AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಯಲ್ಲಿ ‘ಕೆಜಿಎಫ್​’ ಮಾಡಿದ್ದ ದಾಖಲೆ ಮುರಿದ ‘ಹನುಮಾನ್​’ ಸಿನಿಮಾ

ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಿದೆ ಎಂಬುದನ್ನು ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಬಹಿರಂಗಪಡಿಸಿದ್ದಾರೆ. ಹಿಂದಿ ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟ ಆಗಿದೆ. ಉತ್ತರ ಭಾರತದ ಮಾರುಕಟ್ಟೆಯಲ್ಲಿ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ಮಾಡಿದ್ದ ಕಲೆಕ್ಷನ್​ ಅನ್ನು ಈಗ ‘ಹನುಮಾನ್​’ ಸಿನಿಮಾ ಮೀರಿಸಿದೆ.

ಹಿಂದಿಯಲ್ಲಿ ‘ಕೆಜಿಎಫ್​’ ಮಾಡಿದ್ದ ದಾಖಲೆ ಮುರಿದ ‘ಹನುಮಾನ್​’ ಸಿನಿಮಾ
ಯಶ್​, ತೇಜ ಸಜ್ಜಾ
ಮದನ್​ ಕುಮಾರ್​
|

Updated on: Feb 12, 2024 | 6:05 PM

Share

ದಕ್ಷಿಣ ಭಾರತದ ಸಿನಿಮಾಗಳಿಗೆ ಉತ್ತರ ಭಾರತದಲ್ಲಿ ಸಖತ್​ ಬೇಡಿಕೆ ಇದೆ. ಕಥೆ, ಮೇಕಿಂಗ್​ ಚೆನ್ನಾಗಿದ್ದರೆ ಹಿಂದಿ ಪ್ರೇಕ್ಷಕರು ಸೌತ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾರೆ. ಈ ಹಿಂದೆ ‘ಬಾಹುಬಲಿ’, ‘ಕೆಜಿಎಫ್​’ (KGF Chapter 1), ‘ಆರ್​ಆರ್​ಆರ್​’ ಮುಂತಾದ ಸಿನಿಮಾಗಳು ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ್ದವು. ಈಗ ತೆಲುಗಿನ ಹನುಮಾನ್​’ ಸಿನಿಮಾ (HanuMan Movie) ಕೂಡ ಉತ್ತರ ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ. ಹಿಂದಿಗೆ ಡಬ್​ ಆಗಿ ತೆರೆಕಂಡ ಈ ಸಿನಿಮಾಗೆ ಭರ್ಜರಿ ಕಲೆಕ್ಷನ್​ (HanuMan Hindi Collection) ಆಗಿದೆ. ಈ ಮೊದಲು ಹಿಂದಿ ಮಾರುಕಟ್ಟೆಯಲ್ಲಿ ‘ಕೆಜಿಎಫ್​: ಚಾಪ್ಟರ್​ 1’ ಮಾಡಿದ್ದ ದಾಖಲೆಯನ್ನು ಈಗ ‘ಹನುಮಾನ್​’ ಸಿನಿಮಾ ಮುರಿದಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ರಾಕಿಂಗ್​ ಸ್ಟಾರ್​’ ಯಶ್​ ಅಭಿನಯದ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ಹಿಂದಿಗೆ ಡಬ್​ ಆಗಿ ಮೆಚ್ಚುಗೆ ಪಡೆದಿತ್ತು. ಹಿಂದಿ ವರ್ಷನ್​ನಿಂದ ಆ ಸಿನಿಮಾಗೆ ಬರೋಬ್ಬರಿ 44 ಕೋಟಿ ರೂಪಾಯಿ ಕಲೆಕ್ಷನ್​ ಆಗಿತ್ತು. ಈಗ ಆ ಮೊತ್ತವನ್ನು ‘ಹನುಮಾನ್​’ ಸಿನಿಮಾ ಹಿಂದಿಕ್ಕಿದೆ. ಹಿಂದಿಗೆ ಡಬ್​ ಆಗಿ ಬಿಡುಗಡೆ ಆಗಿರುವ ‘ಹನುಮಾನ್​’ ಸಿನಿಮಾ 50 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಇನ್ನೂ ಅನೇಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ: ‘ಹನುಮಾನ್​’ ಸಿನಿಮಾದ ಹೀರೋ ತೇಜ ಸಜ್ಜಾ ಸಂಭಾವನೆಯಲ್ಲಿ ಏರಿಕೆ

‘ಹನುಮಾನ್​’ ಸಿನಿಮಾದಲ್ಲಿ ತೇಜ ಸಜ್ಜಾ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾದಲ್ಲಿ ಅವರು ಸೂಪರ್​ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಶಾಂತ್​ ವರ್ಮಾ ಅವರ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಆಂಜನೇಯನಿಂದ ಸೂಪರ್​ ಪವರ್​ ಪಡೆಯುವ ಹಳ್ಳಿ ಹೈದನ ಕಹಾನಿ ಈ ಸಿನಿಮಾದಲ್ಲಿದೆ. ವಿಶ್ವಾದ್ಯಂತ, ಎಲ್ಲ ಭಾಷೆಯ ವರ್ಷನ್​ನಿಂದ ಈ ಸಿನಿಮಾದ ಕಲೆಕ್ಷನ್​ 300 ಕೋಟಿ ರೂಪಾಯಿ ಮೀರಿದೆ. ಆ ಮೂಲಕ ತೇಜ ಸಜ್ಜಾ ಅವರ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್​ ಸಿಕ್ಕಂತೆ ಆಗಿದೆ.

ತೇಜ ಸಜ್ಜಾ ಅವರಿಗೆ ಜೋಡಿಯಾಗಿ ಕನ್ನಡದ ಹುಡುಗಿ ಅಮೃತಾ ಅಯ್ಯರ್​ ಅವರು ನಟಿಸಿದ್ದಾರೆ. ಕನ್ನಡದ ನಟ ರಾಜ್​ ದೀಪಕ್​ ಶೆಟ್ಟಿ ಅವರು ಕೂಡ ಒಂದು ಮುಖ್ಯವಾದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ವರಲಕ್ಷ್ಮಿ ಶರತ್​ಕುಮಾರ್​ ಅವರು ಕಥಾನಾಯಕ ಅಕ್ಕನ ಪಾತ್ರದಲ್ಲಿ ಮಿಂಚಿದ್ದಾರೆ. ವಿನಯ್​ ರೈ ಅವರು ಮಾಡಿರುವ ವಿಲನ್​ ಪಾತ್ರ ಗಮನ ಸೆಳೆದಿದೆ. ಈ ಸಿನಿಮಾದ ಯಶಸ್ಸಿನ ಬಳಿಕ ತೇಜ ಸಜ್ಜಾ ಅವರು ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ. ಸದ್ಯಕ್ಕೆ ಅವರು ‘ಜೈ ಹನುಮಾನ್​’ ಸಿನಿಮಾದ ಕಡೆಗೆ ಗಮನ ಹರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್