AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಯವಿಟ್ಟು ನಿಲ್ಲಿಸಿ’ ನೆನಪಿರಲಿ ಪ್ರೇಮ್​​ಗೆ ಹಂಸಲೇಖ ಮನವಿ

Hamsalekha song: ಈ ಲಿಜೆಂಡರಿ ಸಂಗೀತ ನಿರ್ದೇಶಕರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿಯನ್ನು ಕೊಡಬೇಕು ಎಂದು ಇತ್ತೀಚೆಗಷ್ಟೆ ಅಭಿಯಾನವೊಂದು ಆರಂಭವಾಗಿತ್ತು, ಅಭಿಯಾನ ಆರಂಭಿಸಿದವರು ನಟ ನೆನಪಿರಲಿ ಪ್ರೇಮ್. ಆದರೆ ಇದೀಗ ಖುದ್ದು ಹಂಸಲೇಖ ಅವರೇ ಅಭಿಯಾನ ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ.

‘ದಯವಿಟ್ಟು ನಿಲ್ಲಿಸಿ’ ನೆನಪಿರಲಿ ಪ್ರೇಮ್​​ಗೆ ಹಂಸಲೇಖ ಮನವಿ
Hamsalekha
ಮಂಜುನಾಥ ಸಿ.
| Edited By: |

Updated on:Jul 22, 2026 | 11:18 AM

Share

ಮುಖ್ಯಾಂಶಗಳು

  • ಹಂಸಲೇಖ ಅವರು ನಟ ಪ್ರೇಮ್ ಅವರಿಗೆ ಪ್ರೀತಿಪೂರ್ವಕ ಮನವಿ ಮಾಡಿದ್ದಾರೆ.
  • ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಕೊಡುವಂತೆ ಪ್ರೇಮ್ ಅಭಿಯಾನ ಆರಂಭಿಸಿದ್ದರು.
  • ಆ ಅಭಿಯಾನ ನಿಲ್ಲಿಸುವಂತೆ ಖುದ್ದು ಹಂಸಲೇಖ ಮನವಿ ಮಾಡಿದ್ದಾರೆ.

ಹಂಸಲೇಖ (Hamsalekha), ಕನ್ನಡ ಚಿತ್ರರಂಗದ ಲಿಜೆಂಡರಿ ಸಂಗೀತ ನಿರ್ದೇಶಖ ಮತ್ತು ಗೀತ ಸಾಹಿತಿ. ಕನ್ನಡಕ್ಕೆ ಸಾವಿರಾರು ಅತ್ಯದ್ಭುತ ಹಾಡುಗಳನ್ನು ನೀಡಿದ್ದಾರೆ. ಈಗಲೂ ಚಿತ್ರರಂಗದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದಾರೆ. ಈ ಲಿಜೆಂಡರಿ ಸಂಗೀತ ನಿರ್ದೇಶಕರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿಯನ್ನು ಕೊಡಬೇಕು ಎಂದು ಇತ್ತೀಚೆಗಷ್ಟೆ ಅಭಿಯಾನವೊಂದು ಆರಂಭವಾಗಿತ್ತು, ಅಭಿಯಾನ ಆರಂಭಿಸಿದವರು ನಟ ನೆನಪಿರಲಿ ಪ್ರೇಮ್. ಆದರೆ ಇದೀಗ ಖುದ್ದು ಹಂಸಲೇಖ ಅವರೇ ಅಭಿಯಾನ ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಹಂಸಲೇಖ ಅವರು, ‘ಕನ್ನಡದಾಣೆ, ಇದಕ್ಕೆ (ಅಭಿಯಾನ) ನನ್ನ ಒಪ್ಪಿಗೆ ಇಲ್ಲ ಇದೊಂದು ಅನಗತ್ಯವಾದ ಅಭಿಮಾನದ ದುಡುಕು ಮತ್ತು ಪ್ರೀತಿಯ ತೊಂದರೆ. ಸೀನ್​​ಗೂ, ಟ್ಯೂನ್​​ಗೂ, ಲಿರಿಕ್ಸ್​ಗೂ ಹೊಂದಾಣಿಕೆಯೇ ಇಲ್ಲ. ಫ್ಲಾಫ್ ಸಾಂಗಿದು, ದಯವಿಟ್ಟು ನಿಲ್ಲಿಸಿ, ನೆನಪಿರಲಿ, ಪ್ರೀತಿಯ ಪ್ರೇಮ್’ ಎಂದು ಹಂಸಲೇಖ ಹೇಳಿದ್ದಾರೆ.

View this post on Instagram

A post shared by Hamsalekha (@drhamsalekha23)

‘ಕನ್ನಡ ನಮ್ಮ ಹಕ್ಕಿನ ಭಾಷೆ, ಈ ಸತ್ಯವನ್ನು ಪ್ರತಿದಿನವೂ ಸಾಬೀತು ಪಡಿಸಬೇಕಾದ ಸಮಯದಲ್ಲಿದ್ದೇವೆ. ಅದಕ್ಕೆ ಬೇಕಾಗಿರುವುದು ಅಭಿಮಾನದ ಅಭಿಯಾನಗಳು’ ಎಂದು ಹಂಸಲೇಖ ಹೇಳಿದ್ದಾರೆ. ಆ ಮೂಲಕ ತಮಗೆ ಪ್ರಶಸ್ತಿ, ಗೌರವಗಳ ಅಗತ್ಯವಿಲ್ಲ ಎಂದಿದ್ದಾರೆ. ಜೊತೆಗೆ ಕೂಡಲೇ ಈ ಅಭಿಯಾನವನ್ನು ನಿಲ್ಲಿಸಿ ಎಂದು ಮನವಿಯನ್ನು ಸಹ ಹಂಸಲೇಖ ಮಾಡಿದ್ದಾರೆ.

ಇದನ್ನೂ ಓದಿ:ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ನೀಡಿ: ಹಂಸಲೇಖ ಪರ ನಟ ಪ್ರೇಮ್ ಅಭಿಯಾನ

ಹಂಸಲೆಖ ಅವರು ಅರ್ಥ ಶತಮಾನಕ್ಕೂ ಹೆಚ್ಚು ಸಮಯದಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರಷ್ಟು ಯಶಸ್ವಿ ಸಂಗೀತ ನಿರ್ದೇಶಕ ಮತ್ತು ಚಿತ್ರ ಸಾಹಿತಿಯನ್ನು ಕನ್ನಡ ಚಿತ್ರರಂಗ ಈ ವರೆಗೆ ನೋಡಿಲ್ಲ. ಕನ್ನಡಕ್ಕೆ ಹಲವಾರು ಅತ್ಯದ್ಭುತ ಹಾಡುಗಳನ್ನು ಹಂಸಲೇಖ ನೀಡಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಿಗೂ ಸಹ ಅವರು ಸಂಗೀತ ನೀಡಿದ್ದಾರೆ. ಆದರೂ ಸಹ ಅವರಿಗೆ ಯಾವುದೇ ಕೇಂದ್ರ ಸರ್ಕಾರದ ನಾಗರೀಕ ಪ್ರಶಸ್ತಿಗಳು ಲಭಿಸಿಲ್ಲ. ಹಂಸಲೇಖ ಅವರಿಗೆ ನಾಗರೀಕ ಪ್ರಶಸ್ತಿ ಕೊಡಬೇಕೆಂದು ನಟ ನೆನಪಿರಲಿ ಪ್ರೇಮ್ ಅಭಿಯಾನ ಆರಂಭಿಸಿದ್ದರು. ಆದರೆ ಖುದ್ದು ಹಂಸಲೇಖ ಅವರೇ ಅಭಿಯಾನವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:07 am, Wed, 22 July 26

Follow Us
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು