AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್-ಕರೀನಾ ಮದುವೆಯಲ್ಲಿ ಪಾತ್ರೆ ತೊಳೆದಿದ್ದ ಈ ನಟ, ಬಿಗ್ ಬಾಸ್ ಮನೆಗೆ ಎಂಟ್ರಿ

ಬಾಲಿವುಡ್ ಅಂಗಳದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಆಸಿಫ್ ಖಾನ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಮದುವೆಯಲ್ಲಿ ವೇಟರ್ ಆಗಿ ಕೆಲಸ ಮಾಡಿ, ಪಾತ್ರೆ ತೊಳೆದಿದ್ದ ಇವರು, ಇಂದು ಸಲ್ಮಾನ್ ಖಾನ್ ನಿರೂಪಣೆಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಸೈಫ್-ಕರೀನಾ ಮದುವೆಯಲ್ಲಿ ಪಾತ್ರೆ ತೊಳೆದಿದ್ದ ಈ ನಟ, ಬಿಗ್ ಬಾಸ್ ಮನೆಗೆ ಎಂಟ್ರಿ
ಆಸಿಫ್​-ಸೈಫ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 08, 2026 | 11:24 AM

Share

ಮುಖ್ಯಾಂಶಗಳು

  • ಹೋಟೆಲ್ ವೇಟರ್ ಟು ಬಿಗ್ ಬಾಸ್ ಸ್ಪರ್ಧಿ
  • ಆಸಿಫ್ ಖಾನ್ ಬದುಕಿನ ಕಠಿಣ ಹಾದಿ
  • ಸೈಫ್-ಕರೀನಾ ಮದುವೆಯಲ್ಲಿ ಪಾತ್ರೆ ತೊಳೆದಿದ್ದ ದಿನಗಳು

ಬಿಗ್ ಬಾಸ್ ಹೊಸ ಸೀಸನ್ ಅದ್ಧೂರಿಯಾಗಿ ಚಾಲನೆ ಪಡೆದುಕೊಂಡಿದೆ. ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಹಾಗೂ ಬಂಗಾಳಿ ಭಾಷೆಗಳಲ್ಲಿ ಏಕಕಾಲಕ್ಕೆ ಶೋ ಶುರುವಾಗಿದೆ. ಸಲ್ಮಾನ್ ಖಾನ್ ನಿರೂಪಣೆಯ ಹಿಂದಿಯ 20ನೇ ಸೀಸನ್‌ಗೆ ಹಲವು ಸ್ಪರ್ಧಿಗಳು ಮನೆ ಪ್ರವೇಶಿಸಿದ್ದಾರೆ. ಈ ಪೈಕಿ ಹಿಂದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿರುವ ನಟ ಆಸಿಫ್ ಖಾನ್ ಅವರ ರಿಯಲ್ ಲೈಫ್ ಸ್ಟೋರಿ ಈಗ ಎಲ್ಲರ ಗಮನ ಸೆಳೆಯುತ್ತಿದೆ.

ಇಂದು ಜನಪ್ರಿಯ ನಟನಾಗಿ ಗುರುತಿಸಿಕೊಂಡಿರುವ ಆಸಿಫ್ ಖಾನ್ ಅವರ ಜೀವನದ ಹಾದಿ ಸುಲಭದ್ದಾಗಿರಲಿಲ್ಲ. ಮುಂಬೈಗೆ ಬಂದ ಆರಂಭದಲ್ಲಿ ಕುಟುಂಬದ ನಿರ್ವಹಣೆಗಾಗಿ ಹೋಟೆಲ್‌ಗಳಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದ ಇವರು, ಕಠಿಣ ಪರಿಶ್ರಮದಿಂದಲೇ ತಮ್ಮ ಹಣೆಬರಹ ಬದಲಾಯಿಸಿಕೊಂಡವರು.

2012ರಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ವಿವಾಹ ಆರತಕ್ಷತೆ ಮುಂಬೈನ ತಾಜ್ ಹೋಟೆಲ್‌ನಲ್ಲಿ ನಡೆದಿತ್ತು. ಆಗ ಅದೇ ಹೋಟೆಲ್‌ನಲ್ಲಿ ವೇಟರ್ ಆಗಿದ್ದ ಆಸಿಫ್, ಮದುವೆಯ ಶುಭಸಮಾರಂಭದಲ್ಲಿ ಪಾತ್ರೆಗಳನ್ನೂ ತೊಳೆದಿದ್ದರು! ಆ ಸಮಯದಲ್ಲಿ ಸೈಫ್-ಕರೀನಾ ಜೋಡಿಯನ್ನು ಒಮ್ಮೆ ಭೇಟಿಯಾಗಲು ಮ್ಯಾನೇಜರ್ ಬಳಿ ಅನುಮತಿ ಕೇಳಿದಾಗ ನಿರಾಕರಣೆ ಎದುರಾಗಿ ನಿರಾಶೆಯಿಂದ ಹಿಂತಿರುಗಿದ್ದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಮೊದಲ ದಿನವೇ ಬಂದ ಹೊಸ ಸ್ಪರ್ಧಿ; ದಿನವೀಡಿ ಅಳು

ನಂತರ ಚಿತ್ರರಂಗಕ್ಕೆ ಕಾಲಿಟ್ಟ ಆಸಿಫ್ ಅವರಿಗೆ ಅಮೆಜಾನ್ ಪ್ರೈಮ್‌ನ ಸೂಪರ್ ಹಿಟ್ ‘ಪಂಚಾಯತ್’ ವೆಬ್ ಸರಣಿಯ ‘ಗಣೇಶ್’ ಪಾತ್ರ ದೊಡ್ಡ ಬ್ರೇಕ್ ನೀಡಿತು. ಇಂದು ಪ್ರಸಿದ್ಧ ನಟನಾಗಿ ಬೆಳೆದು ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ ವೇದಿಕೆ ಏರಿರುವ ಆಸಿಫ್ ಖಾನ್ ಅವರ ಈ ಸಾಧನೆ ನಿಜಕ್ಕೂ ಸಿನಿಮೀಯ ತಿರುವುಗಳಿಗಿಂತ ಕಡಿಮೆಯಿಲ್ಲ.ಅವರು ದೊಡ್ಡನೆ ಪ್ರವೇಶ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ