AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಶೂಟಿಂಗ್ ಸೆಟ್​ ಬೆಂಕಿಗಾಹುತಿ, ನಾಲ್ಕು ಕೋಟಿ ನಷ್ಟ

ಜೂ ಎನ್​ಟಿಆರ್ ಸಹೋದರ ನಟಿಸುತ್ತಿದ್ದ ಸಿನಿಮಾದ ಶೂಟಿಂಗ್ ಸೆಟ್​ಗೆ ಬೆಂಕಿ ತಗುಲಿದ್ದು ಭಾರಿ ನಷ್ಟವಾಗಿದೆ. ಘಟನೆಯಲ್ಲಿ ಕಲಾವಿದರಿಗೆ ಅಥವಾ ತಂತ್ರಜ್ಞರಿಗೆ ಯಾವುದೇ ಹಾನಿಯಾಗಿಲ್ಲ. ಅವಘಡದಿಂದ ನಿರ್ಮಾಪಕರಿಗೆ ನಾಲ್ಕು ಕೋಟಿ ನಷ್ಟವಾಗಿದೆ.

ಸಿನಿಮಾ ಶೂಟಿಂಗ್ ಸೆಟ್​ ಬೆಂಕಿಗಾಹುತಿ, ನಾಲ್ಕು ಕೋಟಿ ನಷ್ಟ
ಮಂಜುನಾಥ ಸಿ.
|

Updated on:May 10, 2024 | 3:25 PM

Share

ತೆಲುಗು ಚಿತ್ರರಂಗದ (Tollywood) ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ (Nandamuri Kalyan Ram) ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಬೆಂಕಿ ಬಿದ್ದಿದ್ದು ಸುಮಾರು ನಾಲ್ಕು ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ ಈ ಬೆಂಕಿ ಅವಘಡದಲ್ಲಿ ಯಾರಿಗೂ ಯಾವುದೇ ಗಾಯ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ಚಿತ್ರತಂಡ ತಿಳಿಸಿದೆ. ಶಾರ್ಟ್ ಸರ್ಕ್ಯೂಟ್​ನಿಂದಾಗಿ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು, ಸೆಟ್​ಗೆ ಬೆಂಕಿ ಬಿದ್ದಾಗ ಶೂಟಿಂಗ್ ನಡೆಯುತ್ತಿರಲಿಲ್ಲವಾದ್ದರಿಂದ ಯಾವುದೇ ಹಾನಿಯಾಗಿಲ್ಲ.

ನಂದಮೂರಿ ಕಲ್ಯಾಣ್ ರಾಮ್ ಅವರು ಕ್ರೈಂ ಥ್ರಿಲ್ಲರ್ ಕತೆಯುಳ್ಳ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಕಲ್ಯಾಣ್ ರಾಮ್ ಸಿಬಿಐ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಆಕ್ಷನ್ ದೃಶ್ಯಗಳ ಚಿತ್ರೀಕರಣ ಹಾಗೂ ಕೆಲವು ಕಚೇರಿ ದೃಶ್ಯಗಳ ಚಿತ್ರೀಕರಣವನ್ನು ಚಿತ್ರತಂಡ ಸೆಟ್​ನಲ್ಲಿ ಮಾಡುತ್ತಿತ್ತು. ಇದಕ್ಕಾಗಿ ಹೈದರಾಬಾದ್ ಹೊರವಲಯದಲ್ಲಿ ಒಂದೇ ಜಾಗದಲ್ಲಿ ಬೇರೆ ಬೇರೆ ಸೆಟ್​ಗಳನ್ನು ನಿರ್ಮಾಣ ಮಾಡಲಾಗಿತ್ತು. ಸೆಟ್ ನಿರ್ಮಾಣಕ್ಕೆ ಸುಮಾರು 4 ಕೋಟಿ ಖರ್ಚು ಮಾಡಲಾಗಿತ್ತು ಎನ್ನಲಾಗುತ್ತಿದೆ. ಈಗ ಆ ಬೃಹತ್ ಸೆಟ್​ ಬೆಂಕಿಗೆ ಆಹುತಿಯಾಗಿದೆ. ಸೆಟ್​ಗೆ ಬೆಂಕಿ ಬಿದ್ದಾಗ ಚಿತ್ರೀಕರಣ ನಡೆಯುತ್ತಿರಲಿಲ್ಲವಾದ್ದರಿಂದ ಯಾರಿಗೂ ಹಾನಿಯಾಗಿಲ್ಲ.

ಕಲ್ಯಾಣ್ ರಾಮ್ ನಟಿಸುತ್ತಿರುವ ಸಿನಿಮಾದಲ್ಲಿ ಹಿರಿಯ ನಟಿ, ರಾಜಕಾರಣಿ ವಿಜಯಶಾಂತಿ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಬಾಲಿವುಡ್​ನ ಅರ್ಜುನ್ ರಾಮ್​ಪಾಲ್, ನಾಯಕಿಯಾಗಿ ಸಾಯಿ ಮಂಜ್ರೇಕರ್ ನಟಿಸಿದ್ದಾರೆ. ಈ ಸಿನಿಮಾವನ್ನು ಪ್ರದೀಪ್ ಚಿಲಕೂರಿ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಅಶೋಕ್ ಬಂಡವಾಳ ಹೂಡಿದ್ದಾರೆ. ಕಲ್ಯಾಣ್ ರಾಮ್ ನಟನೆ ಜೊತೆಗೆ ಸಹ ನಿರ್ಮಾಪಕರೂ ಆಗಿದ್ದಾರೆ.

ಇದನ್ನೂ ಓದಿ:ಬ್ರಿಟೀಷ್ ಸೀಕ್ರೆಟ್ ಏಜೆಂಟ್ ಆದ ಜೂ ಎನ್​ಟಿಆರ್ ಸಹೋದರ ಕಲ್ಯಾಣ್ ರಾಮ್

ಈ ಹಿಂದೆ ನಟ ಪವನ್ ಕಲ್ಯಾಣ್ ನಟಿಸಿರುವ ‘ಹರಿ ಹರ ವೀರ ಮಲ್ಲು’ ಸಿನಿಮಾದ ಸೆಟ್​ಗೆ ಬೆಂಕಿ ತಗುಲಿತ್ತು. ಐತಿಹಾಸಿಕ ಸಿನಿಮಾ ಆದ್ದರಿಂದ ಬೃಹತ್ ಸೆಟ್ ಅನ್ನು ನಿರ್ಮಿಸಲಾಗಿತ್ತು. ಆ ಘಟನೆಯಲ್ಲಿಯೂ ಸಹ ಯಾರಿಗೂ ಯಾವುದೇ ಹಾನಿ ಆಗಿರಲಿಲ್ಲ. ಆ ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದ್ದು, ಚುನಾವಣೆ ಬಳಿಕ ಸಿನಿಮಾವನ್ನು ಪೂರ್ಣಗೊಳಿಸಲಿದ್ದಾರೆ ಪವನ್. ಅದಕ್ಕೂ ಮುನ್ನ ನಟ ಪ್ರಭಾಸ್ ನಟಿಸುತ್ತಿದ್ದ ‘ಆದಿಪುರುಷ್’ ಸಿನಿಮಾ ಸೆಟ್​ಗೆ ಬೆಂಕಿ ತಗುಲಿ ಪೂರ್ತಿ ಸೆಟ್ ಬೆಂಕಿಗಾಹುತಿಯಾಗಿತ್ತು. ಆದರೆ ಈ ಘಟನೆ ಮುಂಬೈನಲ್ಲಿ ನಡೆದಿತ್ತು.

ನಂದಮೂರಿ ಕಲ್ಯಾಣ್ ರಾಮ್, ಟಾಲಿವುಡ್ ಸ್ಟಾರ್ ನಟ ಜೂ ಎನ್​ಟಿಆರ್ ಅವರ ಅಣ್ಣನಾಗಿದ್ದು, ಸಿನಿಮಾಗಳಲ್ಲಿ ನಟಿಸುವ ಜೊತೆಗೆ ನಿರ್ಮಾಣವನ್ನೂ ಮಾಡುತ್ತಾರೆ. ಪ್ರಸ್ತುತ ಜೂ ಎನ್​ಟಿಆರ್ ನಟಿಸುತ್ತಿರುವ ‘ದೇವರ’ ಸಿನಿಮಾವನ್ನು ಇವರೇ ನಿರ್ಮಿಸುತ್ತಿದ್ದಾರೆ. ಈ ಹಿಂದೆ ತಮ್ಮದೇ ಸಿನಿಮಾಗಳನ್ನು ನಿರ್ಮಾಣ ಮಾಡುವ ಜೊತೆಗೆ ರವಿತೇಜ ನಟನೆಯ ‘ಕಿಕ್ 2’, ಜೂ ಎನ್​ಟಿಆರ್ ನಟನೆಯ ‘ಜೈ ಲವ ಕುಶ’ ಸಿನಿಮಾಗಳನ್ನು ನಿರ್ಮಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:11 pm, Fri, 10 May 24

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ