ಅದ್ದೂರಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಜನಾರ್ದನ ​ರೆಡ್ಡಿ ಮಗ ಕಿರೀಟಿ; ತಾಂತ್ರಿಕವರ್ಗದಲ್ಲಿ ಹಲವು ಖ್ಯಾತರು

ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮ ಆಗಿಲ್ಲ. ಈ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಲಾಗುತ್ತಿದೆ. ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದೆ.

ಅದ್ದೂರಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಜನಾರ್ದನ ​ರೆಡ್ಡಿ ಮಗ ಕಿರೀಟಿ; ತಾಂತ್ರಿಕವರ್ಗದಲ್ಲಿ ಹಲವು ಖ್ಯಾತರು
ಕಿರೀಟಿ
Edited By:

Updated on: Mar 01, 2022 | 6:50 PM

ಚಿತ್ರರಂಗಕ್ಕೂ ರಾಜಕೀಯಕ್ಕೂ ಮೊದಲಿನಿಂದಲೂ ನಂಟಿದೆ. ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟ ಉದಾಹರಣೆ ಇದೆ. ಅದೇ ರೀತಿ, ಹಲವು ರಾಜಕಾರಣಿಗಳ ಮಕ್ಕಳು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಜನಾರ್ದನ ​ರೆಡ್ಡಿ (Janardhan Reddy) ಮಗ ಕಿರೀಟಿ ರೆಡ್ಡಿ (Kireeti Reddy) ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈಗ ಈ ವಿಚಾರದಲ್ಲಿ ಅಧಿಕೃತ ಘೋಷಣೆ ಆಗಿದೆ. ಇಂದು (ಫೆಬ್ರವರಿ 1) ಶಿವರಾತ್ರಿ ಹಿನ್ನೆಲೆಯಲ್ಲಿ ಈ ಬಗ್ಗೆ ಅನೌನ್ಸ್​ಮೆಂಟ್​ ಆಗಿದೆ. ‘ವಾರಾಹಿ ಫಿಲ್ಮಂ ಪ್ರೊಡಕ್ಷನ್’ ಟಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದು. ಈ ಸಂಸ್ಥೆ ಈಗ ಜನಾರ್ದನ ರೆಡ್ಡಿ ಮಗನ ಸಿನಿಮಾ ನಿರ್ಮಾಣ ಮಾಡುತ್ತಿದೆ. ರಾಧಾ ಕೃಷ್ಣ(Radha Krishna) ನಿರ್ದೇಶನದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದ್ದು, ಈ ಚಿತ್ರದ ಮೂಲಕ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಅವರನ್ನು ನಾಯಕನಾಗಿ ಪರಿಚಯಿಸಲಾಗುತ್ತಿದೆ.

ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮ ಆಗಿಲ್ಲ. ಈ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಲಾಗುತ್ತಿದೆ. ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದ್ದು,‌ ಹಲವು ಸೂಪರ್ ಹಿಟ್ ಸಿನಿಮಾಗಳ ತಂತ್ರಜ್ಞರು ಈ ಸಿನಿಮಾದ ಭಾಗವಾಗಿದ್ದಾರೆ ಅನ್ನೋದು ವಿಶೇಷ.

‘ಈಗ’ ಸಿನಿಮಾ ನಿರ್ಮಾಣ ಮಾಡಿದ್ದ ಸಾಯಿ ಕೋರ್ರಾಪಾಟಿ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ದೇವಿಶ್ರೀ ಪ್ರಸಾದ್ ಸಂಗೀತ ನೀಡಲಿದ್ದಾರೆ. ‘ಬಾಹುಬಲಿ’ ಸಿನಿಮಾ ಛಾಯಾಗ್ರಾಹಕ ಸೆಂಥಿಲ್ ಕುಮಾರ್ ಛಾಯಾಗ್ರಹಣ ಚಿತ್ರಕ್ಕೆ ಇರಲಿದೆ. ಆರ್ಟ್ ಡೈರೆಕ್ಟರ್ ಆಗಿ ರವೀಂದರ್, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಚಿತ್ರದಲ್ಲಿ ಕೆಲಸ ಮಾಡಲಿದ್ದಾರೆ. ಮಾರ್ಚ್ 4 ರಂದು ಚಿತ್ರ ಅದ್ದೂರಿಯಾಗಿ ಲಾಂಚ್ ಆಗಲಿದೆ.

ಚಿಕ್ಕ ವಯಸ್ಸಿನಲ್ಲೇ ಕಿರೀಟಿ ರೆಡ್ಡಿಗೆ ಸಿನಿಮಾರಂಗದ ಮೇಲೆ ಆಸಕ್ತಿ ಬೆಳೆದಿತ್ತು. ‘ಜಾಕಿ’ ಚಿತ್ರ ತೆರೆಕಂಡಾಗ ಪುನೀತ್ ರಾಜ್‌ಕುಮಾರ್ ಅವರೊಟ್ಟಿಗೆ ಸಿನಿಮಾ ನೋಡುವ ಅವಕಾಶ ಕಿರೀಟಿಗೆ ಲಭ್ಯವಾಗಿತ್ತು. ಪುನೀತ್ ಕೂಡ ಆಗ ಕಿರೀಟಿಗೆ ಸಾಕಷ್ಟು ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದರು. ಈಗ ಅವರು ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ. ಈ ಮೂಲಕ ತಮ್ಮ ಪ್ರತಿಭೆಯನ್ನು ತೋರಿಸಲಿದ್ದಾರೆ.

ಇದನ್ನೂ ಓದಿ: ಅವಳಿ ಮಕ್ಕಳ ತಾಯಾದ ಅಮೂಲ್ಯ: ಫೋಟೋ ಹಂಚಿಕೊಂಡ ಪತಿ, ಸೆಲೆಬ್ರಿಟಿಗಳಿಂದ ಶುಭಾಶಯ

ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಉಡಾವಣೆ ಆಗಲಿದೆ ಉಪಗ್ರಹ; ಇದಕ್ಕೆ ತಗಲುತ್ತಿರುವ ವೆಚ್ಚ ಎಷ್ಟು?

Published On - 6:48 pm, Tue, 1 March 22