
ಪುನೀತ್ ರಾಜಕುಮಾರ್ (Puneeth Rajkumar) ಅವರ ಕನಸಿನ ಸಾಕ್ಷ್ಯ ಚಿತ್ರ ಗಂಧದಗುಡಿಯ (Gandhada Gudi) ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್ಕೆ ಪ್ರೊಡಕ್ಷನ್ (PRK Production) ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಪುನೀತ್ ಕರ್ನಾಟಕದ ಅರಣ್ಯ ಮತ್ತು ವನ್ಯಜೀವಿಗಳ ಕುರಿತು ಡಾಕ್ಯುಮೆಂಟರಿ ಸಿದ್ಧಪಡಿಸಿದ್ದರು. ಅದಕ್ಕೆ ‘ಗಂಧದ ಗುಡಿ’ ಎಂದು ಶೀರ್ಷಿಕೆ ಇಟ್ಟಿದ್ದರು. ಡಿಸೆಂಬರ್ನಲ್ಲಿ ಗಂಧದಗುಡಿಯ ಟೈಟಲ್ ಟೀಸರ್ ಬಿಡುಗಡೆಯಾಗಿತ್ತು. ಕರುನಾಡಿನ ಪ್ರಕೃತಿ ಸೌಂದರ್ಯವನ್ನು ಮನಮೋಹಕವಾಗಿ ಸೆರೆ ಹಿಡಿದಿರುವ ಈ ಡಾಕ್ಯುಮೆಂಟರಿ ಇದೇ ವರ್ಷ ಥಿಯೇಟರ್ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಆ ಟೀಸರ್ ರಿಲೀಸ್ ಮಾಡಬೇಕು ಎಂದು ಪುನೀತ್ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್ ರಿಲೀಸ್ ಆಗಿರಲಿಲ್ಲ. ಡಿ. 6ರಂದು ಟೀಸರ್ ಬಿಡುಗಡೆ ಮಾಡಲಾಗಿತ್ತು.
ಜೇಮ್ಸ್ ರಿಲೀಸ್
ಇನ್ನು ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್ ಇಂದು ಬಿಡುಗಡೆಯಾಗಿದೆ. ಅಭಿಮಾನಿಗಳ ಆರಾಧ್ಯದೈವ ಪುನೀತ್ ನಟನೆ ಕಂಡು ನೋಡುಗರು ಪುಳಕಿತರಾಗಿದ್ದಾರೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಚಿತ್ರ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮರೆಯಾದ ನೆಚ್ಚಿನ ನಟನನ್ನು ಮತ್ತೆ ತೆರೆಯ ಮೇಲೆ ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. ಗೆಳೆತನದ ಕಥೆ ಹೇಳುವ ಪವರ್ಫುಲ್ ಶೋ ನೋಡಿ ಅಭಿಮಾನಿಗಳು ಮತ್ತೊಮ್ಮೆ ಕರ್ನಾಟಕದ ರಾಜರತ್ನನನ್ನು ಕಣ್ತುಂಬಿಕೊಂಡಿದ್ದಾರೆ.
ಇದನ್ನೂ ಓದಿ:
Puneeth Rajkumar: ಪುನೀತ್ ಜತೆಗೆ ಹುಟ್ಟುಹಬ್ಬ ಆಚರಿಸುತ್ತಿದ್ದ ಕ್ಷಣಗಳನ್ನು ನೆನೆದ ಶಿವಣ್ಣ
Published On - 12:47 pm, Thu, 17 March 22