AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾರ್ಜುನಗೆ ಮತ್ತೆ ಶಾಕ್ ಕೊಟ್ಟ ಸರ್ಕಾರ, ಸ್ಟುಡಿಯೋ ವಿರುದ್ಧ ತೆರಿಗೆ ವಂಚನೆ ಆರೋಪ

Akkineni Nagarjuna: ನಟ ನಾಗಾರ್ಜುನಗೆ ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಈಗಾಗಲೇ ನಾಗಾರ್ಜುನಗೆ ಸೇರಿದ ಕಲ್ಯಾಣ ಮಂಟಪವನ್ನು ನೆಲಸಮ ಮಾಡಿದೆ. ಇದೀಗ ನಾಗಾರ್ಜುನ ಒಡೆತನದ ಅನ್ನಪೂರ್ಣ ಸ್ಟುಡಿಯೋಗೆ ನೊಟೀಸ್ ಜಾರಿ ಮಾಡಿದೆ. ಅನ್ನಪೂರ್ಣ ಸ್ಟುಡಿಯೋ ಮಾತ್ರವೇ ಅಲ್ಲದೆ ರಾಮಾನಾಯ್ಡು ಸ್ಟುಡಿಯೋಕ್ಕೂ ಸಹ ನೊಟೀಸ್ ನೀಡಲಾಗಿದೆ.

ನಾಗಾರ್ಜುನಗೆ ಮತ್ತೆ ಶಾಕ್ ಕೊಟ್ಟ ಸರ್ಕಾರ, ಸ್ಟುಡಿಯೋ ವಿರುದ್ಧ ತೆರಿಗೆ ವಂಚನೆ ಆರೋಪ
Annapoorna Studio
ಮಂಜುನಾಥ ಸಿ.
|

Updated on: Nov 21, 2025 | 1:20 PM

Share

ನಟ ನಾಗಾರ್ಜುನಗೆ (Nagarjuna) ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ. ಈ ಹಿಂದೆ ನಾಗಾರ್ಜುನಗೆ ಸೇರಿದ ದೊಡ್ಡ ಕಲ್ಯಾಣ ಮಂಟಪವನ್ನು ನೊಟೀಸ್ ನೀಡಿ ನೆಲಸಮಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ನಾಗಾರ್ಜುನ ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣ ಇನ್ನೂ ಚಾಲ್ತಿಯಲ್ಲಿದೆ. ಇದು ಹೀಗಿರುವಾಗ ಮತ್ತೊಂದು ಶಾಕ್ ಎದುರಾಗಿದೆ. ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಇದೀಗ ನಾಗಾರ್ಜುನ ಒಡೆತನದ ಅನ್ನಪೂರ್ಣ ಸ್ಟುಡಿಯೋಗೆ ನೊಟೀಸ್ ನೀಡಿದೆ. ಅನ್ನಪೂರ್ಣ ಸ್ಟುಡಿಯೋ ಮಾತ್ರವೇ ಅಲ್ಲದೆ ಜನಪ್ರಿಯ ರಾಮಾನಾಯ್ಡು ಸ್ಟುಡಿಯೋಗೂ ನೊಟೀಸ್ ಜಾರಿ ಮಾಡಲಾಗಿದೆ.

ಅನ್ನಪೂರ್ಣ ಸ್ಟುಡಿಯೋಸ್ ಮತ್ತು ರಾಮಾನಾಯ್ಡು ಸ್ಟುಡಿಯೋಸ್​​ಗಳು ತೆರಿಗೆ ವಂಚನೆ ಮಾಡಿರುವ ಆರೋಪವನ್ನು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಮಾಡಿದ್ದು, ಈ ಕುರಿತು ಎರಡೂ ಫಿಲಂಸಿಟಿಗಳಿಗೆ ನೊಟೀಸ್ ಜಾರಿ ಮಾಡಿದೆ. ತಪ್ಪು ಲೆಕ್ಕ ತೋರಿಸಿ ತೆರಿಗೆ ವಂಚನೆ ಮಾಡಿರುವ ಆರೋಪವನ್ನು ಮುನ್ಸಿಪಲ್ ಕಾರ್ಪೊರೇಷನ್ ಮಾಡಿದ್ದು, ನೊಟೀಸ್​​ಗೆ ಉತ್ತರಿಸುವಂತೆ ಸೂಚನೆ ನೀಡಿದೆ.

ನಾಗಾರ್ಜುನ ಒಡೆತನದ ಅನ್ನಪೂರ್ಣ ಸ್ಟುಡಿಯೋ 1.92 ಚದರ ಅಡಿ ವಿಸ್ತೀರ್ಣ ಹೊಂದಿದೆ ಆದರೆ ಕೇವಲ 8100 ಚದರ ಅಡಿಯ ವಿಸ್ತೀರ್ಣವಷ್ಟೆ ಲೆಕ್ಕದಲ್ಲಿ ತೋರಿಸಿ ಅಷ್ಟು ವಿಸ್ತೀರ್ಣಕ್ಕೆ ಮಾತ್ರವೇ ತೆರಿಗೆ ಪಾವತಿ ಮಾಡುತ್ತಿದೆ. ಇನ್ನು ರಾಮಾನಾಯ್ಡು ಸ್ಟುಡಿಯೋ 11.52 ಲಕ್ಷ ಚದರ ಅಡಿಗಳಷ್ಟು ಬೃಹತ್ ವಿಸ್ತೀರ್ಣ ಹೊಂದಿದೆ ಆದರೆ 49 ಸಾವಿರ ಚದರ ಅಡಿಗಳಿಗೆ ಮಾತ್ರವೇ ತೆರಿಗೆ ಪಾವತಿ ಮಾಡುತ್ತಿದೆ ಎಂದು ಮುನ್ಸಿಪಲ್ ಕಾರ್ಪೊರೇಷನ್ ನೊಟೀಸ್​​ನಲ್ಲಿ ಹೇಳಿದೆ.

ಇದನ್ನೂ ಓದಿ:ಪೊಲೀಸ್ ಆಯುಕ್ತರ ಭೇಟಿಯಾಗಿ ಧನ್ಯವಾದ ಹೇಳಿದ ಚಿರಂಜೀವಿ-ನಾಗಾರ್ಜುನ: ಕಾರಣವೇನು?

ರಾಮಾನಾಯ್ಡು ಸ್ಟುಡಿಯೋ 2.73 ಲಕ್ಷ ರೂಪಾಯಿ ತೆರಿಗೆ ಪಾವತಿ ಮಾಡಬೇಕು ಆದರೆ ಈಗ ಕೇವಲ 7600 ರೂಪಾಯಿಗಳ ತೆರಿಗೆಯನ್ನಷ್ಟೆ ಪಾವತಿ ಮಾಡಿದೆ. ಇದೇ ರೀತಿ ಅನ್ನಪೂರ್ಣ ಸ್ಟುಡಿಯೋ ಸಹ ಕಡಿಮೆ ಮೊತ್ತದ ತೆರಿಗೆ ಪಾವತಿ ಮಾಡುತ್ತಿದೆ ಎಂದು ನೊಟೀಸ್​​ನಲ್ಲಿ ಆರೋಪಿಸಲಾಗಿದೆ. ಇದೀಗ ಎರಡೂ ಸ್ಟುಡಿಯೋಗಳಿಗೆ ನೊಟೀಸ್ ನೀಡಿರುವ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್, ಪೂರ್ಣ ವಿಸ್ತೀರ್ಣಕ್ಕೆ ತೆರಿಗೆ ಪಾವತಿಸುವಂತೆ ತಿಳಿಸಿದೆ. ಅಲ್ಲದೆ ಹಿಂದಿನ ವರ್ಷಗಳ ತೆರಿಗೆಯನ್ನು ಸೇರಿಸಿ ದಂಡದ ಸಮೇತ ಪಾವತಿ ಮಾಡುವಂತೆ ಸೂಚನೆ ನೀಡಿದೆ.

ಅನ್ನಪೂರ್ಣ ಸ್ಟುಡಿಯೋಸ್ ನಾಗಾರ್ಜುನ ಅವರ ಒಡೆತನದಲ್ಲಿದ್ದರೆ ರಾಮಾನಾಯ್ಡು ಸ್ಡುಡಿಯೋ ದಗ್ಗುಬಾಟಿ ಕುಟುಂಬದ ಸುರೇಶ್ ಅವರ ಒಡೆತನದಲ್ಲಿದೆ. ಇವರು ಖ್ಯಾತ ನಟ ರಾಣಾ ದಗ್ಗುಬಾಟಿ ಅವರ ತಂದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ