ಚಿತ್ರತಂಡಕ್ಕೆ ಭಯ ತರುತ್ತಿದೆ ಅಭಿಮಾನಿಗಳ ಸಾವು; ಪರಿಹಾರ ಘೋಷಿಸಿದ ‘ಗೇಮ್ ಚೇಂಜರ್’ ತಂಡ  

'ಗೇಮ್ ಚೇಂಜರ್' ಚಿತ್ರದ ಪ್ರೀಮಿಯರ್ ಮುಗಿಸಿ ಹೋಗುತ್ತಿದ್ದ ವೇಳೆ ಇಬ್ಬರು ಅಭಿಮಾನಿಗಳು ಅಪಘಾತದಲ್ಲಿ ಮೃತಪಟ್ಟ ವಿಚಾರ ಹೊಸ ಚರ್ಚೆಗೆ ಕಾರಣವಾಗಿದೆ. ರಾಜಮಹೇಂದ್ರವರಂನಲ್ಲಿ ನಡೆದ ಈ ಘಟನೆಯಿಂದ ನಿರ್ಮಾಪಕ ದಿಲ್ ರಾಜು ಆಘಾತಕ್ಕೊಳಗಾಗಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ.

ಚಿತ್ರತಂಡಕ್ಕೆ ಭಯ ತರುತ್ತಿದೆ ಅಭಿಮಾನಿಗಳ ಸಾವು; ಪರಿಹಾರ ಘೋಷಿಸಿದ ‘ಗೇಮ್ ಚೇಂಜರ್’ ತಂಡ  
ರಾಮ್ ಚರಣ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 06, 2025 | 2:56 PM

‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ಹಾಗೂ ಅಲ್ಲು ಅರ್ಜುನ್ ಅಭಿಮಾನಿ ಸಾವಿನ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಘಟನೆ ಇಡೀ ಚಿತ್ರರಂಗದ ಆಲೋಚನೆಯನ್ನೇ ಬದಲಿಸಿದಂತೆ ಇದೆ. ಅಭಿಮಾನಿಗಳ ಸಾವನ್ನು ನಿರ್ಮಾಪಕರು ಹಾಗೂ ತಂಡದವರು ಗಂಭೀರವಾಗಿ ಸ್ವೀಕರಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಒಂದು ಘಟನೆ ಇದಕ್ಕೆ ಹೊಚ್ಚ ಹೊಸ ಉದಾಹರಣೆ.

ಆಂಧ್ರ ಪ್ರದೇಶದ ರಾಜಮಹೇಂದ್ರವರಂನಲ್ಲಿ ಶನಿವಾರ (ಜನವರಿ 4) ಗೇಮ್ ಚೇಂಜರ್ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ನಡೆದಿತ್ತು. ಈ ಇವೆಂಟ್​ಗೆ ಬಂದಿದ್ದ ಕಾಕಿನಾಡ ಜಿಲ್ಲೆಯ ಮಣಿಕಂಠ (23) ಮತ್ತು ಚರಣ್ (22) ಖುಷಿಯಿಂದ ಮನೆಗೆ ತೆರಳಿದ್ದರು. ಆದರೆ, ಈ ವೇಳೆ ಸಂಭವಿಸಿದ ಅಪಘಾತದಲ್ಲಿ ಇವರು ಮೃತಪಟ್ಟಿದ್ದಾರೆ. ಈ ವಿಚಾರ ತಿಳಿದ ತಕ್ಷಣ ನಿರ್ಮಾಪಕ ದಿಲ್ ರಾಜು ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಅವರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ದಿಲ್ ರಾಜು, ‘ಗೇಮ್ ಚೇಂಜರ್ ಪ್ರೀ ರಿಲೀಸ್ ಈವೆಂಟ್ ತುಂಬಾ ಅದ್ಧೂರಿಯಾಗಿ ನಡೆಯಿತು ಎಂದು ಸಂತಸ ಪಡುತ್ತಿರುವ ಹೊತ್ತಿನಲ್ಲಿ ಇಬ್ಬರು ಅಭಿಮಾನಿಗಳು ಅಪಘಾತದಲ್ಲಿ ಸಾವನ್ನಪ್ಪಿರುವುದು ತುಂಬಾ ದುಃಖ ತಂದಿದೆ. ಅವರ ಕುಟುಂಬಗಳಿಗೆ ನಾನು ಬೆಂಬಲ ನೀಡುತ್ತೇನೆ. ನನ್ನ ಕಡೆಯಿಂದ ಅವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಆರ್ಥಿಕ ನೆರವು ನೀಡುತ್ತಿದ್ದೇನೆ. ಅಂತಹ ಘಟನೆ ನಡೆದಾಗ ಕುಟುಂಬಗಳಲ್ಲಿ ಎಷ್ಟು ನೋವು ಉಂಟಾಗುತ್ತದೆ ಎಂಬುದು ಅರ್ಥವಾಗುತ್ತದೆ. ನಾನು ಅವರಿಗೆ ಸಹಾನುಭೂತಿ ವ್ಯಕ್ತಪಡಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

ಇಲ್ಲಿ ‘ಗೇಮ್ ಚೇಂಜರ್’ ಚಿತ್ರದ ನಿರ್ಮಾಪಕ ದಿಲ್ ರಾಜು ಅವರಿಗೂ ಮೃತಪಟ್ಟವರಿಗೂ ಯಾವುದೇ ಸಂಬಂಧ ಇಲ್ಲ. ಅಭಿಮಾನಿಗಳು ಮೃತಪಟ್ಟಿದ್ದು ಈವೆಂಟ್ ನಡೆಯುವ ಜಾಗದಲ್ಲೂ ಅಲ್ಲ. ಹಾಗಿದ್ದರೂ ಕೂಡ ಚಿತ್ರದ ನಿರ್ಮಾಪಕರು ಪರಿಹಾರ ಘೋಷಿಸಿದ್ದಾರೆ. ಈ ಮೂಲಕ ಮುಂದಾಗಬಹುದಾದ ತೊಂದರೆಗಳನ್ನು ಮೊದಲೇ ಊಹಿಸಿ ಪರಿಹಾರ ಘೋಷಿಸಿದ್ದಾರೆ.

ಇದನ್ನೂ ಓದಿ: ‘ಗೇಮ್ ಚೇಂಜರ್’ ಪ್ರೀರಿಲೀಸ್ ಇವೆಂಟ್​ಗೆ ಆಗಮಿಸಲಿರುವ ರಿಯಲ್ ಗೇಮ್ ಚೇಂಜರ್

ರಾಜಮಹೇಂದ್ರವರಂನಲ್ಲಿ ನಡೆದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಎಲ್ಲರಿಗೂ ಧನ್ಯವಾದ ಹೇಳೋದನ್ನು ದಿಲ್ ರಾಜು ಮರೆತಿಲ್ಲ. ಈ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಯಾಗಿ ಬಂದಿದ್ದರು. ಸಂಕ್ರಾಂತಿ ಪ್ರಯುಕ್ತ ಜನವರಿ 10ರಂದು ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಶಂಕರ್ ನಿರ್ದೇಶನ ಮಾಡಿದ್ದಾರೆ. ಹಿಂದಿಯ ಕಿಯಾರಾ ಅಡ್ವಾಣಿ ಚಿತ್ರದ ನಾಯಕಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ