ರಶ್ಮಿಕಾ ಮಂದಣ್ಣ ಜನ್ಮದಿನಕ್ಕೆ ಗರ್ಲ್​​ಫ್ರೆಂಡ್​ ಕಡೆಯಿಂದ ಸಿಗುತ್ತಾ ವಿಶೇಷ ಗಿಫ್ಟ್​?

ಏ.5ರಂದು ನಟಿ ರಶ್ಮಿಕಾ ಮಂದಣ್ಣ ಅವರನ್ನು ಭೇಟಿಯಾಗಿ ಹುಟ್ಟುಹಬ್ಬದ ಶುಭಾಶಯ ಕೋರಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಅದು ಈಡೇರುವುದು ಕಷ್ಟ. ಯಾಕೆಂದರೆ, ಅಂದು ರಶ್ಮಿಕಾ ಮಂದಣ್ಣ ಅವರು ಭಾರತದಲ್ಲಿ ಇರುವುದಿಲ್ಲ ಎನ್ನಲಾಗುತ್ತಿದೆ. ಸಣ್ಣ ಬ್ರೇಕ್​ ಪಡೆದು ಅವರು ವಿದೇಶಕ್ಕೆ ಹಾರಲಿದ್ದಾರೆ.

ರಶ್ಮಿಕಾ ಮಂದಣ್ಣ ಜನ್ಮದಿನಕ್ಕೆ ಗರ್ಲ್​​ಫ್ರೆಂಡ್​ ಕಡೆಯಿಂದ ಸಿಗುತ್ತಾ ವಿಶೇಷ ಗಿಫ್ಟ್​?
ರಶ್ಮಿಕಾ ಮಂದಣ್ಣ
Follow us
ಮದನ್​ ಕುಮಾರ್​
|

Updated on: Apr 01, 2024 | 4:45 PM

ಅಲ್ಲು ಅರ್ಜುನ್‌ ಜೊತೆಗಿನ ‘ಪುಷ್ಪ’ ಮತ್ತು ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಅನಿಮಲ್​’ ಸೇರಿದಂತೆ ಕೆಲವು ಪ್ಯಾನ್-ಇಂಡಿಯನ್ ಸಿನಿಮಾಗಳ ಯಶಸ್ಸಿನಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ತೇಲುತ್ತಿದ್ದಾರೆ. ಸ್ಟಾರ್​ ನಟರ ಜತೆ ತೆರೆ ಹಂಚಿಕೊಂಡು ಯಶಸ್ಸಿನ ಉತ್ತುಂಗದಲ್ಲಿ ಇರುವ ಅವರು ಈಗ ‘ಪುಷ್ಪ 2’ ಸಿನಿಮಾದ ನಿರೀಕ್ಷೆಯಲ್ಲಿದ್ದಾರೆ. ಆ ಸಿನಿಮಾ ತೆರೆಕಂಡ ಬಳಿಕ ಅವರು ಧನುಷ್​ ಜೊತೆ ‘ಕುಬೇರ’ ಸಿನಿಮಾದಲ್ಲಿ ಬ್ಯುಸಿ ಆಗಲಿದ್ದಾರೆ. ಅದಕ್ಕೂ ಮುನ್ನ ಟಾಲಿವುಡ್​ನಲ್ಲಿ ಸೋಲೋ ಸಿನಿಮಾ ಬಗ್ಗೆ ಗಮನ ಹರಿಸಲು ರಶ್ಮಿಕಾ ಮಂದಣ್ಣ ನಿರ್ಧರಿಸಿದ್ದಾರೆ. ರಶ್ಮಿಕಾ ನಟನೆಯ ‘ಗರ್ಲ್​ಫ್ರೆಂಡ್​’ (Girlfriend) ಸಿನಿಮಾದಿಂದ ಬರ್ತ್​ಡೇ (Rashmika Mandanna Birthday) ಗಿಫ್ಟ್​ ಸಿಗುವ ನಿರೀಕ್ಷೆ ಇದೆ.

ರಶ್ಮಿಕಾ ಮಂದಣ್ಣ ಅವರ ಜನ್ಮದಿನ ಸಮೀಪಿಸಿದೆ. ಏಪ್ರಿಲ್​ 5ರಂದು ಅವರು ಬರ್ತ್​ಡೇ ಆಚರಿಸಿಕೊಳ್ಳಲಿದ್ದಾರೆ. ತಮ್ಮ ನೆಚ್ಚಿನ ನಟಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಸೆಲೆಬ್ರೇಟ್​ ಮಾಡಲು ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳು ತಯಾರಿ ಮಾಡಿಕೊಳ್ಳುತ್ತಿದಾರೆ. ಅವರು ನಟಿಸುತ್ತಿರುವ ಸಿನಿಮಾಗಳಿಂದ ವಿಶೇಷ ಪೋಸ್ಟರ್​ಗಳು ಬಿಡುಗಡೆ ಆಗುವ ಸಾಧ್ಯತೆ ಹೆಚ್ಚಿದೆ.

ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬದ ಇನ್ನೊಂದು ಪ್ರಮುಖ ಆಕರ್ಷಣೆ ಎಂದರೆ ‘ಗರ್ಲ್​ಫ್ರೆಂಡ್​’ ಸಿನಿಮಾದ ಟೀಸರ್. ವರದಿಗಳ ಪ್ರಕಾರ, ‘ಗರ್ಲ್​ಫ್ರೆಂಡ್​’ ಸಿನಿಮಾ ತಂಡದಿಂದ ಹೊಸ ಟೀಸರ್​ ಬಿಡುಗಡೆ ಆಗುವ ಸಾಧ್ಯತೆ ಇದೆ. ಇದು ಆಕ್ಷನ್ ಭರಿತ ಲವ್ ಸ್ಟೋರಿ ಸಿನಿಮಾ ಎಂಬ ಸುದ್ದಿ ಇದೆ. ಏಪ್ರಿಲ್ 5ರಂದು ಈ ಸಿನಿಮಾದ ಟೀಸರ್​ ಬಿಡುಗಡೆ ಆದರೆ ಆಗ ಕಥಾಹಂದರದ ಬಗ್ಗೆ ಒಂದು ಸುಳಿವು ಸಿಕ್ಕಂತಾಗಲಿದೆ. ಈ ಸಿನಿಮಾ ದಕ್ಷಿಣದ ಎಲ್ಲ ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ ಶ್ರೀವಲ್ಲಿ ಲುಕ್​ ಲೀಕ್​; ರಶ್ಮಿಕಾ ನೋಡಲು ಮುಗಿಬಿದ್ದ ಫ್ಯಾನ್ಸ್​

ಏಪ್ರಿಲ್​ 5ರಂದು ರಶ್ಮಿಕಾ ಮಂದಣ್ಣ ಅವರನ್ನು ಭೇಟಿಯಾಗಿ ಹುಟ್ಟುಹಬ್ಬದ ಶುಭಾಶಯ ಕೋರಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಅದು ಈಡೇರುವುದು ಕಷ್ಟ. ಯಾಕೆಂದರೆ, ಅಂದು ರಶ್ಮಿಕಾ ಮಂದಣ್ಣ ಅವರು ಭಾರತದಲ್ಲಿ ಇರುವುದಿಲ್ಲ ಎನ್ನಲಾಗುತ್ತಿದೆ. ಸಣ್ಣ ಬ್ರೇಕ್​ ಪಡೆದು ಅವರು ವಿದೇಶಕ್ಕೆ ಹಾರಲಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ಟೀಸರ್​ ಹಂಚಿಕೊಳ್ಳಲಿದ್ದು, ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲಿದ್ದಾರೆ ಎಂದು ಸುದ್ದಿ ಆಗಿದೆ.

ಇದನ್ನೂ ಓದಿ: ‘ಇನ್ಮುಂದೆ ಇಂಥ ವಿಡಿಯೋ ಜಾಸ್ತಿ ನೋಡುತ್ತೀರಿ’; ಸ್ಫೂರ್ತಿ ನೀಡಲು ಮುಂದಾದ ರಶ್ಮಿಕಾ

ವಿದೇಶದಲ್ಲೂ ರಶ್ಮಿಕಾ ಮಂದಣ್ಣ ಅವರಿಗೆ ಅಭಿಮಾನಿಗಳು ಇದ್ದಾರೆ. ಕೆಲವೇ ವಾರಗಳ ಹಿಂದೆ ಅವರು ಜಪಾನ್​ಗೆ ತೆರಳಿದ್ದರು. ಅಲ್ಲಿನ ಅಭಿಮಾನಿಗಳನ್ನು ಭೇಟಿಯಾಗಿ ಖುಷಿಪಟ್ಟಿದ್ದರು. ‘ಪುಷ್ಪ 2’ ಸಿನಿಮಾ ಬಿಡುಗಡೆ ಆದ ಬಳಿಕ ಅವರ ಫ್ಯಾನ್​ ಫಾಲೋಯಿಂಗ್​ ಹಿರಿದಾಗಲಿದೆ. ಈ ಸಿನಿಮಾಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.