Salman Khan: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ.

Salman Khan: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ
ಸಲ್ಮಾನ್ ಖಾನ್

Updated on: Apr 14, 2024 | 8:24 AM

ಬಾಲಿವುಡ್ ನಟ ಸಲ್ಮಾನ್​ ಖಾನ್(Salman Khan) ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ. ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಇಬ್ಬರು ಅಪರಿಚಿತರು ಈ ಈ ಗುಂಡಿನ ದಾಳಿ ನಡೆಸಿದ್ದಾರೆ.

ಇಬ್ಬರು ಶೂಟರ್‌ಗಳು ಬೈಕ್‌ನಲ್ಲಿ ಬಂದು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಈ ಗುಂಡಿನ ದಾಳಿಯ ನಂತರ ಮುಂಬೈ ಕ್ರೈಂ ಬ್ರಾಂಚ್ ಜೊತೆಗೆ ಬಾಂದ್ರಾ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ಅಲ್ಲದೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ‘ಸಿಖಂದರ್’ ಶೀರ್ಷಿಕೆ; 2025ರ ಈದ್​ಗೆ ರಿಲೀಸ್

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರು ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಅನೇಕ ಬಾರಿ ಬೆದರಿಕೆ ಹಾಕಿದ್ದರು.
ಇತ್ತೀಚೆಗೆ, ಲಾರೆನ್ಸ್ ಬಿಷ್ಣೋಯ್ ಕೆನಡಾದಲ್ಲಿರುವ ನಟ-ಗಾಯಕ ಗಿಪ್ಪಿ ಗ್ರೆವಾಲ್ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದರು.

2023 ರಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಕಚೇರಿಗೆ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ಲಾರೆನ್ಸ್ ಬಿಷ್ಣೋಯ್ ಬೆದರಿಕೆಯ ನಂತರ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಿದ್ದರು. ಸದ್ಯ ಸಲ್ಮಾನ್ ಗೆ ವೈ ಪ್ಲಸ್ ಭದ್ರತೆ ನೀಡಲಾಗಿದೆ.

ಈಗ ನಾನು ಗೂಂಡಾ ಅಲ್ಲ, ಆದರೆ ಸಲ್ಮಾನ್ ಖಾನ್ ಅವರನ್ನು ಕೊಂದು ಗೂಂಡಾ ಆಗುತ್ತೇನೆ. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ನನ್ನ ಜೀವನದ ಗುರಿ. ಭದ್ರತೆ ತೆಗೆದರೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುತ್ತೇನೆ ಎಂದು ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ ಹೇಳಿದ್ದರು.

 

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:15 am, Sun, 14 April 24

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us