AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಕಳ್ಳಸಾಗಾಣಿಕೆ: ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ ನಟಿ ರನ್ಯಾ ರಾವ್

ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರು ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಗಿತ್ತು. 64 ನೇ ಸಿಸಿಹೆಚ್ ನ್ಯಾಯಾಲಯದಿಂದ ಜಾಮೀನು ನಿರಾಕರಿಸಲ್ಪಟ್ಟ ನಂತರ, ಅವರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಇದೇ ವೇಳೆ, ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಲಾಗಿದೆ.

ಚಿನ್ನ ಕಳ್ಳಸಾಗಾಣಿಕೆ: ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ ನಟಿ ರನ್ಯಾ ರಾವ್
ರನ್ಯಾ ರಾವ್​
Ramesha M
| Updated By: ವಿವೇಕ ಬಿರಾದಾರ|

Updated on: Apr 01, 2025 | 3:46 PM

Share

ಬೆಂಗಳೂರು, ಏಪ್ರಿಲ್​ 01: ಚಿನ್ನ ಕಳ್ಳಸಾಗಾಣಿಕೆ (Gold Smugling) ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ (Ranya Rao) ಜಾಮೀನು ಕೋರಿ ಹೈಕೋರ್ಟ್​ಗೆ (High Court) ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್​ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿದ್ದರು. ಸದ್ಯ, ನಟಿ ರನ್ಯಾ ರಾವ್​ ಪರಪ್ಪನ ಅಗ್ರಹಾದಲ್ಲಿದ್ದಾರೆ.

ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ರನ್ಯಾ ರಾವ್​ ಜಾಮೀನು ಕೋರಿ 64 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಹಲವು ಕಾರಣಗಳನ್ನು ನೀಡಿ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ, ರನ್ಯಾ ರಾವ್ ಪರ ವಕೀಲರು ಹೈಕೋರ್ಟ್​ ಮೆಟ್ಟಿಲು ಏರಿದ್ದಾರೆ. ನಟಿ ರನ್ಯಾ ರಾವ್​ಗೆ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್​ಗೆ ತಾತ್ಕಾಲಿಕ ರಿಲೀಫ್

ನಟಿ ರನ್ಯಾ ರಾವ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ನಟಿ ರನ್ಯಾ ರಾವ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ರನ್ಯಾ ಸಂಬಂಧಿ ಅಕುಲಾ ಅನುರಾಧ ದೂರು, ನೀಡಿದ್ದು ಎಫ್​ಐಆರ್​ ದಾಖಲಿಸಲಾಗಿತ್ತು. ಎಫ್​ಐಆರ್​ ರದ್ದು ಕೋರಿ ಬಸನಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ ಮೆಟ್ಟಿಲು ಏರಿದ್ದರು.

ಇದನ್ನೂ ಓದಿ
Image
ರನ್ಯಾ​​ ಗೋಲ್ಡ್ ಸ್ಮಂಗ್ಲಿಂಗ್​ ಕೇಸ್​: 2ನೇ ಆರೋಪಿ ತರುಣ್​ಗೆ ಬಿಗ್ ಶಾಕ್​!
Image
ಚಿನ್ನ ಕಳ್ಳಸಾಗಾಣಿಕೆ ಕೇಸ್​: ದುಬೈನಲ್ಲಿ ಕಂಪನಿ ತೆರದಿದ್ರು ನಟಿ ರನ್ಯಾ
Image
ರನ್ಯಾ ಪ್ರಕರಣಕ್ಕೆ ಇಡಿ ಎಂಟ್ರಿ; ಹೊರ ಬಿತ್ತು ಹವಾಲಾ ದಂಧೆ
Image
ನಟಿ ರನ್ಯಾ ರಾವ್​ ಕೇಸ್‌: ಸಿಐಡಿ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರ!

ಇದೀಗ, ಹೈಕೋರ್ಟ್​ ಯತ್ನಾಳ್​ ವಿರುದ್ಧದ ಎಫ್​ಐಆರ್​ಗೆ ಏಪ್ರಿಲ್ 28ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿನ್​ಎಸ್​ ಸೆಕ್ಷನ್​ 79 ಅನ್ವಯವಾಗುವುದಿಲ್ಲವೆಂದು ಯತ್ನಾಳ್ ಪರ ವಕೀಲರು ವಾದಿಸಿದ್ದರು.

ಇದನ್ನೂ ಓಸಿ: ರನ್ಯಾ ರಾವ್ ಚಿನ್ನ ಕಳ್ಳ ಸಾಗಣೆ ಪ್ರಕರಣ: ಡಿಆರ್​​​ಐಗೆ ಸಿಕ್ಕ ಡಿಜಿಟಲ್ ಸಾಕ್ಷಿಯಲ್ಲಿ ಸ್ಮಗ್ಲಿಂಗ್ ರಹಸ್ಯ ಬಯಲು

ಪ್ರೋಟೋಕಾಲ್ ದುರುಪಯೋಗ ಆಗಿರುವುದು ದೃಢ

ನಟಿ ರನ್ಯಾ ರಾವ್​ ಅವರು ಪೊಲೀಸ್​ ಪ್ರೋಟೋಕಾಲ್​ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಐಎಎಸ್​ ಅಧಿಕಾರಿ ಗೌರವ್ ಗುಪ್ತಾ ಸಲ್ಲಿಸಿರುವ ವರದಿಯಲ್ಲಿ ದೃಢವಾಗಿದೆ. ಮಲತಂದೆ, ಡಿಜಿಪಿ ರಾಮಚಂದ್ರರಾವ್​ ಅವರು ತನ್ನ ಮಗಳಿಗಾಗಿ ಪೊಲೀಸ್​ ಪ್ರೋಟೋಕಾಲ್​ ದುಪಯೋಗ ಪಡಿಸಿಕೊಂಡಿರುವುದು ಸಾಕ್ಷಿಗಳ ದೃಢವಾಗಿದೆ. ಪ್ರೋಟೋಕಾಲ್ ದುರುಪಯೋಗದ ತನಿಖಾ ವರದಿಯನ್ನು ಐಎಎಸ್​ ಅಧಿಕಾರಿ ಗೌರವ್ ಗುಪ್ತಾ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್