್ಕೆ, ಮುಹೂರ್ತಕ್ಕೆ ಸೈಫ್ ಬಂದಿರಲಿಲ್ಲ. ಸರ್ಪ್ರೈಸ್ ನೀಡಲು ತಂಡ ಈ ರೀತಿ ಮಾಡಿದೆ ಎಂದು ಎಲ್ಲರೂ ಭಾವಿಸಿದರು. ಅವರು ಸಿನಿಮಾ ಬಿಡುಗಡೆ ಸಂದರ್ಭದಲ್ಲಾದರೂ ಪ್ರಚಾರದಲ್ಲಿ ಭಾಗಿ ಆಗುತ್ತಾರಾ ಎನ್ನುವ ಪ್ರಶ್ನೆ ಶುರುವಾಗಿದೆ.

ಇದನ್ನೂ ಓದಿ: ಸೈಫ್ ಅಲಿ ಖಾನ್ ಅನ್ನು ಮರೆತ ಪ್ರಭಾಸ್ ಹಾಗೂ ಆದಿಪುರುಷ್ ತಂಡ: ಈ ಮರೆವು ಉದ್ದೇಶಪೂರ್ವಕವೇ?

ದಕ್ಷಿಣದಲ್ಲಿ ತಯಾರಾಗುವ ಪ್ಯಾನ್ ಇಂಡಿಯನ್ ಸಿನಿಮಾಗಳಿಗೆ ಉತ್ತರದಲ್ಲಿ ಪ್ರಚಾರ ಸಿಗಲು ಬಾಲಿವುಡ್ ಕಲಾವಿದರ ಉಪಸ್ಥಿತಿ ಸಹಾಯ ಮಾಡುತ್ತದೆ. ‘ಕೆಜಿಎಫ್ 2’ ಚಿತ್ರದಲ್ಲಿ ಸಂಜಯ್ ದತ್ ನಟಿಸಿದ್ದು ಸಾಕಷ್ಟು ಸಹಾಯ ಮಾಡಿತು. ಅದೇ ರೀತಿ ‘ದೇವರ’ ಸಿನಿಮಾ ಪ್ರಚಾರಕ್ಕೆ ಸೈಫ್ ಸಹಕಾರ ಸಿಕ್ಕರೆ ಅಭಿಮಾನಿಗಳಿಗೆ ಖುಷಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್