ಇದು ಕೇವಲ ಟ್ರೇಲರ್: ನಟ ಸಲ್ಮಾನ್​ ಖಾನ್ ಮನೆಯ ಹೊರಗೆ ಗುಂಡಿನ ದಾಳಿ, ಹೊಣೆ ಹೊತ್ತ ಗ್ಯಾಂಗ್​ಸ್ಟರ್​ ಲಾರೆನ್ಸ್​ ಸಹೋದರ

ಬಾಲಿವುಡ್ ನಟ ಸಲ್ಮಾನ್ ಖಾನ್(Salman Khan) ಮನೆಯ ಮುಂದೆ ಗುಂಡಿನ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್ ಸಹೋದರ ಅನ್ಮೋಲ್​ ಹೇಳಿಕೊಂಡಿದ್ದಾರೆ. ಲಾರೆನ್ಸ್ ಸಹೋದರ ಅನ್ಮೋಲ್ ಅಮೆರಿಕದಲ್ಲಿದ್ದಾರೆ. ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಇದು ಕೇವಲ ಟ್ರೇಲರ್: ನಟ ಸಲ್ಮಾನ್​ ಖಾನ್ ಮನೆಯ ಹೊರಗೆ ಗುಂಡಿನ ದಾಳಿ, ಹೊಣೆ ಹೊತ್ತ ಗ್ಯಾಂಗ್​ಸ್ಟರ್​ ಲಾರೆನ್ಸ್​ ಸಹೋದರ
ಸಲ್ಮಾನ್ ಖಾನ್
Follow us
ನಯನಾ ರಾಜೀವ್
|

Updated on: Apr 14, 2024 | 2:45 PM

ಬಾಲಿವುಡ್ ನಟ ಸಲ್ಮಾನ್ ಖಾನ್(Salman Khan) ಮನೆಯ ಮುಂದೆ ನಡೆದ ಗುಂಡಿನ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್ ಸಹೋದರ ಅನ್ಮೋಲ್​ ಹೇಳಿಕೊಂಡಿದ್ದಾರೆ. ಲಾರೆನ್ಸ್ ಸಹೋದರ ಅನ್ಮೋಲ್ ಈಗ ಅಮೆರಿಕದಲ್ಲಿದ್ದಾರೆ. ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಅಲ್ಲದೆ ಸಲ್ಮಾನ್ ಅವರಿಗೆ ನಿಮಗೆ ಟ್ರೇಲರ್ ತೋರಿಸುವುದಕ್ಕಾಗಿಯೇ ನಾವು ಈ ದಾಳಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದು ನಮ್ಮ ಮೊದಲ ಮತ್ತು ಕೊನೆಯ ಎಚ್ಚರಿಕೆ ಎಂದು ಹೇಳಿದ್ದಾಗಿ ಟೈಮ್ಸ್ ನೌ ವರದಿ ಮಾಡಿದೆ. ಬಾಂದ್ರಾದಲ್ಲಿರುವ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಎದುರು ಇಬ್ಬರು ಬೈಕ್ ಸವಾರರು 4 ಸುತ್ತು ಗುಂಡು ಹಾರಿಸಿದ್ದಾರೆ. ದುಷ್ಕರ್ಮಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದರು.

ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಅನ್ಮೋಲ್ ಬಿಷ್ಣೋಯ್ ಹೆಸರಿನಲ್ಲಿ ಮಾಡಿರುವ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲೂ ಆತನ ಕೈವಾಡವಿತ್ತು ಎನ್ನಲಾಗಿದೆ. ಇದು ಎಚ್ಚರಿಕೆ ಮುಂದಿನ ಬಾರಿ ಗಾಳಿಯಲ್ಲಿ ಅಥವಾ ಮನೆ ಮೇಲೆ ಗುಂಡು ಹಾರಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: Salman Khan: ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಗುಂಡಿನ ದಾಳಿ ವೇಳೆ ಸಲ್ಮಾನ್ ಖಾನ್ ಎಲ್ಲಿದ್ದರು ಮುಂಬೈನ ಬಾಂದ್ರಾ ಪೊಲೀಸರು ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಶೋಧ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಹಲವು ತಂಡಗಳನ್ನು ರಚಿಸಿದ್ದಾರೆ. ಮತ್ತೆ ಗುಂಡಿನ ದಾಳಿ ನಡೆದಾಗ ಸಲ್ಮಾನ್ ಖಾನ್ ಅವರ ಮನೆಯಲ್ಲಿದ್ದರು ಎಂದು ಮುಂಬೈ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮುಂಬೈ ಡಿಸಿಪಿ ರಾಜ್ ತಿಲಕ್ ರೋಷನ್ ಅವರು ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಟ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಹೊರಗೆ ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದಾರೆ, ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಗುಂಡಿನ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಮುಂಬೈ ಪೊಲೀಸರ ಅಪರಾಧ ವಿಭಾಗ ಪ್ರಕರಣದ ತನಿಖೆ ಆರಂಭಿಸಿದೆ. ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ