ಗಣೇಶ್ ಹೊಸ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆ ಫೈನಲ್; ಬರ್ತ್​ಡೇಗೂ ಮೊದಲು ಸ್ಪೆಷಲ್ ಗಿಫ್ಟ್

ಗಣೇಶ್ ಅವರ ಮುಂದಿನ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಕೊಡಲಾಗಿದೆ. ಇದು ಗಣೇಶ್ ಹೀರೋ ಆಗಿ ನಟಿಸುತ್ತಿರುವ 41ನೇ ಚಿತ್ರ ಅನ್ನೋದು ವಿಶೇಷ.

ಗಣೇಶ್ ಹೊಸ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆ ಫೈನಲ್; ಬರ್ತ್​ಡೇಗೂ ಮೊದಲು ಸ್ಪೆಷಲ್ ಗಿಫ್ಟ್
ಗಣೇಶ್-ಮಾಳವಿಕಾ
Follow us
ರಾಜೇಶ್ ದುಗ್ಗುಮನೆ
|

Updated on:Jul 01, 2023 | 2:16 PM

ನಟ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಜುಲೈ 2ರಂದು ಅವರ ಜನ್ಮದಿನ. ಅವರ ಬರ್ತ್​ಡೇಗೂ ಮೊದಲು ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್​ ಪೋಸ್ಟರ್ ರಿಲೀಸ್ ಆಗಿದೆ. ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi Movie) ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಬರ್ತ್​ಡೇ ಸಂದರ್ಭದಲ್ಲಿ ವಿಶೇಷ ಗಿಫ್ಟ್ ಸಿಕ್ಕಿರೋದು ಫ್ಯಾನ್ಸ್ ಖುಷಿ ಹೆಚ್ಚಿಸಿದೆ.

ಗಣೇಶ್ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಈಗಾಗಲೇ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಕೊಡಲಾಗಿದೆ. ಇದು ಗಣೇಶ್ ಹೀರೋ ಆಗಿ ನಟಿಸುತ್ತಿರುವ 41ನೇ ಚಿತ್ರ ಅನ್ನೋದು ವಿಶೇಷ.

ಕನ್ನಡದಲ್ಲಿ ಹಲವು ಜನಪ್ರಿಯ ಚಿತ್ರಗಳನ್ನು ಶ್ರೀನಿವಾಸರಾಜು ನಿರ್ದೇಶಿಸಿದ್ದಾರೆ. ಅವರು ಈಗ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಗಣೇಶ್ ಸಿನಿಮಾಗಳು ಫ್ಯಾಮಿಲಿ ಎಂಟರ್​​ಟೇನ್​ಮೆಂಟ್ ಅಂಶ ಹೊಂದಿರುತ್ತದೆ. ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಕೂಡ ಇದೇ ರೀತಿಯ ಅಂಶಗಳನ್ನು ಹೊಂದಿರಲಿದೆ. ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಶೂಟಿಂಗ್ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ರಾಜಸ್ಥಾನ, ಮೈಸೂರು ಹಾಗೂ ಯುರೋಪ್​ನಲ್ಲಿ ಶೂಟಿಂಗ್ ಮಾಡಲು ಪ್ಲಾನ್ ನಡೆಸಲಾಗಿದೆ.

ಇದನ್ನೂ ಓದಿ: ಕಪಿಲ್ ಶರ್ಮಾ ಭೇಟಿ ಮಾಡಿದ ಗಣೇಶ್; ಜನಪ್ರಿಯ ಶೋಗೆ ಗೋಲ್ಡನ್ ಸ್ಟಾರ್ ಅತಿಥಿ

ತ್ರಿಶೂಲ್ ಎಂಟರ್​ಟೇನ್ಮೆಂಟ್ ಲಾಂಛನದ ಅಡಿಯಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ 3ನೇ ಸಿನಿಮಾ. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು. ಗಣೇಶ್​​ಗೆ ನಾಯಕಿಯಾಗಿ ಮಾಳವಿಕಾ ನಾಯರ್ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶಿವಧ್ವಜ್ ಶೆಟ್ಟಿ, ಶ್ರೀನಿವಾಸಮೂರ್ತಿ, ಬೆನಕ ಗಿರಿ ಮೊದಲಾದವರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:11 pm, Sat, 1 July 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು