AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಪುತ್ರಿ ಹೆಸರಲ್ಲಿ ಮೋಸ, ಪೊಲೀಸರಿಗೆ ದೂರು

Mahesh Babu: ನಟ ಮಹೇಶ್ ಬಾಬು ಪುತ್ರಿ ಸಿತಾರಾ ಗಟ್ಟಿಮನೇನಿ ಸಹ ಸೆಲೆಬ್ರಿಟಿ, ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸಂಖ್ಯೆಯ ಫಾಲೋವರ್​ಗಳಿದ್ದಾರೆ. ಇದೀಗ ಸಿತಾರಾ ಹೆಸರಿನಲ್ಲಿ ಕೆಲವರು ವಂಚನೆಗೆ ಇಳಿದಿದ್ದಾರೆ.

ಮಹೇಶ್ ಬಾಬು ಪುತ್ರಿ ಹೆಸರಲ್ಲಿ ಮೋಸ, ಪೊಲೀಸರಿಗೆ ದೂರು
ಮಹೇಶ್ ಬಾಬು-ಸಿತಾರ
ಮಂಜುನಾಥ ಸಿ.
|

Updated on: Feb 11, 2024 | 3:57 PM

Share

ಮಹೇಶ್ ಬಾಬು (Mahesh Babu) ಪುತ್ರಿ ಸಿತಾರಾ ಗಟ್ಟಿಮನೇನಿ (Sitara Gattimaneni) ಸೋಷಿಯಲ್ ಮೀಡಿಯಾ ಸ್ಟಾರ್. ಸಿನಿಮಾಗಳಲ್ಲಿ ನಟಿಸುವ ಮುನ್ನವೇ ಭಾರಿ ದೊಡ್ಡ ಅಭಿಮಾನಿ ವರ್ಗವನ್ನು ಸಿತಾರಾ ಗಟ್ಟಿಮನೇನಿ ಸಂಪಾದಿಸಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ 18 ಲಕ್ಷಕ್ಕೂ ಹೆಚ್ಚು ಮಂದಿ ಫಾಲೋವರ್​ಗಳನ್ನು ಹೊಂದಿದ್ದಾರೆ ಸಿತಾರಾ. ಹಲವು ಬ್ರ್ಯಾಂಡ್​ಗಳಿಗೆ ಮಾಡೆಲ್ ಆಗಿದ್ದಾರೆ. ಪುಟ್ಟ ವಯಸ್ಸಿನಲ್ಲಿಯೇ ಇನ್​ಸ್ಟಾಗ್ರಾಂ, ಮಾಡೆಲಿಂಗ್​ಗಳಿಂದ ಕೋಟ್ಯಂತರ ರೂಪಾಯಿ ಹಣ ಸಂಪಾದಿಸುತ್ತಿದ್ದಾರೆ. ಭಾರಿ ಜನಪ್ರಿಯವಾಗಿರುವ ಸಿತಾರಾ ಹೆಸರಿನಲ್ಲಿ ಕೆಲವರು ವಂಚನೆ ಮಾಡುತ್ತಿದ್ದಾರೆ.

ಸಿತಾರಾ ಗಟ್ಟಿಮನೇನಿ ಅವರ ಜನಪ್ರಿಯತೆಯನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಕೆಲವು ವಂಚಕರು ಅಮಾಯಕರ ವಂಚನೆಗೆ ಇಳಿದಿದ್ದಾರೆ. ಮಹೇಶ್ ಬಾಬು ಅವರ ತಂಡ ಈಗಾಗಲೇ ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ, ಸಿತಾರಾ ಅವರ ತಾಯಿ, ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಈ ವಂಚನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಎಚ್ಚರಿಕೆ ಸಂದೇಶವನ್ನು ಸಹ ಹಂಚಿಕೊಂಡಿದ್ದಾರೆ.

ಮಾಧಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಮಹೇಶ್ ಬಾಬು ಅವರ ತಂಡದೊಡನೆ ನಿರಂತರ ಸಂಪರ್ಕದಲ್ಲಿದೆ. ಸಿತಾರಾ ಗಟ್ಟಿಮನೇನಿ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಪ್ರಕರಣವನ್ನು ಅವರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಎಲ್ಲರೂ ಎಚ್ಚರಿಕೆ ಇಂದ ಇರುವಂತೆ ಸಂದೇಶ ನೀಡಿದ್ದಾರೆ. ಒಬ್ಬ ಅಗಂತುಕ, ಸಿತಾರಾ ಗಟ್ಟಿಮನೇನಿಯ ಚಿತ್ರ, ವಿಡಿಯೋ ಹಾಗೂ ಹೆಸರು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಕೆಲವು ಲಿಂಕ್​ಗಳನ್ನು ಹಂಚಿಕೊಳ್ಳುತ್ತಿದ್ದಾನೆ. ಅಲ್ಲದೆ ಬಂಡವಾಳ ಹೂಡಿಕೆ ಯೋಜನೆಗಳ ಮಾರಾಟ, ಲೋನ್ ಕೊಡಿಸುವುದಾಗಿ ಹೇಳಿ ಲಿಂಕ್ ಕಳಿಸುವುದು, ಷೇರು ಮಾರುಕಟ್ಟೆಗೆ ಸಂಬಂಧಿಸಿದ ಹೂಡಿಕೆ ಐಡಿಯಾಗಳನ್ನು ಕೊಡುವುದಾಗಿ ಹೇಳಿಕೊಂಡು ಹಲವರನ್ನು ಸಂಪರ್ಕ ಮಾಡಿದ್ದಾನೆ.

ಇದನ್ನೂ ಓದಿ:‘ಗುಂಟೂರು ಖಾರಂ’ ಸ್ಟೈಲ್​ನಲ್ಲಿ ಅಪ್ಪನ ಥಿಯೇಟರ್​ಗೆ ಬಂದ ಸಿತಾರಾ; ಟ್ರೋಲ್ ಆದ ಮಹೇಶ್ ಬಾಬು ಮಗಳು

ಸಿತಾರಾ ಅಥವಾ ಇನ್ಯಾವುದೆ ಜನಪ್ರಿಯರ ಹೆಸರಿನಲ್ಲಿ ನಡೆಯುವ ಮೋಸದ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದರಬೇಕು, ಒಂದೊಮ್ಮೆ ಯಾವುದೇ ಅನುಮಾನಾಸ್ಪದ ಸಂದೇಶಗಳು ಕಂಡು ಬಂದರೆ ಮಾಹಿತಿ ನೀಡಬೇಕು ಎಂದು ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದು, ಇದೀಗ ಸಿತಾರಾ ಗಟ್ಟಿಮನೇನಿ ಹೆಸರಿನಲ್ಲಿ ವಂಚನೆ ಎಸಗುತ್ತಿರುವವರ ಮೂಲ ಪತ್ತೆ ಹಚ್ಚಿ ಬಂಧಿಸುವ ಪ್ರಯತ್ನ ಜಾರಿಯಲ್ಲಿದೆ. ಜನರು ಸಾಮಾಜಿಕ ಜಾಲತಾಣದಲ್ಲಿ ತಮಗೆ ಬಂದ ಹೂಡಿಕೆ ಮಾಹಿತಿಯನ್ನು ನಿಜವೆಂದು ನಂಬುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲನೆ ಮಾಡಿಕೊಳ್ಳಿ ಎಂದು ಮಹೇಶ್ ಬಾಬು ತಂಡ ಹೇಳಿದೆ.

ಮಹೇಶ್ ಬಾಬು ಹಾಗೂ ನಮ್ರತಾ ಶಿರೋಡ್ಕರ್ ಪುತ್ರಿ ಸಿತಾರಾ ಗಟ್ಟಿಮನೇನಿ ಬಹಳ ಒಳ್ಳೆಯ ಡ್ಯಾನ್ಸರ್ ಆಗಿದ್ದು, ನಟನೆ ಬಗ್ಗ ಅತೀವ ಆಸಕ್ತಿ ಹೊಂದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ತಮ್ಮ ಡ್ಯಾನ್ಸ್ ವಿಡಿಯೋಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಿರುತ್ತಾರೆ. ಆದಷ್ಟು ಬೇಗ ನಮ್ರತಾ ಸಿನಿಮಾ ನಟನೆಗೆ ಎಂಟ್ರಿ ನೀಡಲಿದ್ದಾರೆ ಎನ್ನಲಾಗುತ್ತಿದೆ. ಮಹೇಶ್​ ಬಾಬು ಅವರ ಪುತ್ರ ಈ ಹಿಂದೆ ಸಿನಿಮಾದಲ್ಲಿ ನಟಿಸಿದ್ದಾರೆ. ‘ನೇನೊಕ್ಕಡಿನೆ’ ಸಿನಿಮಾದಲ್ಲಿ ಮಹೇಶ್ ಬಾಬು ಪುತ್ರ ನಟಿಸಿದ್ದರು. ಮಹೇಶ್ ಬಾಬು ಪ್ರಸ್ತುತ ರಾಜಮೌಳಿ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?