AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಬೆಂಕಿ: ಹಲವರಿಗೆ ಗಾಯ

Spirit movie: ಸಂದೀಪ್ ರೆಡ್ಡಿ ವಂಗಾ ನಿರ್ದೇಶನ ಮಾಡಿ ಪ್ರಭಾಸ್ ನಟಿಸಿರುವ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಇದೀಗ ಸಿನಿಮಾ ಸೆಟ್​​ನಲ್ಲಿ ಅವಘಡ ಸಂಭವಿಸಿದೆ. ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಅಗ್ನಿ ಅವಘಡ ನಡೆದಿದ್ದು, ಚಿತ್ರತಂಡದ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನಲ್ಲಿ ನಡೆಯುತ್ತಿದ್ದು, ಹೈದರಾಬಾದ್​​ನ ಸೆಟ್​​ನಲ್ಲಿ ಈ ಅವಘಡ ಸಂಭವಿಸಿದೆಯಂತೆ.

ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಬೆಂಕಿ: ಹಲವರಿಗೆ ಗಾಯ
Spirit Sandeep
ಮಂಜುನಾಥ ಸಿ.
|

Updated on: Apr 10, 2026 | 11:21 AM

Share

ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನ ಮಾಡಿ ಪ್ರಭಾಸ್ ನಟಿಸಿರುವ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಇದೀಗ ಸಿನಿಮಾ ಸೆಟ್​​ನಲ್ಲಿ ಅವಘಡ ಸಂಭವಿಸಿದೆ. ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಅಗ್ನಿ ಅವಘಡ ನಡೆದಿದ್ದು, ಚಿತ್ರತಂಡದ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನಲ್ಲಿ ನಡೆಯುತ್ತಿದ್ದು, ಹೈದರಾಬಾದ್​​ನ ಸೆಟ್​​ನಲ್ಲಿ ಈ ಅವಘಡ ಸಂಭವಿಸಿದೆಯಂತೆ.

ಶಾರ್ಟ್ ಸರ್ಕ್ಯೂಟ್​​ನಿಂದ ಈ ಅಗ್ನಿ ಅವಘಡ ಸಂಭವಿಸಿದ್ದು, ಸಿನಿಮಾದ ಸಿಬ್ಬಂದಿಗಾಗಿ ಹಾಕಲಾಗಿದ್ದ ಸೆಟ್​​ ಸುಟ್ಟಿವೆ ಹಾಗೂ ಸಿನಿಮಾ ತಂಡದ ಕೆಲವು ವಸ್ತುಗಳು ಅಗ್ನಿಗೆ ಆಹುತಿಯಾಗಿವೆಯಂತೆ. ಕೆಲವು ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳು ಸಹ ಆಗಿವೆ ಎನ್ನಲಾಗುತ್ತಿದೆ. ಆದರೆ ಈ ಘಟನೆ ನಡೆದಾಗ ನಟ ಪ್ರಭಾಸ್ ಅವರು ಸೆಟ್​​ನಲ್ಲಿ ಇರಲಿಲ್ಲ ಎನ್ನಲಾಗುತ್ತಿದೆ. ಇಂದು (ಏಪ್ರಿಲ್ 10) ಬೆಳಿಗ್ಗೆ ಘಟನೆ ನಡೆದಿದ್ದು, ಚಿತ್ರತಂಡವು ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾದ ಸೆಟ್​ಗೂ ಸಹ ಬೆಂಕಿ ತಗುಲಿತ್ತು. ‘ಆದಿಪುರುಷ್’ ಸಿನಿಮಾಕ್ಕಾಗಿ ಮುಂಬೈನಲ್ಲಿ ಭಾರಿ ದೊಡ್ಡ ಸೆಟ್ ನಿರ್ಮಾಣ ಮಾಡಲಾಗಿತ್ತು. ಆದರೆ ಇಡೀ ಸೆಟ್ ಬೆಂಕಿಗೆ ಆಹುತಿಯಾಯ್ತು. ಆ ಸಮಯದಲ್ಲಿ ಸಾಕಷ್ಟು ಋಣಾತ್ಮಕ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು. ಸಿನಿಮಾ ಬಿಡುಗಡೆ ಆದ ಬಳಿಕ ದೊಡ್ಡ ಫ್ಲಾಪ್ ಆಯ್ತು. ಇದೀಗ ‘ಸ್ಪಿರಿಟ್’ ಸಿನಿಮಾದ ಸೆಟ್​​ಗೂ ಬೆಂಕಿ ಬಿದ್ದಿರುವುದು ಪ್ರಭಾಸ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ:‘ಡಕಾಯತ್’ ಸಿನಿಮಾ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

ನಿನ್ನೆಯಷ್ಟೆ ಪ್ರಭಾಸ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರುಗಳು ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣದಿಂದ ಬಿಡುವು ಪಡೆದು ‘ಧುರಂಧರ್ 2’ ಸಿನಿಮಾ ವೀಕ್ಷಿಸಿ, ಸಿನಿಮಾ ಅನ್ನು ಮೆಚ್ಚಿಕೊಂಡಿದ್ದರು. ಸಂದೀಪ್ ರೆಡ್ಡಿ ವಂಗಾ ಸಹ ಬೇರೊಂದು ಕಡೆ, ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಬೇಗನೆ ಸಾಗುತ್ತಿದ್ದು, ಬೇಗನೆ ಚಿತ್ರೀಕರಣ ಮುಗಿಸುವುದಾಗಿ ಹೇಳಿಕೊಂಡಿದ್ದರು. ಆದರೆ ಅಷ್ಟರಲ್ಲೇ ಈ ದುರ್ಘಟನೆ ನಡೆದಿದೆ.

ಪ್ರಭಾಸ್ ಪ್ರಸ್ತುತ ‘ಸ್ಪಿರಿಟ್’, ‘ಫೌಜಿ’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಟ್ಟಿಗೆ ಈ ಮೂರು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿದೆ. ‘ಫೌಜಿ’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದೆ. ‘ಕಲ್ಕಿ 2898 ಎಡಿ’ ಚಿತ್ರೀಕರಣ ಪ್ರಾರಂಭ ಆಗಿದೆಯಾದರೂ, ಪ್ರಭಾಸ್ ಇನ್ನೂ ಚಿತ್ರೀಕರಣದಲ್ಲಿ ಭಾಗಿ ಆಗಿಲ್ಲ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us