ಟಾಲಿವುಡ್ ನಟ ಮಹೇಶ್ ಬಾಬು ಅಭಿನಯದ ‘ಗುಂಟೂರು ಖಾರಂ’ (Guntur Kaaram) ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ಹಾಗಾಗಿ ಈ ಸಿನಿಮಾಗೆ ಭರ್ಜರಿಯಾಗಿ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ಈಗಾಗಲೇ ಅನಾವರಣ ಆಗಿರುವ ಪೋಸ್ಟರ್ಗಳು ಗಮನ ಸೆಳೆದಿವೆ. ಈ ಚಿತ್ರದಲ್ಲಿ ಮಹೇಶ್ ಬಾಬು (Mahesh Babu) ಜೊತೆ ಕನ್ನಡದ ನಟಿ ಶ್ರೀಲೀಲಾ ಅವರು ಅಭಿನಯಿಸಿದ್ದಾರೆ. ಮಹೇಶ್ ಬಾಬು ಅವರ ಕೆನ್ನೆಗೆ ಶ್ರೀಲೀಲಾ (Sreeleela) ಮುತ್ತಿಡುತ್ತಿರುವ ಪೋಸ್ಟರ್ ವೈರಲ್ ಆಗಿದೆ. ಅಭಿಮಾನಿಗಳಿಗಾಗಿ ಈ ಸಿನಿಮಾದಿಂದ ಇನ್ನಷ್ಟು ಸರ್ಪ್ರೈಸ್ ಸಿಗಲಿವೆ. ಅದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.
‘ಗುಂಟೂರು ಖಾರಂ’ ಸಿನಿಮಾ ಸಖತ್ ಮಾಸ್ ಆಗಿ ಮೂಡಿಬರಲಿದೆ. ಅದಕ್ಕೆ ಮಹೇಶ್ ಬಾಬು ಅವರ ಫಸ್ಟ್ ಲುಕ್ ಪೋಸ್ಟರ್ ಸಾಕ್ಷಿ. ಮಾಸ್ ಅಂಶಗಳ ಜೊತೆ ಪ್ರೀತಿ-ಪ್ರೇಮಕ್ಕೂ ಈ ಸಿನಿಮಾದಲ್ಲಿ ಜಾಗ ಇರಲಿದೆ. ಈ ಚಿತ್ರದಿಂದ ಎರಡನೇ ಹಾಡು ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಆ ಬಗ್ಗೆ ‘ಗುಂಟೂರು ಖಾರಂ’ ಚಿತ್ರತಂಡದಿಂದ ಅಪ್ಡೇಟ್ ಸಿಕ್ಕಿದೆ.
ಬಹುನಿರೀಕ್ಷಿತ ‘ಗುಂಟೂರು ಖಾರಂ’ ಸಿನಿಮಾದಿಂದ ‘ಓಹ್ ಮೈ ಬೇಬಿ..’ ಎಂಬ ಹಾಡನ್ನು ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದನ್ನು ತಿಳಿಸುವ ಸಲುವಾಗಿ ಶ್ರೀಲೀಲಾ ಕೂಡ ಒಂದು ಪೋಸ್ಟರ್ ಹಂಚಿಕೊಂಡಿದ್ದಾರೆ. ಅದರಲ್ಲಿ ಮಹೇಶ್ ಬಾಬು ಕೆನ್ನೆಗೆ ಶ್ರೀಲೀಲಾ ಅವರು ಕಿಸ್ ಮಾಡುತ್ತಿರುವ ದೃಶ್ಯ ಇದೆ. ಈ ಹಾಡಿನ ಪ್ರೋಮೋ ಡಿಸೆಂಬರ್ 11ರಂದು ಸಂಜೆ 4 ಗಂಟೆಗೆ ಬಿಡುಗಡೆ ಆಗಲಿದೆ. ಪೂರ್ತಿ ಹಾಡು ಡಿಸೆಂಬರ್ 13ರಂದು ಬಿಡುಗಡೆ ಆಗಲಿದೆ.
ಇದನ್ನೂ ಓದಿ: ಕನ್ನಡ ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ನಟಿ ಶ್ರೀಲೀಲಾ?
ಕನ್ನಡದ ಹುಡುಗಿ ಶ್ರೀಲೀಲಾ ಅವರು ತೆಲುಗಿನಲ್ಲಿ ಮಿಂಚುತ್ತಿದ್ದಾರೆ. ಅಲ್ಲಿ ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ. ರಶ್ಮಿಕಾ ಮಂದಣ್ಣ ರೀತಿಯೇ ಟಾಲಿವುಡ್ನಲ್ಲಿ ಸ್ಟಾರ್ ಹೀರೋಯಿನ್ ಆಗಿ ಶ್ರೀಲೀಲಾ ಗಮನ ಸೆಳೆಯುತ್ತಿದ್ದಾರೆ. ಅವರು ನಟಿಸಿರುವ ‘ಗುಂಟೂರು ಖಾರಂ’ ಸಿನಿಮಾ 2024ರ ಜನವರಿ 12ರಂದು ಬಿಡುಗಡೆ ಆಗಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.