ಪುನೀತ್​ ಜನ್ಮ ದಿನ: ಗಂಧದಗುಡಿ ಹೊಸ ಪೋಸ್ಟರ್​ ರಿಲೀಸ್​

ಪುನೀತ್​ ರಾಜಕುಮಾರ್​ ಅವರ ಕನಸಿನ ಸಾಕ್ಷ್ಯ ಚಿತ್ರ  ಗಂಧದಗುಡಿಯ ಹೊಸ ಪೋಸ್ಟರ್​ ಬಿಡುಗಡೆಯಾಗಿದೆ. ಪುನೀತ್​ ರಾಜಕುಮಾರ್​ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್​ಕೆ ಪ್ರೊಡಕ್ಷನ್​ ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ.

ಪುನೀತ್​ ಜನ್ಮ ದಿನ: ಗಂಧದಗುಡಿ ಹೊಸ ಪೋಸ್ಟರ್​ ರಿಲೀಸ್​
ಗಂಧದಗುಡಿ ಪೋಸ್ಟರ್​
Follow us
TV9 Web
| Updated By: Pavitra Bhat Jigalemane

Updated on:Mar 17, 2022 | 12:50 PM

ಪುನೀತ್​ ರಾಜಕುಮಾರ್ (Puneeth Rajkumar) ​ ಅವರ ಕನಸಿನ ಸಾಕ್ಷ್ಯ ಚಿತ್ರ  ಗಂಧದಗುಡಿಯ (Gandhada Gudi) ಹೊಸ ಪೋಸ್ಟರ್​ ಬಿಡುಗಡೆಯಾಗಿದೆ. ಪುನೀತ್​ ರಾಜಕುಮಾರ್​ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್​ಕೆ ಪ್ರೊಡಕ್ಷನ್​ (PRK Production) ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ. ಪುನೀತ್​ ಕರ್ನಾಟಕದ ಅರಣ್ಯ ಮತ್ತು ವನ್ಯಜೀವಿಗಳ ಕುರಿತು ಡಾಕ್ಯುಮೆಂಟರಿ ಸಿದ್ಧಪಡಿಸಿದ್ದರು. ಅದಕ್ಕೆ ‘ಗಂಧದ ಗುಡಿ’ ಎಂದು ಶೀರ್ಷಿಕೆ ಇಟ್ಟಿದ್ದರು. ಡಿಸೆಂಬರ್​ನಲ್ಲಿ ಗಂಧದಗುಡಿಯ ಟೈಟಲ್​ ಟೀಸರ್​ ಬಿಡುಗಡೆಯಾಗಿತ್ತು. ಕರುನಾಡಿನ ಪ್ರಕೃತಿ ಸೌಂದರ್ಯವನ್ನು ಮನಮೋಹಕವಾಗಿ ಸೆರೆ ಹಿಡಿದಿರುವ ಈ ಡಾಕ್ಯುಮೆಂಟರಿ ಇದೇ ವರ್ಷ ಥಿಯೇಟರ್​ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ನವೆಂಬರ್​ 1 ಕನ್ನಡ ರಾಜ್ಯೋತ್ಸವದಂದು ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿರಲಿಲ್ಲ. ಡಿ. 6ರಂದು ಟೀಸರ್​​ ಬಿಡುಗಡೆ ಮಾಡಲಾಗಿತ್ತು.

ಜೇಮ್ಸ್​ ರಿಲೀಸ್​  ಇನ್ನು ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್​ ಇಂದು ಬಿಡುಗಡೆಯಾಗಿದೆ. ಅಭಿಮಾನಿಗಳ ಆರಾಧ್ಯದೈವ ಪುನೀತ್​ ನಟನೆ ಕಂಡು ನೋಡುಗರು ಪುಳಕಿತರಾಗಿದ್ದಾರೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಚಿತ್ರ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮರೆಯಾದ ನೆಚ್ಚಿನ ನಟನನ್ನು ಮತ್ತೆ ತೆರೆಯ ಮೇಲೆ ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.  ಗೆಳೆತನದ ಕಥೆ ಹೇಳುವ ಪವರ್​ಫುಲ್​ ಶೋ ನೋಡಿ ಅಭಿಮಾನಿಗಳು ಮತ್ತೊಮ್ಮೆ ಕರ್ನಾಟಕದ ರಾಜರತ್ನನನ್ನು ಕಣ್ತುಂಬಿಕೊಂಡಿದ್ದಾರೆ.

ಇದನ್ನೂ ಓದಿ:

Puneeth Rajkumar: ಪುನೀತ್ ಜತೆಗೆ ಹುಟ್ಟುಹಬ್ಬ ಆಚರಿಸುತ್ತಿದ್ದ ಕ್ಷಣಗಳನ್ನು ನೆನೆದ ಶಿವಣ್ಣ

Published On - 12:47 pm, Thu, 17 March 22

ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ