AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಮಿಳಿಗೆ ಲಿಪಿ ನೀಡಿದ್ದು ಕನ್ನಡ’: ಕಮಲ್ ಹಾಸನ್​ಗೆ ಹಂಸಲೇಖ ಖಡಕ್ ತಿರುಗೇಟು

ನಟ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ಮಾತನಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಂಗೀತ ನಿರ್ದೇಶಕ, ಗೀತ ರಚನಕಾರ ಹಂಸಲೇಖ ಕೂಡ ಖಾರವಾಗಿ ತಿರುಗೇಟು ನೀಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ತಮಿಳಿಗೆ ಲಿಪಿ ನೀಡಿದ್ದು ಕನ್ನಡ’: ಕಮಲ್ ಹಾಸನ್​ಗೆ ಹಂಸಲೇಖ ಖಡಕ್ ತಿರುಗೇಟು
Hamsalekha, Kamal Haasan
ಮದನ್​ ಕುಮಾರ್​
|

Updated on: May 29, 2025 | 10:49 PM

Share

‘ಥಗ್ ಲೈಫ್’ ಸಿನಿಮಾದ ಪ್ರಚಾರದ ವೇಳೆ ಬಹುಭಾಷಾ ನಟ ಕಮಲ್ ಹಾಸನ್ (Kamal Haasan) ಅವರು ನೀಡಿದ ಒಂದು ಹೇಳಿಕೆಯಿಂದ ವಿವಾದ ಸೃಷ್ಟಿ ಆಗಿದೆ. ತಮಿಳಿನಿಂದ ಕನ್ನಡ (Kannada) ಹುಟ್ಟಿದ್ದು ಎಂದು ಕಮಲ್ ಹಾಸನ್ ಹೇಳಿದ್ದನ್ನು ಕನ್ನಡಿಗರು ಖಂಡಿಸುತ್ತಿದ್ದಾರೆ. ಕಮಲ್ ಹಾಸನ್ ಅವರ ಈ ಹೇಳಿಕೆಯನ್ನು ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಕೂಡ ಖಂಡಿಸಿದ್ದಾರೆ. ತಮ್ಮದೇ ರೀತಿಯಲ್ಲಿ ಹಂಸಲೇಖ ಅವರು ತಿರುಗೇಟು ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ವಿಡಿಯೋ ಹಂಚಿಕೊಳ್ಳುವ ಮೂಲಕ ಕಮಲ್ ಹಾಸನ್​ಗೆ ಚಾಟಿ ಬೀಸಿದ್ದಾರೆ.

‘ಮಿಸ್ಟರ್ ತಮಿಳು ಹಾಸನ್. ನೀವು ತಮಿಳು ಹಾಸನ್ ಅಂತ ಹೆಸರು ಬದಲಾಯಿಸಿಕೊಳ್ಳಿ ಎಂದು ನಮ್ಮ ಸಂಗೀತ ಶಾಲೆಯ ವಿದ್ಯಾರ್ಥಿಗಳು ನಿಮಗೆ ಮನವಿ ಮಾಡಿದ್ದಾರೆ. ಮಾತು ಮನೆ ಕೆಡಿಸ್ತು. ತೂತು ಒಲೆ ಕೆಡಿಸ್ತು ಅಂತ ನಮ್ಮ ಕಡೆ ಒಂದು ಗಾದೆ ಇದೆ. ಮಾತು ಎಷ್ಟು ತೊಂದರೆ ಕೊಡುತ್ತೆ ನೋಡಿ’ ಎಂದು ಹಂಸಲೇಖ ಹೇಳಿದ್ದಾರೆ.

ಇದನ್ನೂ ಓದಿ
Image
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿಕೆ, ನಟ ಜಗ್ಗೇಶ್​ರಿಂದ ಪಾಠ
Image
ರಾಜ್ಯಸಭೆಗೆ ಕಮಲ್ ಹಾಸನ್; ಮೇಲ್ಮನೆ ಪ್ರವೇಶಕ್ಕೆ ನಾಮ ನಿರ್ದೇಶನ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
ಸೋನು ನಿಗಮ್ ಬೆನ್ನಲ್ಲೇ ಕಮಲ್ ಹಾಸನ್ ವಿವಾದ: ಕೆರಳಿ ಕೆಂಡವಾದ ಕನ್ನಡಿಗರು

‘ತಮಿಳುನಾಡು ಸಿಎಂ ಸ್ಟಾಲಿನ್ ಅವರು ಇಡೀ ದಕ್ಷಿಣ ಭಾರತವನ್ನು ಒಂದುಗೂಡಿಸಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ. ತೆಂಕಣವನ್ನು ಕಟ್ಟಬೇಕು ಎಂಬುದು ಅವರ ಕನಸು. ಅವರ ಕನಸಿಗೆ ನಿಮ್ಮ ಮಾತು ಸಹಾಯ ಮಾಡಬೇಕು. ನೀವು ಆ ಪಕ್ಷದ ಮಿತ್ರ ಪಕ್ಷ. ನೀವು ಒಳ್ಳೆಯ ಮಾತಾಡಬೇಕು, ಯೋಚಿಸಿ ಮಾತಾಡಬೇಕು’ ಎಂದು ಹಂಸಲೇಖ ಅವರು ಕಮಲ್ ಹಾಸನ್​​ಗೆ ಬುದ್ಧಿ ಹೇಳಿದ್ದಾರೆ.

View this post on Instagram

A post shared by Hamsalekha (@drhamsalekha23)

‘ನಾವು ಕನ್ನಡಿಗರು ಭಾಷಾಪ್ರಿಯರು. ಭಾಷಾಂಧತೆ ನಮಗೆ ಇಲ್ಲ. ನಮ್ಮ ಕನ್ನಡದೇಶದ ಸಾಂಸ್ಕೃತಿಕ ರಾಯಭಾರಿ ಬಸವಣ್ಣ. ಬಸವಣ್ಣ ನಮಗೆ ಕೊಟ್ಟಿದ್ದು ವಚನಗಳು. ನಾವು ವಚನಗಳಿಗೆ ಯಜಮಾನರು. ವಚನ ಎಂದರೆ ಮಾತು ಸ್ವಾಮಿ. ಮಾತು ಎಚ್ಚರಿಕೆಯಿಂದ ಆಡಬೇಕು. ತಮಿಳಿಗೆ ಲಿಪಿಯನ್ನು ಕೊಟ್ಟಿದ್ದು ಕನ್ನಡ ಭಾಷೆ ಅಂತ ವಿದ್ವಾಂಸರು ಹೇಳ್ತಾರೆ. ಅದರ ಬಗ್ಗೆ ಸ್ವಲ್ಪ ವಿಚಾರಿಸಿ ನೋಡಿ’ ಎಂದಿದ್ದಾರೆ ಹಂಸಲೇಖ.

ಇದನ್ನೂ ಓದಿ: ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು ಎಚ್ಚರಿಕೆ

‘ನಾವು ಕಲಾವಿದರು. ತೆಂಕಣವನ್ನು ಕಟ್ಟುವ ಕನಸನ್ನು ಹೊತ್ತವರು. ಎಲ್ಲರೂ ಒಟ್ಟಾಗಿ ಬದುಕಬೇಕು ಅಂತ ಆಸೆಪಡುವ ಭಾರತೀಯರು. ಆದ್ದರಿಂದ ನೀವು ದಯವಿಟ್ಟು ಕ್ಷಮೆ ಕೇಳಿ. ಏನೂ ತಪ್ಪಿಲ್ಲ. ನೀವು ಕ್ಷಮೆ ಕೇಳಿದರೆ ಕ್ಷಮಾ ಹಾಸನ್ ಆಗುತ್ತೀರಿ. ಇಲ್ಲದಿದ್ದರೆ ಆ ಹಾಸನ್ ಆಗುತ್ತೀರಿ. ಆ ಹಾಸನ್​ದಲ್ಲಿ ಮತಾಂಧತೆ, ಭಾಷಾಂಧತೆ ಎಂಬ ಕೊಳಕು ಬೀಜಗಳಿರುವ ಅನುಮಾನ ಇದೆ’ ಎಂದು ಹಂಸಲೇಖ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!