‘ಗುಂಟೂರು ಖಾರಂ’, ‘ಹನುಮಾನ್’, ‘ಕ್ಯಾಪ್ಟನ್ ಮಿಲ್ಲರ್’ ಚಿತ್ರಗಳ ಬಾಕ್ಸ್ ಆಫೀಸ್ ಗಳಿಕೆ ವಿವರ ಇಲ್ಲಿದೆ..

‘ಗುಂಟೂರು ಖಾರಂ’, ‘ಹನುಮಾನ್’ ಸಿನಿಮಾಗಳು ಮುಖಾಮುಖಿ ಆಗಿವೆ. ತಮಿಳಿನಲ್ಲಿ ‘ಕ್ಯಾಪ್ಟನ್ ಮಿಲ್ಲರ್’ ತೆರೆಗೆ ಬಂದಿದೆ. ಈ ಸಿನಿಮಾಗಳು ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದವು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಗುಂಟೂರು ಖಾರಂ’, ‘ಹನುಮಾನ್’, ‘ಕ್ಯಾಪ್ಟನ್ ಮಿಲ್ಲರ್’ ಚಿತ್ರಗಳ ಬಾಕ್ಸ್ ಆಫೀಸ್ ಗಳಿಕೆ ವಿವರ ಇಲ್ಲಿದೆ..
‘ಹನುಮಾನ್’, ‘ಗುಂಟೂರು ಖಾರಂ’, ‘ಕ್ಯಾಪ್ಟನ್ ಮಿಲ್ಲರ್
Follow us
ರಾಜೇಶ್ ದುಗ್ಗುಮನೆ
|

Updated on:Jan 13, 2024 | 10:28 AM

ಸಂಕ್ರಾಂತಿ ಪ್ರಯುಕ್ತ ಡಿಸೆಂಬರ್ 12ರಂದು ಹಲವು ಸಿನಿಮಾಗಳು ರಿಲೀಸ್ ಆಗಿವೆ. ತೆಲುಗಿನಲ್ಲಿ ಮಹೇಶ್ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ ಹಾಗೂ ತೇಜ ಸಜ್ಜಾ ನಟನೆಯ ‘ಹನುಮಾನ್’ ಸಿನಿಮಾಗಳು ಮುಖಾಮುಖಿ ಆಗಿವೆ. ತಮಿಳಿನಲ್ಲಿ ‘ಕ್ಯಾಪ್ಟನ್ ಮಿಲ್ಲರ್’ ಹಾಗೂ ಹಿಂದಿಯಲ್ಲಿ ‘ಮೆರಿ ಕ್ರಿಸ್​ಮಸ್​’ ತೆರೆಗೆ ಬಂದಿವೆ. ಈ ಸಿನಿಮಾಗಳು ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದವು ಎನ್ನುವ ಬಗ್ಗೆ ಇಲ್ಲಿದೆ ವಿವರ. ಇಂದು (ಜನವರಿ 13) ಹಾಗೂ ನಾಳೆ (ಜನವರಿ 14) ಮತ್ತಷ್ಟು ಚಿತ್ರಗಳು ಬಿಡುಗಡೆ ಆಗಲಿವೆ.

‘ಗುಂಟೂರು ಖಾರಂ’

ಮಹೇಶ್ ಬಾಬು ನಟನೆಯ, ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ‘ಗುಂಟೂರು ಖಾರಂ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದಾಗ್ಯೂ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮೊದಲದಿನ ಉತ್ತಮ ಗಳಿಕೆ ಮಾಡಿದೆ. ಈ ಸಿನಿಮಾ ಮೊದಲ ದಿನ 50 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಆಂಧ್ರ, ತೆಲಂಗಾಣದಲ್ಲಿ 44.50 ಕೋಟಿ ರೂಪಾಯಿ, ಕರ್ನಾಟಕದಲ್ಲಿ 4.5 ಕೋಟಿ ರೂಪಾಯಿ, ತಮಿಳುನಾಡಿನಲ್ಲಿ 50 ಲಕ್ಷ ರೂಪಾಯಿ, ಉಳಿದ ಭಾಗಗಳಿಂದ ಸಿನಿಮಾ 50 ಲಕ್ಷ ರೂಪಾಯಿ ಬಾಚಿದೆ. ಮುಂದಿನ ದಿನಗಳಲ್ಲಿ ಗಳಿಕೆ ಕಡಿಮೆ ಆಗಲಿದೆ.

ಹನುಮಾನ್

ಹನುಮಾನ್ ಸಿನಿಮಾದಲ್ಲಿ ತೇಜ ಸಜ್ಜಾ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾದ ಮೊದಲ ದಿನದ ಗಳಿಕೆ 12.87 ಕೋಟಿ ರೂಪಾಯಿ ಆಗಿದೆ. ಈ ಚಿತ್ರಕ್ಕೆ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದ್ದು ಮುಂದಿನ ದಿನಗಳಲ್ಲಿ ಕಲೆಕ್ಷನ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ

ಕ್ಯಾಪ್ಟನ್ ಮಿಲ್ಲರ್

ಧನುಷ್, ಶಿವರಾಜ್​ಕುಮಾರ್ ಮೊದಲಾದವರು ನಟಿಸಿರುವ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಬಗ್ಗೆ ನಿರೀಕ್ಷೆ ಇತ್ತು. ಆದರೆ, ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿಲ್ಲ. ಈ ಚಿತ್ರ ಮೊದಲ ದಿನ 9.03 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಪಾತ್ರಕ್ಕೆ ಪ್ರಾಮುಖ್ಯತೆ ನೀಡಿಲ್ಲ. ಒಂದೊಮ್ಮೆ ಈ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಸಿಕ್ಕಿದ್ದರೆ ಸಿನಿಮಾ ಕರ್ನಾಟಕದಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Sat, 13 January 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ