AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

55 ಕೋಟಿ ರೂಪಾಯಿ ಗಳಿಸಿದ ‘ಹನುಮಾನ್​’; ಸ್ಟಾರ್​ ನಟರ ಚಿತ್ರಗಳ ಎದುರು ಪೈಪೋಟಿ

‘ಹನುಮಾನ್​’ ಸಿನಿಮಾಗೆ ಪ್ರಶಾಂತ್​ ವರ್ಮಾ ನಿರ್ದೇಶನ ಮಾಡಿದ್ದಾರೆ. ತೇಜ ಸಜ್ಜಾ ಪ್ರಮುಖ ಪಾತ್ರ ಮಾಡಿದ್ದು, ಅವರಿಗೆ ಜೋಡಿಯಾಗಿ ಕನ್ನಡದ ಹುಡುಗಿ ಅಮೃತಾ ಅಯ್ಯರ್​ ನಟಿಸಿದ್ದಾರೆ. ವಿನಯ್​ ರೈ, ವರಲಕ್ಷ್ಮೀ ಶರತ್​ಕುಮಾರ್​ ಮುಂತಾದ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರ ಭರ್ಜರಿ ಕಲೆಕ್ಷನ್​ ಮಾಡುತ್ತಿದೆ.

55 ಕೋಟಿ ರೂಪಾಯಿ ಗಳಿಸಿದ ‘ಹನುಮಾನ್​’; ಸ್ಟಾರ್​ ನಟರ ಚಿತ್ರಗಳ ಎದುರು ಪೈಪೋಟಿ
ತೇಜ ಸಜ್ಜಾ
ಮದನ್​ ಕುಮಾರ್​
|

Updated on: Jan 16, 2024 | 11:16 AM

Share

ಈ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹಲವು ಸಿನಿಮಾಗಳು ಬಿಡುಗಡೆ ಆದವು. ಸ್ಟಾರ್​ ನಟರ ಬಹುನಿರೀಕ್ಷಿತ ಸಿನಿಮಾಗಳ ಜೊತೆಯಲ್ಲಿ ಹೊಸ ಕಲಾವಿದರ ಚಿತ್ರಗಳು ಕೂಡ ತೆರೆಕಂಡವು. ಆ ಪೈಕಿ ಹೆಚ್ಚು ಗಮನ ಸೆಳೆದಿರುವುದು ಹನುಮಾನ್​’ (HanuMan) ಸಿನಿಮಾ. ಸೂಪರ್​ ಹೀರೋ ಕಾನ್ಸೆಪ್ಟ್​ ಹೊಂದಿರುವ ಈ ಚಿತ್ರದಲ್ಲಿ ತೇಜ ಸಜ್ಜಾ (Teja Sajja) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಆಂಜನೇಯನ ಕೃಪೆಯಿಂದ ಸೂಪರ್​ ಪವರ್​ ಪಡೆಯುವ ಯುವಕನ ಕಾಲ್ಪನಿಕ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಭರ್ಜರಿ ಕಲೆಕ್ಷನ್​ ಮಾಡಿದೆ. ಚಿತ್ರದ ಒಟ್ಟು ಕಲೆಕ್ಷನ್​ (Hanuman Collection) 55.15 ಕೋಟಿ ರೂಪಾಯಿ ದಾಟಿದೆ.

‘ಹನುಮಾನ್​’ ಸಿನಿಮಾಗೆ ಪ್ರಶಾಂತ್​ ವರ್ಮಾ ನಿರ್ದೇಶನ ಮಾಡಿದ್ದಾರೆ. ತೇಜ ಸಜ್ಜಾ ಅವರಿಗೆ ಜೋಡಿಯಾಗಿ ಕನ್ನಡದ ಹುಡುಗಿ ಅಮೃತಾ ಅಯ್ಯರ್​ ನಟಿಸಿದ್ದಾರೆ. ವಿನಯ್​ ರೈ, ವರಲಕ್ಷ್ಮೀ ಶರತ್​ಕುಮಾರ್​ ಮುಂತಾದ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಕಾಮಿಡಿ ಜೊತೆಗೆ ಸೂಪರ್​ ಹೀರೋ ಕಥೆ ಇರುವ ‘ಹನುಮಾನ್​’ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

ಜನವರಿ 12ರಂದು ‘ಹನುಮಾನ್​​’ ಬಿಡುಗಡೆ ಆಯಿತು. ಅದಕ್ಕೂ ಒಂದು ದಿನ ಮುಂಚೆ ಹಲವು ಕಡೆಗಳಲ್ಲಿ ಪ್ರೇಯ್ಡ್​ ಪ್ರೀಮಿಯರ್​ ಶೋ ಏರ್ಪಡಿಸಲಾಗಿತ್ತು. ಅದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಪೇಯ್ಡ್​ ಪ್ರೀಮಿಯರ್​ ಶೋಗಳಿಂದ 4.15 ಕೋಟಿ ರೂಪಾಯಿ ಹರಿಬಂದಿತ್ತು. ಶುಕ್ರವಾರ (ಜ.12) ಈ ಚಿತ್ರಕ್ಕೆ 8.05 ಕೋಟಿ ರೂಪಾಯಿ ಕಲೆಕ್ಷನ್​ ಆಯಿತು. ಶನಿವಾರ (ಜ13) 12.45 ಕೋಟಿ ರೂಪಾಯಿ, ಭಾನುವಾರ (ಜ.14) 16 ಕೋಟಿ ರೂಪಾಯಿ ಬಾಚಿಕೊಂಡಿತು.

ಇದನ್ನೂ ಓದಿ: ಕನ್ನಡದಲ್ಲಿ ಹನುಮಾನ್​ ಚಾಲೀಸ; ಭಕ್ತಿ-ಭಾವದಿಂದ ಹಾಡಿದ ಖ್ಯಾತ ಗಾಯಕ ವಿಜಯ್​ ಪ್ರಕಾಶ್

ಸೋಮವಾರ ಯಾವುದೇ ಸಿನಿಮಾಗೆ ಅಗ್ನಿಪರೀಕ್ಷೆ ಎದುರಾಗುತ್ತದೆ. ಅದರಲ್ಲೂ ‘ಹನುಮಾನ್​’ ಪಾಸ್​ ಆಗಿದೆ. ಸೋಮವಾರ (ಜ.15) ಈ ಸಿನಿಮಾಗೆ 14.5 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂದು ವರದಿ ಆಗಿದೆ. ಹಲವು ಕಡೆಗಳಲ್ಲಿ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಸಂಕ್ರಾಂತಿ ಸಂದರ್ಭದಲ್ಲಿ ಧನುಷ್​, ಶಿವರಾಜ್​ಕುಮಾರ್​ ನಟನೆಯ ‘ಕ್ಯಾಪ್ಟನ್​ ಮಿಲ್ಲರ್​’, ಮಹೇಶ್​ ಬಾಬು ಅಭಿನಯದ ‘ಗುಂಟೂರು ಖಾರಂ’ ಮುಂತಾದ ಸಿನಿಮಾಗಳು ತೆರೆಕಂಡವು. ಆ ಸಿನಿಮಾಗಳ ಟಫ್​ ಸ್ಪರ್ಧೆಯ ನಡುವೆಯೂ ‘ಹನುಮಾನ್​’ ಚಿತ್ರ ಈ ಪರಿ ಕಲೆಕ್ಷನ್​ ಮಾಡಿರುವುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್