AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳದಿಂದ ಬೇಸತ್ತ ನಟಿ; ಪ್ಯಾನಿಕ್ ಅಟ್ಯಾಕ್​​ನಿಂದ ಕಂಗಾಲು

ನಟಿ ಗಾಯತ್ರಿ ಗುಪ್ತಾ ತೀವ್ರ ಮಾನಸಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸಾಯಿ ಪಲ್ಲವಿ ಸ್ನೇಹಿತೆಯಾಗಿ ಗುರುತಿಸಿಕೊಂಡ ಇವರು, ಇತ್ತೀಚೆಗೆ ವಿಡಿಯೋ ಹಂಚಿಕೊಂಡು, ಪ್ಯಾನಿಕ್ ಅಟ್ಯಾಕ್ ಹಾಗೂ ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿರುವುದಾಗಿ ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಎದುರಿಸಿದ ಲೈಂಗಿಕ ಕಿರುಕುಳವೇ ಇದಕ್ಕೆ ಕಾರಣವೆಂದು ಹೇಳಿದ್ದು, ಚಿಕಿತ್ಸೆ ಪಡೆಯಲು ಪ್ರಯತ್ನಿಸುತ್ತಿದ್ದರೂ ಪ್ರಯೋಜನವಾಗಿಲ್ಲ ಎಂದಿದ್ದಾರೆ. ತಕ್ಷಣದ ಸಹಾಯಕ್ಕಾಗಿ ಅವರು ಮೊರೆ ಇಟ್ಟಿದ್ದಾರೆ.

ಲೈಂಗಿಕ ಕಿರುಕುಳದಿಂದ ಬೇಸತ್ತ ನಟಿ; ಪ್ಯಾನಿಕ್ ಅಟ್ಯಾಕ್​​ನಿಂದ ಕಂಗಾಲು
ಗಾಯತ್ರಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 23, 2026 | 7:45 AM

Share

ನಿರ್ದೇಶಕ ಶೇಖರ್ ಕಮ್ಮುಲ ಅವರ ‘ಫಿದಾ’ ಚಿತ್ರದಲ್ಲಿ ಸಾಯಿ ಪಲ್ಲವಿ (Sai Palavi) ಸ್ನೇಹಿತೆಯಾಗಿ ನಟಿಸುವ ಮೂಲಕ ಗಾಯತ್ರಿ ಗುಪ್ತಾ ಗುರುತಿಸಿಕೊಂಡರು. ಇದರೊಂದಿಗೆ ‘ಕೊಬ್ಬರ್ ಮಟ್ಟಾ’, ‘ಐಸ್ ಕ್ರೀಮ್’, ‘ಅಮರ್ ಅಕ್ಬರ್ ಆಂಟನಿ’, ‘ಬುರ್ರಕಥಾ’ ಮತ್ತು ‘ಸೀತಾ ಆನ್ ದಿ ರೋಡ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಸಿನಿಮಾಗಳಲ್ಲದೆ ತಮ್ಮ ದಿಟ್ಟ ಹೇಳಿಕೆ ಮತ್ತು ನಿರ್ಮಾಪಕರಿಂದ ಎದುರಿಸಿದ ಲೈಂಗಿಕ ಕಿರುಕುಳದ ಕುರಿತಾದ ಸಂವೇದನಾಶೀಲ ಹೇಳಿಕೆಗಳಿಂದಲೂ ಅವರು ಸದಾ ಸುದ್ದಿಯಲ್ಲಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದ ಗಾಯತ್ರಿ, ತಾವು ತೀವ್ರ ಪ್ಯಾನಿಕ್ ಅಟ್ಯಾಕ್ ಮತ್ತು ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿರುವುದಾಗಿ ಆತಂಕ ವ್ಯಕ್ತಪಡಿಸಿದ್ದರು. ಲೈಂಗಿಕ ದೌರ್ಜನ್ಯದಿಂದಾಗಿ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಜೀವನದಲ್ಲಿ ಏನು ನಡೆಯುತ್ತಿದೆ ಎಂದು ಅರ್ಥವಾಗುತ್ತಿಲ್ಲ ಎಂದಿದ್ದಾರೆ. ಚಿಕಿತ್ಸೆ ಪಡೆಯಲು ಪ್ರಯತ್ನಿಸುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದರು.

ಸಹಾಯಕ್ಕಾಗಿ ‘ವಾಯ್ಸ್ ಆಫ್ ವುಮೆನ್’ ಸಂಸ್ಥೆಯನ್ನು ಸಂಪರ್ಕಿಸಿದರೂ ಸ್ಪಂದನೆ ಸಿಗಲಿಲ್ಲ ಎಂದು ಗಾಯತ್ರಿ ಹೇಳಿದ್ದಾರೆ. ಸಾಯುವ ಆಲೋಚನೆಯಿಂದ ಹೊರಬರಲು ತಮಗೆ ಯಾರಾದರೂ ಬೆಂಬಲ ನೀಡುವವರ ಅಗತ್ಯವಿದೆ ಎಂದಿರುವ ಅವರು, ಈ ಪರಿಸ್ಥಿತಿಯಿಂದ ಹೊರಬರಲು ತಮಗೆ ವಕೀಲರ ಸಹಾಯ ಬೇಕೇ ಅಥವಾ ಚಿಕಿತ್ಸಕರ ಅಗತ್ಯವಿದೆಯೇ ಎಂಬ ಗೊಂದಲದಲ್ಲಿದ್ದಾರೆ.

ಇದನ್ನೂ ಓದಿ: ಧನುಷ್ ಮುಂದಿನ ಚಿತ್ರದಲ್ಲಿ ಸಾಯಿ ಪಲ್ಲವಿ ಪೊಲೀಸ್ ಅಧಿಕಾರಿ? ವೈರಲ್ ಆಗ್ತಿದೆ ‘ಡಿ55’ ಅಪ್‌ಡೇಟ್

‘ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ತಕ್ಷಣದ ಸಹಾಯದ ಅಗತ್ಯವಿದೆ’ ಎಂದು ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ. ‘ನಟಿಸುವವರೆಲ್ಲರೂ ಕೇವಲ ನಾಟಕ ಆಡುತ್ತಾರೆ, ಆದರೆ ವಾಸ್ತವದಲ್ಲಿ ಯಾರೂ ಕಾಳಜಿ ವಹಿಸುವುದಿಲ್ಲ’ ಎಂದು ಬೇಸರ ಹೊರಹಾಕಿದ್ದಾರೆ. ಸದ್ಯ, ಈ ವಿಡಿಯೋವನ್ನು ಪೋಸ್ಟ್ ಮಾಡಿದ ಕೆಲವೇ ಸಮಯದ ನಂತರ ಗಾಯತ್ರಿ ಅದನ್ನು ಡಿಲೀಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ