ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾದ ‘ಹನುಮಾನ್ ಅಂಶ್’ ಸಿನಿಮಾ ತಂಡ

ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಹನುಮಾನ್ ಅಂಶ’ ಚಿತ್ರತಂಡ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದೆ. ನೀಮ್ ಕರೋಲಿ ಬಾಬಾ ಅವರ ಜೀವನ ಆಧಾರಿತ ಈ ಸಿನಿಮಾ ಭಾರತದಲ್ಲೇ 143 ಕೋಟಿಗೂ ಅಧಿಕ ಗಳಿಕೆ ಕಂಡು ಸೂಪರ್ ಹಿಟ್ ಆಗಿದೆ.  

ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾದ ‘ಹನುಮಾನ್ ಅಂಶ್’ ಸಿನಿಮಾ ತಂಡ
ಯೋಗಿ-ಹನುಮಾನ್
Edited By:

Updated on: Sep 09, 2026 | 11:28 AM

ಚಿತ್ರಮಂದಿರಗಳಲ್ಲಿ ಅಚ್ಚರಿಯ ಯಶಸ್ಸು ಕಂಡಿರುವ ‘ಹನುಮಾನ್ ಅಂಶ್’ ಸಿನಿಮಾ ತಂಡ ಈಗ ಸುದ್ದಿಯಲ್ಲಿದೆ. ದೈವಿಕ ಹಿನ್ನೆಲೆಯ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಚಿತ್ರದ ಯಶಸ್ಸಿನ ಬೆನ್ನಲ್ಲೇ ಚಿತ್ರತಂಡ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದೆ. ಲಖನೌದಲ್ಲಿ ನಡೆದ ಈ ಭೇಟಿಯ ಚಿತ್ರಗಳು ಹಾಗೂ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಉತ್ತರ ಪ್ರದೇಶ ಸಿಎಂ ಅಧಿಕೃತ ನಿವಾಸದಲ್ಲಿ ಮಂಗಳವಾರ ಸಂಜೆ ಈ ಭೇಟಿ ನಡೆದಿದೆ. ನಿರ್ದೇಶಕ ವಿಶಾಲ್ ಚತುರ್ವೇದಿ ಹಾಗೂ ಮುಖ್ಯ ನಟ ಶೋಭಿನವ್ ಸತ್ಯಾ ಅವರು ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು. ಸಿಎಂ ಅವರಿಗೆ ವಿಶೇಷ ಉಡುಗೊರೆ ನೀಡಿ ಗೌರವಿಸಲಾಯಿತು. ಈ ಸಂದರ್ಭದ ವೀಡಿಯೊ ಹಾಗೂ ಫೋಟೋಗಳನ್ನು ಸಿಎಂ ಕಚೇರಿ ಹಂಚಿಕೊಂಡಿದೆ.

ಆರಂಭದಲ್ಲಿ ಸಾಧಾರಣ ಗಳಿಕೆ ಕಂಡಿದ್ದ ಈ ಸಿನಿಮಾ ಆ ಬಳಿಕ ಭಾರಿ ಜಿಗಿತ ಕಂಡಿದೆ. ಪ್ರೇಕ್ಷಕರ ಉತ್ತಮ ಪ್ರತಿಕ್ರಿಯೆಯಿಂದಾಗಿ ಭಾರತದಲ್ಲಿ 143.13 ಕೋಟಿ ರೂಪಾಯಿ ನೆಟ್ ಸಂಗ್ರಹಿಸಿದೆ. ವಿಶ್ವದಾದ್ಯಂತ ಒಟ್ಟು 169.20 ಕೋಟಿ ರೂಪಾಯಿ ಗ್ರೋಸ್ ಕಲೆಕ್ಷನ್ ಮಾಡಿದೆ. ಈ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಅಚ್ಚರಿಯ ಬ್ಲಾಕ್‌ಬಸ್ಟರ್ ಆಗಿ ಹೊರಹೊಮ್ಮಿದೆ.

ಇದಕ್ಕೂ ಮುನ್ನ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೂಡ ಈ ಸಿನಿಮಾದ ವಿಶೇಷ ಪ್ರದರ್ಶನ ವೀಕ್ಷಿಸಿದ್ದರು. ಚಿತ್ರದ ಕಥಾಹಂದರವನ್ನು ಶ್ಲಾಘಿಸಿದ್ದ ಅವರು ರಾಜ್ಯದಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದರು. ಕೈಂಚಿ ಧಾಮ ಮತ್ತು ನೀಮ್ ಕರೋಲಿ ಬಾಬಾ ಅವರ ಆಧ್ಯಾತ್ಮಿಕ ವಿಚಾರಗಳು ಸಿನಿಮಾದಲ್ಲಿ ಪ್ರಮುಖವಾಗಿ ಮೂಡಿಬಂದಿವೆ.

ಇದನ್ನೂ ಓದಿ: ‘ಹನುಮಾನ್ ಅಂಶ್’ ಸಿನಿಮಾಗೆ ಪ್ರೀತಿ ಜಿಂಟಾ ಮೆಚ್ಚುಗೆ: ತಪ್ಪದೇ ವೀಕ್ಷಿಸಿ ಎಂದು ಅಭಿಮಾನಿಗಳಿಗೆ ಕರೆ

ವಿಶಾಲ್ ಚತುರ್ವೇದಿ ಬರೆದು ನಿರ್ದೇಶಿಸಿರುವ ಈ ಚಿತ್ರವು ನೀಮ್ ಕರೋಲಿ ಬಾಬಾ ಅವರ ಜೀವನ ಮತ್ತು ಬೋಧನೆಗಳನ್ನು ಆಧರಿಸಿದೆ. ಆಗಸ್ಟ್‌ನಲ್ಲಿ ಭಾರತದಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಇದೀಗ ಸೆಪ್ಟೆಂಬರ್ 11 ರಂದು ವಿದೇಶಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಕಡಿಮೆ ಬಜೆಟ್‌ನಲ್ಲಿ ಮೂಡಿಬಂದು ಕೋಟಿ ಕೋಟಿ ಗಳಿಸಿದ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Loading...
Unable to load recommendations.
Follow Us