‘ಯಾತ್ರ 2’ ಪ್ರದರ್ಶನದ ವೇಳೆ ಪವನ್ ಕಲ್ಯಾಣ್-ಜಗನ್ ಅಭಿಮಾನಿಗಳ ನಡುವೆ ಮಾರಾಮಾರಿ

Yatra 2: ಆಂಧ್ರ ಪ್ರದೇಶ ಸಿಎಂ ಜಗನ್ ಅವರ ಜೀವನ ಆಧರಿಸಿದ ‘ಯಾತ್ರ 2’ ಸಿನಿಮಾ ಪ್ರದರ್ಶನದ ವೇಳೆ ಪವನ್ ಕಲ್ಯಾಣ್ ಅಭಿಮಾನಿಗಳು ಹಾಗೂ ಸಿಎಂ ಜಗನ್ ಅಭಿಮಾನಿಗಳು ಕೈ-ಕೈ ಮಿಲಾಯಿಸಿದ್ದಾರೆ. ವಿಡಿಯೋ ಇಲ್ಲಿದೆ.

‘ಯಾತ್ರ 2’ ಪ್ರದರ್ಶನದ ವೇಳೆ ಪವನ್ ಕಲ್ಯಾಣ್-ಜಗನ್ ಅಭಿಮಾನಿಗಳ ನಡುವೆ ಮಾರಾಮಾರಿ
Follow us
ಮಂಜುನಾಥ ಸಿ.
|

Updated on: Feb 08, 2024 | 7:08 PM

ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ರಾಜಕೀಯ ನಾಯಕರು ಸಿನಿಮಾಗಳನ್ನು ಪ್ರಚಾರಕ್ಕ ಬಳಸಿಕೊಳ್ಳುವುದು ಆಂಧ್ರದಲ್ಲಿ ತುಸು ಹೆಚ್ಚು. ಇತ್ತೀಚೆಗೆ ಈ ಟ್ರೆಂಡ್ ಬಾಲಿವುಡ್​ನಲ್ಲಿಯೂ ಆರಂಭವಾಗಿದೆ. ಇದೀಗ ಆಂಧ್ರ ಸಿಎಂ ಜಗನ್ ಅವರ ಜೀವನ ಆಧರಿಸಿದ ‘ಯಾತ್ರ 2’ (Yatra 2) ಸಿನಿಮಾ ಬಿಡುಗಡೆ ಆಗಿದೆ. ಬಿಡುಗಡೆ ಆದ ಮೊದಲ ದಿನವೇ ಸಿನಿಮಾ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳು ಹಾಗೂ ಸಿಎಂ ಜಗನ್ ಅಭಿಮಾನಿಗಳ ನಡುವೆ ಮಾರಾ-ಮಾರಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಹೈದರಾಬಾದ್​ನ ಪ್ರಸಾದ್ ಐಮ್ಯಾಕ್ಸ್​ನಲ್ಲಿ ‘ಯಾತ್ರ 2’ ಸಿನಿಮಾ ಪ್ರದರ್ಶನವಾಗುತ್ತಿತ್ತು. ಈ ವೇಳೆ ಪವನ್ ಕಲ್ಯಾಣ್ ಹಾಗೂ ಜಗನ್ ಅವರ ಅಭಿಮಾನಿಗಳ ನಡುವೆ ಜಗಳವಾಗಿದೆ. ಎರಡೂ ಕಡೆಯ ಗುಂಪಿನವರು ಪರಸ್ಪರ ಕೈ-ಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ. ಕೆಲವರಿಗೆ ಗಾಯಗಳಾಗಿವೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಂಧ್ರದ ಇನ್ನೂ ಕೆಲವೆಡೆ ಇಂಥಹುದೇ ಘಟನೆಗಳು ನಡೆದಿವೆ ಎನ್ನಲಾಗುತ್ತಿದೆ.

‘ಯಾತ್ರ 2’ ಸಿನಿಮಾದಲ್ಲಿ ಆಂಧ್ರ ಮಾಜಿ ಸಿಎಂ ರಾಜಶೇಖರ ರೆಡ್ಡಿ ಮರಣ ಅದರ ಬಳಿಕ ಪ್ರವರ್ಧಮಾನಕ್ಕೆ ಬಂದ ಜಗನ್ ಅವರ ಕತೆಯನ್ನು ಹೇಳಲಾಗಿದೆ. ಸಿನಿಮಾದಲ್ಲಿ ಜಗನ್​ರ ರಾಜಕೀಯ ಎದುರಾಳಿಗಳನ್ನು ವಿಲನ್ ರೀತಿ ಚಿತ್ರಿಸಲಾಗಿದ್ದು, ಜಗನ್ ಅನ್ನು ಹೀರೋ ರೀತಿಯಲ್ಲಿ ಬಿಂಬಿಸಲಾಗಿದೆ. ಜಗನ್​ ಹಾಗೂ ಕಾಂಗ್ರೆಸ್ ಹೈಕಮಾಂಡ್ ಜೊತೆ ತಿಕ್ಕಾಟ, ಪಾದಯಾತ್ರೆ, ಹೊಸ ಪಕ್ಷ ಸ್ಥಾಪನೆ, ಜೈಲು ವಾಸ ಇನ್ನಿತರೆ ಘಟನೆಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ:ಚುನಾವಣೆಗೆ ಬಳಿಕ ಬಿಡುಗಡೆ ಆಗಲಿದೆ ಪವನ್ ಕಲ್ಯಾಣ್ ಹೊಸ ಸಿನಿಮಾ

ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ‘ಯಾತ್ರ’ ಸಿನಿಮಾದ ಮೊದಲ ಭಾಗ ಬಿಡುಗಡೆ ಆಗಿತ್ತು. ರಾಜಶೇಖರ ರೆಡ್ಡಿ ಅವರ ರಾಜಕೀಯ ಪಯಣದ ಬಗೆಗಿನ ಕತೆಯನ್ನು ಆ ಸಿನಿಮಾ ಒಳಗೊಂಡಿತ್ತು. ರಾಜಶೇಖರ ರೆಡ್ಡಿಯ ಪಾದಯಾತ್ರೆ, ಸಿಎಂ ಆದ ಬಗೆ, ಸಿಎಂ ಆದ ಬಳಿಕ ತೆಗೆದುಕೊಂಡು ಬಂದ ಯೋಜನೆಗಳನ್ನು ಭಾವನಾತ್ಮಕವಾಗಿ ತೋರಿಸಲಾಗಿತ್ತು. ಕಳೆದ ಚುನಾವಣೆಯ ಜಗನ್ ಗೆಲುವಿನಲ್ಲಿ ಆ ಸಿನಿಮಾದ ಪಾತ್ರವೂ ಇದೆ. ಅದೇ ಕಾರಣಕ್ಕೆ ಈಗ ಚುನಾವಣೆ ಸಮೀಪಿಸುತ್ತಿದ್ದಂತೆ ‘ಯಾತ್ರ 2’ ಸಿನಿಮಾ ಬಿಡುಗಡೆ ಮಾಡಲಾಗಿದೆ.

‘ಯಾತ್ರ 2’ ಸಿನಿಮಾದಲ್ಲಿ ಜಗನ್ ಪಾತ್ರದಲ್ಲಿ ತಮಿಳಿನ ಜನಪ್ರಿಯ ನಟ ಜೀವ ನಟಿಸಿದ್ದಾರೆ. ಮಹೇಶ್ ಮಂಜ್ರೇಕರ್ ಚಂದ್ರಬಾಬು ನಾಯ್ಡು ಪಾತ್ರದಲ್ಲಿ ನಟಿಸಿದ್ದಾರೆ. ಜಗನ್​ರ ಪತ್ನಿಯ ಪಾತ್ರದಲ್ಲಿ ಕೇತಕಿ ನಾರಾಯಣ್ ನಟಿಸಿದ್ದಾರೆ. ಸಿನಿಮಾವನ್ನು ಮಹಿ ರಾಘವ್ ನಿರ್ದೇಶನ ಮಾಡಿದ್ದು, ನಿರ್ಮಾಣ ಮಾಡಿರುವುದು ಮೇಕ ಶಿವ. ಸಂಗೀತವನ್ನು ಸಂತೋಷ್ ನಾರಾಯಣ್ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ