ಪಂಚಾಯತ್​ ಎಲೆಕ್ಷನ್​ಗೆ ಸ್ಪರ್ಧಿಸಿದ ಮಾಜಿ ಮಿಸ್​ ಇಂಡಿಯಾ ಫೈನಲಿಸ್ಟ್​; ಇವರ​ ನೋಡೋಕೆ ಜನವೋ ಜನ

ದೀಕ್ಷಾ ಈಗಾಗಲೇ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಕಪ್ಪು ಗ್ಲಾಸ್​ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರನ್ನು ನೋಡೋಕೆ ಜನಸಾಗರವೇ ಹರಿದು ಬರುತ್ತಿದೆ.

ಪಂಚಾಯತ್​ ಎಲೆಕ್ಷನ್​ಗೆ ಸ್ಪರ್ಧಿಸಿದ ಮಾಜಿ ಮಿಸ್​ ಇಂಡಿಯಾ ಫೈನಲಿಸ್ಟ್​; ಇವರ​ ನೋಡೋಕೆ ಜನವೋ ಜನ
ದೀಕ್ಷಾ ಸಿಂಗ್​
Follow us
ರಾಜೇಶ್ ದುಗ್ಗುಮನೆ
|

Updated on:Apr 04, 2021 | 6:41 PM

ಲಖನೌ: ಉತ್ತರ ಪ್ರದೇಶದಲ್ಲಿ ಪಂಚಾಯತ್​ ಚುನಾವಣೆಯ ಕಾವು ಹೆಚ್ಚಾಗಿದೆ. ಲಕ್ಷಾಂತರ ಸ್ಪರ್ಧಿಗಳು ಪಂಚಾಯತ್​ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಈ ಮಧ್ಯೆ 2015ರ ಫೆಮಿನಾ ಮಿಸ್​ ಇಂಡಿಯಾ ಫೈನಲಿಸ್ಟ್ ದೀಕ್ಷಾ ಸಿಂಗ್​ ಕೂಡ ಜಿಲ್ಲಾ ಪಂಚಾಯತ್​ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಪ್ರಚಾರದ ವೇಳೆ ಇವರನ್ನು ನೋಡೋಕೆ ಜನ ಸಾಗರವೇ ಹರಿದು ಬರುತ್ತಿದೆ. ದೀಕ್ಷಾ ಅವರು ಉತ್ತರ ಪ್ರದೇಶದ ಭಾಕ್ಷಾದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್​ 15ರಂದು ಚುನಾವಣೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಜೌನ್​ಪುರ್​ನ ಚಿತ್ತೋರಿ ಗ್ರಾಮದವರಾದ ದೀಕ್ಷಾ ಪ್ರಾಥಮಿಕ ಶಿಕ್ಷಣ ಪಡೆದಿದ್ದು ಇದೇ ಊರಿನಲ್ಲಿ. ಪಾಲಕರು ಮುಂಬೈಗೆ ಶಿಫ್ಟ್​ ಆದ ನಂತರ ಇವರು ಕೂಡ ಅಲ್ಲಿಗೆ ತೆರಳಿದರು. ಅಲ್ಲಿಯೇ ಶಿಕ್ಷಣ ಪಡೆದರು. ಅವರು ಸೆಕೆಂಡ್ ಪಿಯುಸಿಯಲ್ಲಿರುವಾಗ ಫೆಮಿನಾ ಮಿಸ್ ಇಂಡಿಯಾದಲ್ಲಿ ಭಾಗವಹಿಸಿದ್ದರು. 21 ಫೈನಲಿಸ್ಟ್​ಗಳಲ್ಲಿ ಇವರು ಕೂಡ ಒಬ್ಬರಾಗಿದ್ದರು. ನಂತರ ಸಾಕಷ್ಟು ಮಾಡೆಲಿಂಗ್​ ಸ್ಪರ್ಧೆಗಳಲ್ಲಿ ದಿಶಾ ಪಾಲ್ಗೊಂಡಿದ್ದರು. ಮ್ಯೂಸಿಕ್​ ವಿಡಿಯೋಗಳಲ್ಲೂ ಕಾಣಿಸಿಕೊಂಡರು.

ಗ್ರಾಮ ಪಂಚಾಯಿತಿ ಚುನಾವಣೆಗೆ ದೀಕ್ಷಾ ಸ್ಪರ್ಧೆ ಮಾಡುತ್ತಾರೆ ಎನ್ನುವ ವಿಚಾರ ಇತ್ತೀಚೆಗೆ ಭಾರೀ ಚರ್ಚೆ ಆಗಿತ್ತು. ಅವರ ತಂದೆ ಜಿತೇಂದ್ರ ಸಿಂಗ್ ಈ ಕ್ಷೇತ್ರದಿಂದ ಸ್ಪರ್ಧಿಸುವ ಕನಸು ಇಟ್ಟುಕೊಂಡಿದ್ದರು. ಆದರೆ, ಮಹಿಳಾ ಅಭ್ಯರ್ಥಿಗಳಿಗೆ ಈ ಸ್ಥಾನವನ್ನು ಕಾಯ್ದಿರಿಸಲಾಗಿದೆ. ಹೀಗಾಗಿ, ತಂದೆ ಆಸೆ ಈಡೇರಿಸಲು ಚುನಾವಣೆಗೆ ಇವರು ಸ್ಪರ್ಧೆ ಮಾಡುತ್ತಿದ್ದಾರೆ ಎನ್ನಲಾಗಿತ್ತು.

ಆದರೆ ದೀಕ್ಷಾ ಈ ವಿಚಾರ ನಿರಾಕರಿಸಿದ್ದಾರೆ. ನಾನು ಸ್ವ ಇಚ್ಛೆಯಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಹಲವು ವರ್ಷಗಳಿಂದ ಇಲ್ಲಿಯ ಜನರ ಜೀವನ ಸುಧಾರಿಸಿಲ್ಲ. ನಾನು ಹುಟ್ಟಿ ಬೆಳೆದ ಸ್ಥಳ ಕೂಡ ಅಭಿವೃದ್ಧಿ ಕಾಣುತ್ತಿಲ್ಲ. ನಾನು ಇಲ್ಲಿಗೆ ಬಂದಾಗೆಲ್ಲ ಈ ಭಾವನೆ ನಿರಂತರವಾಗಿ ಕಾಡಿತ್ತು. ಹೀಗಾಗಿ, ಚುನಾವಣೆಗೆ ನಿಲ್ಲುವ ನಿರ್ಧಾರಕ್ಕೆ ಬಂದೆ. ಈ ಮೂಲಕ ಹಳ್ಳಿ ಅಭಿವೃದ್ಧಿಪಡಿಸುವ ಕನಸು ಕಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ದೀಕ್ಷಾ ಈಗಾಗಲೇ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಕಪ್ಪು ಗ್ಲಾಸ್​ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇವರನ್ನು ನೋಡೋಕೆ ಜನಸಾಗರವೇ ಹರಿದು ಬರುತ್ತಿದೆ.

ಇದನ್ನೂ ಓದಿ: ಒಂದೇ ಶೋನಲ್ಲಿ ಪ್ರಥಮ್​, ಸಿಹಿಕಹಿ ಚಂದ್ರು, ಅಕುಲ್​ ಬಾಲಾಜಿ! ಕಿರುತೆರೆ ಪ್ರೇಕ್ಷಕರಿಗೆ ಮಸ್ತ್​​ ಮನರಂಜನೆ

Published On - 6:38 pm, Sun, 4 April 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್