AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಳ್ಳೆಯ ಸಮಯ ಈಗ ಶುರುವಾಗಿದೆ’; ‘ಜವಾನ್’ ಯಶಸ್ಸಿನ ಬಗ್ಗೆ ನಯನತಾರಾ ಮಾತು

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿರೋದು ತಮಿಳು ನಿರ್ದೇಶಕ ಅಟ್ಲಿ. ಈ ಕಾರಣಕ್ಕೆ ಅಟ್ಲಿ ನಾಯಕಿ ಸ್ಥಾನಕ್ಕೆ ತಮಿಳು ನಟಿ ನಯನತಾರಾ ಅವರನ್ನು ಆಯ್ಕೆ ಮಾಡಿಕೊಂಡರು. ಅವರು ಈ ಚಿತ್ರದಲ್ಲಿ ಆ್ಯಕ್ಷನ್ ಮೆರೆದಿದ್ದಾರೆ.

‘ಒಳ್ಳೆಯ ಸಮಯ ಈಗ ಶುರುವಾಗಿದೆ’; ‘ಜವಾನ್’ ಯಶಸ್ಸಿನ ಬಗ್ಗೆ ನಯನತಾರಾ ಮಾತು
ನಯನತಾರಾ
ರಾಜೇಶ್ ದುಗ್ಗುಮನೆ
|

Updated on: Sep 13, 2023 | 1:00 PM

Share

ನಟಿ ನಯನತಾರಾ (Nayanthara) ಬಾಳಲ್ಲಿ ಎಲ್ಲವೂ ಒಳ್ಳೆಯದಾಗುತ್ತಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ವಿಘ್ನೇಶ್ ಶಿವನ್ ಅವರನ್ನು ನಯನತಾರಾ ಕಳೆದ ವರ್ಷ ಮದುವೆ ಆದರು. ಬಾಡಿಗೆ ತಾಯ್ತನದ ಮೂಲಕ ಅವರು ಅವಳಿ ಮಕ್ಕಳನ್ನು ಪಡೆದರು. ಮಕ್ಕಳ ಆರೈಕೆ ಜೊತೆಗೆ ಚಿತ್ರರಂಗದಲ್ಲೂ ತೊಡಗಿಕೊಂಡಿದ್ದಾರೆ. ಈಗ ನಯನತಾರಾ ನಟನೆಯ ‘ಜವಾನ್’ ಸಿನಿಮಾ (Jawan Movie) ಸೂಪರ್ ಹಿಟ್ ಆಗಿದೆ. ಈ ಬೆನ್ನಲ್ಲೇ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಪೋಸ್ಟ್ ಒಂದನ್ನು ಹಾಕಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿರೋದು ತಮಿಳು ನಿರ್ದೇಶಕ ಅಟ್ಲಿ. ಈ ಕಾರಣಕ್ಕೆ ಅಟ್ಲಿ ನಾಯಕಿ ಸ್ಥಾನಕ್ಕೆ ತಮಿಳು ನಟಿ ನಯನತಾರಾ ಅವರನ್ನು ಆಯ್ಕೆ ಮಾಡಿಕೊಂಡರು. ಅವರು ಈ ಚಿತ್ರದಲ್ಲಿ ಆ್ಯಕ್ಷನ್ ಮೆರೆದಿದ್ದಾರೆ. ನಯನತಾರಾ ನಟನೆ ಅನೇಕರಿಗೆ ಇಷ್ಟವಾಗಿದೆ. ಈ ಗೆಲುವಿನ ಬೆನ್ನಲ್ಲೇ ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಸ್ಟೇಟಸ್ ಒಂದನ್ನು ಹಂಚಿಕೊಂಡಿದ್ದಾರೆ. ‘ಒಳ್ಳೆಯ ಸಮಯ ಈಗ ಶುರುವಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ನಯನತಾರಾ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇದರ ಜೊತೆಗೆ ಸಾಕಷ್ಟು ವಿವಾದಗಳನ್ನು ಕೂಡ ಮಾಡಿಕೊಂಡಿದ್ದಾರೆ. ಅವರ ಸಿನಿಮಾಗಳು ಸೋತಾಗ ಅನೇಕರು ಟೀಕೆ ಮಾಡಿದ್ದೂ ಇದೆ. ಈಗ ‘ಜವಾನ್’ ಸಿನಿಮಾದಿಂದ ಅವರಿಗೆ ಬೇಡಿಕೆ ಹೆಚ್ಚಿದೆ. ಈ ಕಾರಣದಿಂದಲೇ ನಯನತಾರಾ ಈ ರೀತಿಯ ಪೋಸ್ಟ್​ ಹಾಕಿದ್ದಾರೆ ಎನ್ನಲಾಗುತ್ತಿದೆ.

ನಯನತಾರಾ ಅವರು ಪ್ರತಿ ಸಿನಿಮಾಗೆ 8-10 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದರು. ‘ಜವಾನ್’ ಚಿತ್ರಕ್ಕಾಗಿ ಅವರು 11 ಕೋಟಿ ರೂಪಾಯಿ ಪಡೆದಿದ್ದರು. ಈ ಸಿನಿಮಾ ಯಶಸ್ಸಿನ ಬಳಿಕ ಅವರು ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದು ನಿರ್ಮಾಪಕರಿಗೆ ಹೊರೆ ಆಗಲಿದೆ. ದೊಡ್ಡ ಬಜೆಟ್ ಚಿತ್ರಗಳು ನಯನತಾರಾ ಅವರ ಕಾಲ್​ಶಿಟ್ ಪಡೆಯಲು ಪ್ರಯತ್ನಿಸುತ್ತಿವೆ.

ಇದನ್ನೂ ಓದಿ: ಜವಾನ್ ಸಿನಿಮಾದ ನಾಯಕಿ ನಯನತಾರಾ, ವಿಲನ್ ವಿಜಯ್ ಸೇತುಪತಿ ಸಂಭಾವನೆ ಎಷ್ಟು?

‘ಜವಾನ್’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 342 ಕೋಟಿ ರೂಪಾಯಿ ಗಳಿಸಿದೆ. ವಿಶ್ವ ಮಟ್ಟದಲ್ಲಿ ಈ ಚಿತ್ರ 600 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಾರದ ದಿನವೂ ಚಿತ್ರ ಎರಡಂಕಿ ಕಲೆಕ್ಷನ್ ಮಾಡುತ್ತಿದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?