ನಟ ಪ್ರಕಾಶ್​ ರಾಜ್​ಗೆ ಜೀವ ಬೆದರಿಕೆ ಹಾಕಿದ ಯೂಟ್ಯೂಬ್​ ವಾಹಿನಿ ವಿರುದ್ಧ ಎಫ್​ಐಆರ್​ ದಾಖಲು

ಬೆಂಗಳೂರಿನ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 506, 504, 505(2) ಸೆಕ್ಷನ್‌ ಅಡಿಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ. ಪ್ರಕಾಶ್ ರಾಜ್ ಮಾತ್ರವಲ್ಲದೇ ಅವರ ಕುಟುಂಬದವರಿಗೂ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯೂಟ್ಯೂಬ್​ ವಾಹಿನಿ ವಿರುದ್ಧ ದೂರು ನೀಡಲಾಗಿದೆ.

ನಟ ಪ್ರಕಾಶ್​ ರಾಜ್​ಗೆ ಜೀವ ಬೆದರಿಕೆ ಹಾಕಿದ ಯೂಟ್ಯೂಬ್​ ವಾಹಿನಿ ವಿರುದ್ಧ ಎಫ್​ಐಆರ್​ ದಾಖಲು
ಪ್ರಕಾಶ್​ ರಾಜ್
Follow us
Shivaprasad
| Updated By: ಮದನ್​ ಕುಮಾರ್​

Updated on: Sep 20, 2023 | 7:13 AM

ಬೆಂಗಳೂರು: ಖ್ಯಾತ ನಟ ಪ್ರಕಾಶ್​ ರಾಜ್​ (Prakash Raj) ಅವರು ಹಲವು ವಿವಾದಗಳನ್ನು ಮಾಡಿಕೊಂಡಿದ್ದಾರೆ. ಸಮಾಜದ ಅನೇಕ ಆಗುಹೋಗುಗಳ ಬಗ್ಗೆ ಅವರು ಮುಕ್ತವಾಗಿ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಅದರಿಂದ ಅವರು ಸದಾ ಕಾಲ ಚರ್ಚೆಯಲ್ಲಿ ಇರುತ್ತಾರೆ. ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಾರೆ. ಪ್ರಕಾಶ್​ ರಾಜ್​ ಅವರನ್ನು ಟೀಕಿಸುವ ದೊಡ್ಡ ವರ್ಗ ಕೂಡ ಇದೆ. ಒಂದಷ್ಟು ದಿನಗಳ ಹಿಂದೆ ಖ್ಯಾತ ಯೂಟ್ಯೂಬ್​ ವಾಹಿನಿಯಲ್ಲಿ ಪ್ರಕಾಶ್​ ರಾಜ್​ ವಿರುದ್ಧ ಜೀವ ಬೆದರಿಕೆ (Death Threat) ಹಾಕುವಂತಹ ವಿಡಿಯೋಗಳನ್ನು ಅಪ್​ಲೋಡ್​ ಮಾಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಪ್ರಕಾಶ್​ ರಾಜ್​ ದೂರು ನೀಡಿದ್ದರು. ಈಗ ಆ ಯೂಟ್ಯೂಬ್​ ವಾಹಿನಿ (YouTube Channel) ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ.

ಬೆಂಗಳೂರಿನ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 506, 504, 505(2) ಸೆಕ್ಷನ್‌ ಅಡಿಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ. ಯೂಟ್ಯೂಬ್​ ಚಾನೆಲ್​ನಲ್ಲಿ ಆಗಸ್ಟ್ 14ರಂದು ಜೀವ ಬೆದರಿಕೆ ಹಾಕುವ ಸಂದೇಶದ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಅಪ್ಲೋಡ್ ಮಾಡಿರುವ 2 ವಿಡಿಯೋಗಳಲ್ಲೂ ಬೆದರಿಕೆ ಹಾಕಲಾಗಿದೆ ಎಂದು ಪ್ರಕಾಶ್​ ರಾಜ್​ ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಚಂದ್ರಯಾನ 3’ ಬಗ್ಗೆ ಪ್ರಕಾಶ್​ ರಾಜ್​ ಮಾಡಿದ ಹಾಸ್ಯದ ಹಿಂದೆ ಬೇರೆಯದೇ ಕಥೆ ಇದೆ; ವಿವರಿಸಿದ ನಟ

ಪ್ರಕಾಶ್ ರಾಜ್ ಮಾತ್ರವಲ್ಲದೇ ಅವರ ಕುಟುಂಬದವರಿಗೂ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯೂಟ್ಯೂಬ್​ ವಾಹಿನಿ ವಿರುದ್ಧ ದೂರು ನೀಡಲಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಪ್ರಕಾಶ್ ರಾಜ್ ನೀಡಿದ ದೂರಿನ ಅನ್ವಯ ಯೂಟ್ಯೂಬ್ ವಾಹಿ‌ನಿಯ ಮುಖ್ಯಸ್ಥ ಮತ್ತು ಸಿಬ್ಬಂದಿ ವಿರುದ್ಧ ಅಶೋಕ ನಗರ ಠಾಣೆ ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. ಸದ್ಯ ತನಿಖೆ ಆರಂಭ ಆಗಿದೆ.

ಇದನ್ನೂ ಓದಿ: ‘ಜೈ ಭೀಮ್​’ಗೆ ರಾಷ್ಟ್ರ ಪ್ರಶಸ್ತಿ ಮಿಸ್​ ಆಗಿದ್ದಕ್ಕೆ ಪ್ರಕಾಶ್​ ರಾಜ್​ ಬೇಸರ; ವಿಜಯ್​ ರಾಜಕೀಯದ ಎಂಟ್ರಿ ಬಗ್ಗೆ ನಟನ ಅಭಿಪ್ರಾಯ ಏನು?

ಬಹುಭಾಷೆಯಲ್ಲಿ ಪ್ರಕಾಶ್​ ರಾಜ್​ ಅವರು ಫೇಮಸ್​ ಆಗಿದ್ದಾರೆ. ಎಲ್ಲ ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಇದೆ. ಕೇವಲ ನಟನಾಗಿ ಮಾತ್ರವಲ್ಲದೇ ಸಾಮಾಜಿಕ ಹೋರಾಟಗಾರನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಟೀಕಿಸುತ್ತಾ ಬಂದಿದ್ದಾರೆ. ಆ ಬಗ್ಗೆ ಅವರು ನೇರವಾಗಿ ತಮ್ಮ ಟೀಕೆಗಳನ್ನು ವ್ಯಕ್ತಪಡಿಸುತ್ತಾರೆ. ಸೋಶಿಯಲ್​ ಮೀಡಿಯಾದಲ್ಲೂ ಪ್ರಕಾಶ್​ ರಾಜ್​ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಕೆಲವೇ ದಿನಗಳ ಹಿಂದೆ ಅವರು ಚಂದ್ರಯಾನದ ಕುರಿತು ಮಾಡಿದ ಟ್ವೀಟ್​ನಿಂದ ವಿವಾದ ಸೃಷ್ಟಿ ಆಗಿತ್ತು. ನಂತರ ಅದಕ್ಕೆ ಪ್ರಕಾಶ್​ ರಾಜ್​ ಸ್ಪಷ್ಟನೆ ನೀಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು