Game Changer: ರಾಮ್ ಚರಣ್ ಹೊಸ ಚಿತ್ರದ ಟೈಟಲ್ ರಿವೀಲ್​; ‘ಗೇಮ್ ಚೇಂಜರ್’ ಆದ ನಟ

ರಾಮ್ ಚರಣ್ ಅವರು ‘ಗೇಮ್ ಚೇಂಜರ್​’ ಚಿತ್ರದಲ್ಲಿ ನಿರ್ದೇಶಕ ಶಂಕರ್ ಜೊತೆ ಕೆಲಸ ಮಾಡುತ್ತಿದ್ದಾರೆ. ಅವರ ನಿರ್ದೇಶನದ ಸಿನಿಮಾ ಎಂಬ ಕಾರಣಕ್ಕೂ ಇದು ಸಾಕಷ್ಟು ಹೈಪ್ ಪಡೆದುಕೊಂಡಿದೆ.

Game Changer: ರಾಮ್ ಚರಣ್ ಹೊಸ ಚಿತ್ರದ ಟೈಟಲ್ ರಿವೀಲ್​; ‘ಗೇಮ್ ಚೇಂಜರ್’ ಆದ ನಟ
ರಾಮ್ ಚರಣ್
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Mar 27, 2023 | 11:48 AM

ರಾಮ್ ಚರಣ್ (Ram Charan) ಅವರು ಇಂದು (ಮಾರ್ಚ್ 27) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಭಿಮಾನಿಗಳು, ಗೆಳೆಯರು ಹಾಗೂ ಕುಟುಂಬದವರು ಶುಭಾಶಯ ತಿಳಿಸುತ್ತಿದ್ದಾರೆ. ರಾಮ್ ಚರಣ್ ಅವರ 15ನೇ ಚಿತ್ರಕ್ಕೆ ಇನ್ನೂ ಟೈಟಲ್ ಫೈನಲ್ ಆಗಿರಲಿಲ್ಲ. ಬರ್ತ್​ಡೇ ಪ್ರಯುಕ್ತ ಶೀರ್ಷಿಕೆ ರಿವೀಲ್ ಆಗಬಹುದು ಎಂದು ಅಭಿಮಾನಿಗಳು ಊಹಿಸಿದ್ದರು. ಈ ಊಹೆ ಸರಿಯಾಗಿದೆ. ಚಿತ್ರಕ್ಕೆ ‘ಗೇಮ್ ಚೇಂಜರ್’ (Game Changer) ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಟೈಟಲ್ ಫ್ಯಾನ್ಸ್​ಗೆ ಇಷ್ಟವಾಗಿದೆ. ಈ ಸಿನಿಮಾ ಮುಂದಿನ ಸಂಕ್ರಾಂತಿ ನಿಮಿತ್ತ ಜನವರಿ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ, ಪೋಸ್ಟರ್​ನಲ್ಲಿ ಎಲ್ಲೂ ರಿಲೀಸ್ ದಿನಾಂಕ ರಿವೀಲ್ ಮಾಡಿಲ್ಲ.

ರಾಮ್ ಚರಣ್ ಅವರು ‘ಗೇಮ್ ಚೇಂಜರ್​’ ಚಿತ್ರದಲ್ಲಿ ನಿರ್ದೇಶಕ ಶಂಕರ್ ಜೊತೆ ಕೆಲಸ ಮಾಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಶಂಕರ್ ಅವರದ್ದು ದೊಡ್ಡ ಹೆಸರು. ಅವರ ನಿರ್ದೇಶನದ ಸಿನಿಮಾ ಎಂಬ ಕಾರಣಕ್ಕೂ ‘ಗೇಮ್​ ಚೇಂಜರ್’ ಸಾಕಷ್ಟು ಹೈಪ್ ಪಡೆದುಕೊಂಡಿದೆ. ಈ ಚಿತ್ರ ಘೋಷಣೆ ಆಗಿದ್ದು 2021ರ ಫೆಬ್ರವರಿ ತಿಂಗಳಲ್ಲಿ. ಎರಡು ವರ್ಷ ಕಳೆದರೂ ಚಿತ್ರದ ಶೂಟಿಂಗ್ ಮುಗಿದಿಲ್ಲ. ಸದ್ಯ ರಾಮ್ ಚರಣ್ ಅವರು ಸಂಪೂರ್ಣವಾಗಿ ಈ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ರಾಮ್ ಚರಣ್ ನಟಿಸುತ್ತಿರುವ ‘ಗೇಮ್ ಚೇಂಜರ್​’ ಚಿತ್ರಕ್ಕೆ ಕಿಯಾರಾ ನಾಯಕಿ. 170 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿದೆ. ಶಂಕರ್ ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ಮಾಪಕ ದಿಲ್ ರಾಜು ಅವರು ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ತಮನ್ ಎಸ್. ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಸಂಕ್ರಾಂತಿಗೆ ದೊಡ್ಡ ಕ್ಲ್ಯಾಶ್

ಸಂಕ್ರಾಂತಿ ಹಬ್ಬದಂದು ‘ಗೇಮ್ ಚೇಂಜರ್​’ ರಿಲೀಸ್ ಆದರೆ ದೊಡ್ಡ ಕ್ಲ್ಯಾಶ್ ಏರ್ಪಡಲಿದೆ. ಈಗಾಗಲೇ ಮಹೇಶ್ ಬಾಬು ನಟನೆಯ 28ನೇ ಸಿನಿಮಾ ಹಾಗೂ ‘ಪ್ರಾಜೆಕ್ಟ್​ ಕೆ’ ಚಿತ್ರಗಳು ಇದೇ ದಿನ ರಿಲೀಸ್ ಆಗಲು ರೆಡಿ ಆಗಿವೆ. ಇದರ ಜೊತೆ ‘ಗೇಮ್ ಚೇಂಜರ್’ ಕೂಡ ಸೇರಿಕೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಹಾಲಿವುಡ್ ಚಿತ್ರದಲ್ಲಿ ರಾಮ್ ಚರಣ್​?

ಆಸ್ಕರ್ ಅವಾರ್ಡ್ ಕಾರ್ಯಕ್ರಮ ಮಾರ್ಚ್ 12ರಂದು ನಡೆದಿದೆ. ಇದಕ್ಕಾಗಿ ‘ಆರ್​ಆರ್​ಆರ್​’ ತಂಡ ಅಮೆರಿಕಕ್ಕೆ ತೆರಳಿದ್ದರು. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ರಾಮ್ ಚರಣ್  ಅಲ್ಲಿನ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. ‘ಹಾಲಿವುಡ್ ಸ್ಟುಡಿಯೋ ಜೊತೆ ಮಾತುಕತೆ ನಡೆಯುತ್ತಿದೆ. ಶೀಘ್ರವೇ ಈ ಬಗ್ಗೆ ಮಾಹಿತಿ ನೀಡ್ತೀನಿ’ ಎಂದು ಅವರು ತಿಳಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 am, Mon, 27 March 23

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್