AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರದ ಆದೇಶ: ಆಂಧ್ರ, ತೆಲಂಗಾಣ ಸಿನಿಮಾ ಪ್ರೇಕ್ಷಕರಿಗೆ ಬರೆ

Hari Hara Veera Mallu movie: ಕರ್ನಾಟಕ ರಾಜ್ಯ ಸರ್ಕಾರ ಏಕರೂಪ ಸಿನಿಮಾ ಟಿಕೆಟ್ ದರ ಜಾರಿ ಮಾಡಿ ಆದೇಶಿಸಿದೆ. ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಸಿನಿಮಾ ಟಿಕೆಟ್ ದರಗಳು ಕಡಿಮೆ ಆಗಲಿವೆ. ಮಲ್ಟಿಪ್ಲೆಕ್ಸ್​ನಲ್ಲಿಯೂ ಕಡಿಮೆ ಮೊತ್ತಕ್ಕೆ ಸಿನಿಮಾ ವೀಕ್ಷಿಸಬಹುದಾಗುತ್ತದೆ. ಆದರೆ ರಾಜ್ಯ ಸರ್ಕಾರದ ಈ ಆದೇಶದಿಂದ ಪಾಪ ಆಂಧ್ರ ಮತ್ತು ತೆಲಂಗಾಣ ಸಿನಿಮಾ ಪ್ರೇಮಿಗಳು ಕಷ್ಟಕ್ಕೆ ಸಿಲುಕಿದ್ದಾರಂತೆ.

ಕರ್ನಾಟಕ ಸರ್ಕಾರದ ಆದೇಶ: ಆಂಧ್ರ, ತೆಲಂಗಾಣ ಸಿನಿಮಾ ಪ್ರೇಕ್ಷಕರಿಗೆ ಬರೆ
Pawan Kalyan
ಮಂಜುನಾಥ ಸಿ.
|

Updated on: Jul 19, 2025 | 5:31 PM

Share

ಕರ್ನಾಟಕ ಸರ್ಕಾರದ ಆದೇಶದಿಂದಾಗಿ ತೆಲುಗು ಸಿನಿಮಾ ಪ್ರೇಮಿಗಳಿಗೆ ಬರೆ ಬಿದ್ದಿದೆ. ಸಿಎಂ ಸಿದ್ದರಾಮಯ್ಯ ಅವರು ಏಕರೂಪ ಸಿನಿಮಾ ಟಿಕೆಟ್ ಬೆಲೆ ಕುರಿತಾಗಿ ಕಳೆದ ಬಜೆಟ್​ನಲ್ಲಿ ಘೋಷಣೆ ಮಾಡಿದ್ದರು. ಕೆಲವೇ ದಿನಗಳಲ್ಲಿ ಅದರ ಗೆಜೆಟ್ ಆದೇಶರೂಪ ಹೊರಬೀಳಲಿದೆ. ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ (Multiplex) ಸೇರಿದಂತೆ ಎಲ್ಲ ಚಿತ್ರಮಂದಿರಗಳ ಟಿಕೆಟ್ ಬೆಲೆ 200 ರೂಪಾಯಿ ಮೀರುವಂತಿಲ್ಲ. ಇದು ರಾಜ್ಯದ ಸಿನಿಮಾ ಪ್ರೇಮಿಗಳಿಗೆ ಖುಷಿ ತಂದಿದೆ. ಆದರೆ ಈ ಆದೇಶದಿಂದ ತೆಲುಗು ಸಿನಿಮಾ ಪ್ರೇಕ್ಷಕರು ಸಂಕಷ್ಟ ಎದುರಿಸುವಂತಾಗಿದೆ.

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಮುಂದಿನ ಗುರುವಾರ (ಜುಲೈ 24) ದಂದು ಬಿಡುಗಡೆ ಆಗಲಿದೆ. ಪ್ಯಾನ್ ಇಂಡಿಯಾ ಲೆವೆಲ್​​ನಲ್ಲಿ ಈ ಸಿನಿಮಾ ತೆರೆಗೆ ಬರಲಿದ್ದು, ಆಂಧ್ರ, ತೆಲಂಗಾಣಗಳ ಜೊತೆಗೆ ಕರ್ನಾಟಕ, ಕೇರಳ, ತಮಿಳುನಾಡುಗಳಲ್ಲಿಯೂ ಸಹ ಈ ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದೆ. ಆದರೆ ಕರ್ನಾಟಕ ಸರ್ಕಾರ ಏಕರೂಪ ಸಿನಿಮಾ ಟಿಕೆಟ್ ದರ ತರಲು ಮುಂದಾಗಿರುವ ಕಾರಣ ಈಗ ‘ಹರಿ ಹರ ವೀರ ಮಲ್ಲು’ ಸಿನಿಮಾ ಅನ್ನು ಹೆಚ್ಚಿನ ದರ ಹಣ ನೀಡಿ ಆಂಧ್ರ-ತೆಲುಗು ಪ್ರೇಕ್ಷಕರು ನೋಡಬೇಕಾಗಿದೆ.

ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆದಾಗ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಸಿನಿಮಾಗಳ ಟಿಕೆಟ್ ದರ ಹೆಚ್ಚಳ ಮಾಡುವುದು ಸಾಮಾನ್ಯ. ಇದಕ್ಕೆ ಆಯಾ ಸರ್ಕಾರದ ಅನುಮತಿಯನ್ನು ಪಡೆಯಬೇಕಿರುತ್ತದೆ. ಆದರೆ ಪವನ್ ಕಲ್ಯಾಣ್, ಉಪಮುಖ್ಯಮಂತ್ರಿ ಆಗಿದ್ದು, ಜನಾನುರಾಗಿ ಎಂದು ಸಹ ಗುರುತಿಸಿಕೊಂಡಿದ್ದಾರೆ. ತಮ್ಮ ಈ ಇಮೇಜಿಗೆ ಪುಷ್ಠಿ ನೀಡಲೆಂದು ‘ಹರಿ ಹರ ವೀರ ಮಲ್ಲು’ ಸಿನಿಮಾದ ಟಿಕೆಟ್ ದರ ಹೆಚ್ಚಳ ಮಾಡದೆ ಆಂಧ್ರ ಮತ್ತು ತೆಲಂಗಾಣದಲ್ಲಿ ಪವನ್ ಬಿಡುಗಡೆ ಮಾಡಿಸಲಿದ್ದಾರೆ ಎಂಬ ಸುದ್ದಿ ಗಟ್ಟಿಯಾಗಿ ಹರಿದಾಡಿತ್ತು.

ಇದನ್ನೂ ಓದಿ:‘ಹರಿ ಹರ ವೀರ ಮಲ್ಲು’ ಟ್ರೈಲರ್ ಬಿಡುಗಡೆ: ಧರ್ಮದ ಯುದ್ಧದಲ್ಲಿ ಪವನ್

‘ಹರಿ ಹರ ವೀರ ಮಲ್ಲು’ ಸಿನಿಮಾನಲ್ಲಿ ಪವನ್ ಅವರನ್ನು ಹಿಂದೂ ಧರ್ಮ ರಕ್ಷಕನಂತೆ ತೋರಿಸಿದ್ದು, ಅವರ ರಾಜಕೀಯ ಇಮೇಜಿಗೆ ಸೂಟ್ ಆಗುವಂತೆ ಕತೆ, ಸಂಭಾಷಣೆ ‘ಹರಿ ಹರ ವೀರ ಮಲ್ಲು’ ಸಿನಿಮಾನಲ್ಲಿದೆ. ಪವನ್​ ಅವರ ರಾಜಕೀಯ ಇಮೇಜಿಗೆ ಬೂಸ್ಟ್ ಕೊಡಬಹುದಾದ ಸಿನಿಮಾ ಸಹ ಇದಾಗಿರುವ ಕಾರಣಕ್ಕೆ ಸಿನಿಮಾದ ಟಿಕೆಟ್ ಬೆಲೆ ಹೆಚ್ಚಿಸದೆ ಎಲ್ಲರೂ ನೋಡಲು ಅನುಕೂಲವಾಗುವಂತೆ ಕಡಿಮೆ ಟಿಕೆಟ್ ದರದಲ್ಲಿಯೇ ಸಿನಿಮಾ ಅನ್ನು ಬಿಡುಗಡೆ ಮಾಡುತ್ತಾರೆ ಎಂಬ ನಿರೀಕ್ಷೆ ಹೆಚ್ಚಾಗಿತ್ತು.

ಆದರೆ ಇದೀಗ ‘ಹರಿ ಹರ ವೀರ ಮಲ್ಲು’ ಸಿನಿಮಾದ ಟಿಕೆಟ್ ದರವನ್ನು ಹೆಚ್ಚಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಮಾತ್ರ ಕರ್ನಾಟಕ ರಾಜ್ಯ ಸರ್ಕಾರ. ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರ ಆದೇಶದಿಂದಾಗಿ ಇಲ್ಲಿ ‘ಹರಿ ಹರ ವೀರ ಮಲ್ಲು’ ಸಿನಿಮಾ ಟಿಕೆಟ್ ಅನ್ನು ಹೆಚ್ಚಿನ ಬೆಲೆಗೆ ಮಾರಲಾಗದು, ಇದರಿಂದಾಗಿ ರಾಜ್ಯದಿಂದ ಬರುತ್ತಿದ್ದ ಆದಾಯದಲ್ಲಿ ಶೇ50% ಕಡಿತಗೊಳ್ಳಲಿದೆ. ಆ ನಷ್ಟವನ್ನು ಸರಿತೂಗಿಸಲು ಆಂಧ್ರ ಮತ್ತು ತೆಲಂಗಾಣಗಳಲ್ಲಿ ಇಷ್ಟವಿಲ್ಲದಿದ್ದರೂ ‘ಹರಿ ಹರ ವೀರ ಮಲ್ಲು’ ಸಿನಿಮಾದ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿದೆ. ಸಿನಿಮಾ ಜುಲೈ 24 ರಂದು ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ