AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್​ ಬಳಿಕ ‘ಹನುಮಾನ್​’ ಸಿನಿಮಾ ನೋಡಲಿರುವ ಸಂಸದ ತೇಜಸ್ವಿ ಸೂರ್ಯ

ಶಿವರಾಜ್​ಕುಮಾರ್​ ಅವರು ‘ಹನುಮಾನ್​’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಕೂಡ ಈ ಸಿನಿಮಾವನ್ನು ನೋಡುವುದಾಗಿ ಹೇಳಿದ್ದಾರೆ ಎಂದು ಚಿತ್ರತಂಡದವರು ತಿಳಿಸಿದ್ದಾರೆ. ಈ ಚಿತ್ರದಲ್ಲಿ ತೇಜ ಸಜ್ಜಾ, ಅಮೃತಾ ಐಯ್ಯರ್​ ನಟಿಸಿದ್ದಾರೆ. ಪ್ರಶಾಂತ್​ ವರ್ಮಾ ನಿರ್ದೇಶನ ಮಾಡಿದ್ದಾರೆ.

ಶಿವರಾಜ್​ಕುಮಾರ್​ ಬಳಿಕ ‘ಹನುಮಾನ್​’ ಸಿನಿಮಾ ನೋಡಲಿರುವ ಸಂಸದ ತೇಜಸ್ವಿ ಸೂರ್ಯ
ತೇಜ ಸಜ್ಜಾ, ತೇಜಸ್ವಿ ಸೂರ್ಯ, ಗೀತಾ. ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jan 17, 2024 | 12:40 PM

Share

ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರನ್ನು ಟಾಲಿವುಡ್​ ಹೀರೋ ತೇಜ ಸಜ್ಜಾ ಭೇಟಿ ಆಗಿದ್ದಾರೆ. ತೆಲುಗಿನ ‘ಹನುಮಾನ್​’ ಸಿನಿಮಾದಲ್ಲಿ ತೇಜ ಸಜ್ಜಾ ಅವರು ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದ ಗೆಲುವಿನ ಬೆನ್ನಲ್ಲೇ ತೇಜಸ್ವಿ ಸೂರ್ಯ ಅವರನ್ನು ತೇಜ ಸಜ್ಜಾ ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಈ ಭೇಟಿ ನಡೆದಿದೆ. ಹನುಮಾನ್​’ ಸಿನಿಮಾ (Hanuman Movie) ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈಗ ತೇಜಸ್ವಿ ಸೂರ್ಯ ಕೂಡ ಈ ಸಿನಿಮಾವನ್ನು ನೋಡುವುದಾಗಿ ಹೇಳಿದ್ದಾರೆ. ಶೀಘ್ರದಲ್ಲೇ ಅವರು ‘ಹನುಮಾನ್​’ ಚಿತ್ರ ವೀಕ್ಷಿಸಲಿದ್ದಾರೆ. ಅವರ ಜೊತೆ ತೇಜ ಸಜ್ಜಾ (Teja Sajja) ಇರುವ ಫೋಟೋ ವೈರಲ್​ ಆಗಿದೆ.

ಈ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 12ರಂದು ‘ಹನುಮಾನ್​’ ಸಿನಿಮಾ ಬಿಡುಗಡೆ ಆಯಿತು. ಒಂದು ದಿನ ಮುಂಚೆ ಪೇಯ್ಡ್​ ಪ್ರೀಮಿಯರ್​ ಏರ್ಪಡಿಸಲಾಗಿತ್ತು. ಅದಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಮೂಲಗಳ ಪ್ರಕಾರ ಪೇಯ್ಡ್​ ಪ್ರೀಮಿಯರ್​ ಶೋಗಳಿಂದಲೇ ಈ ಸಿನಿಮಾಗೆ 4 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿತ್ತು. ಈಗ ಈ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ.

ಇದನ್ನೂ ಓದಿ: ‘ಹನುಮಾನ್’ ಸಿನಿಮಾ ನೋಡಿ ಶಿವಣ್ಣ ಹೇಳಿದ್ದು ಹೀಗೆ

ಸಂಕ್ರಾಂತಿ ಪ್ರಯುಕ್ತ ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’, ಧನುಷ್​ ಅಭಿನಯದ ‘ಕ್ಯಾಪ್ಟನ್​ ಮಿಲ್ಲರ್​’, ಅಕ್ಕಿನೇನಿ ನಾಗಾರ್ಜುನ ನಟನೆಯ ‘ನಾ ಸಾಮಿ ರಂಗ’ ಮುಂತಾದ ಸಿನಿಮಾಗಳು ಬಿಡುಗಡೆ ಆದವು. ಅವುಗಳ ನಡುವೆ ‘ಹನುಮಾನ್​’ ಸಿನಿಮಾ ಕೂಡ ಪೈಪೋಟಿ ನೀಡಿತು. ಘಟಾನುಘಟಿ ಸ್ಟಾರ್​ ನಟರ ಸಿನಿಮಾಗಳ ಜೊತೆ ಪೈಪೋಟಿ ನೀಡುತ್ತಿರುವ ‘ಹನುಮಾನ್​’ ಉತ್ತಮವಾಗಿ ಕಲೆಕ್ಷನ್​ ಮಾಡುತ್ತಿದೆ. ಈ ಚಿತ್ರಕ್ಕೆ ಪ್ರಶಾಂತ್​ ವರ್ಮಾ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: 2024ರ ಮೊದಲ ಹಿಟ್ ‘ಹನುಮಾನ್’; ಗಳಿಕೆಯಲ್ಲಿ ‘ಕೆಜಿಎಫ್’, ‘ಕಾಂತಾರ’ ಹಿಂದಿಕ್ಕಿದ ಸಿನಿಮಾ..

ನಟ ಶಿವರಾಜ್​ಕುಮಾರ್​ ಇತ್ತೀಚೆಗೆ ‘ಹನುಮಾನ್​’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್​ನಲ್ಲಿ ಪತ್ನಿ ಗೀತಾ ಜೊತೆ ಶಿವರಾಜ್​ಕುಮಾರ್​ ಅವರು ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಈ ವೇಳೆ ನಟ ತೇಜ ಸಜ್ಜಾ ಹಾಗೂ ನಟಿ ಅಮೃತಾ ಐಯ್ಯರ್​ ಕೂಡ ಜೊತೆಗಿದ್ದರು. ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಶಿವರಾಜ್​ಕುಮಾರ್​ ಅವರು ಭಾರಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾದಲ್ಲಿ ಸೂಪರ್​ ಹೀರೋ ಕಾನ್ಸೆಪ್ಟ್​ ಇದೆ. ವರಲಕ್ಷ್ಮೀ ಶರತ್ ಕುಮಾರ್, ರಾಜ್​ ದೀಪಕ್ ಶೆಟ್ಟಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ