AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ: ಹಾವೇರಿಯಲ್ಲಿ ಸಿಕ್ಕಿಬಿದ್ದ ಆರೋಪಿ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಕರ್ನಾಟಕದಲ್ಲಿ ಸಿಕ್ಕಿಬಿದ್ದಿದ್ದಾನೆ. ಮುಂಬೈ ಪೊಲೀಸರ ಮಾಹಿತಿ ಆಧಾರದ ಮೇಲೆ ಹಾವೇರಿ ಪೊಲೀಸರು ಬಲೆ ಬೀಸಿ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ: ಹಾವೇರಿಯಲ್ಲಿ ಸಿಕ್ಕಿಬಿದ್ದ ಆರೋಪಿ
ಬಾಲಿವುಡ್ ನಟ ಸಲ್ಮಾನ್ ಖಾನ್
TV9 Web
| Edited By: |

Updated on: Nov 06, 2024 | 8:26 PM

Share

ಹಾವೇರಿ, (ನವೆಂಬರ್ 06): ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ರಾಜಸ್ತಾನ ಮೂಲದ ಬಿಕಾರಾಮ್‌ನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ.

ರಾಜಸ್ತಾನ ಮೂಲದ  ಬಿಕಾರಾಮ್, ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ ಹಾವೇರಿಗೆ ಬಂದಿದ್ದ. ಗ್ರಿಲ್ ಕೆಲಸ ಮಾಡಿಕೊಂಡು ಹಾವೇರಿಯ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಇದು ಮುಂಬೈ ಪೊಲೀಸರಿಗೆ ಗೊತ್ತಾಗಿದ್ದು, ಕೂಡಲೇ ಅವರು ಹಾವೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರ ಆಧಾರದ ಮೇಲೆ ಜಿಲ್ಲಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಲಾರೆನ್ಸ್​ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ

ಸೋಮವಾರ (ನ.4) ತಡರಾತ್ರಿ ವರ್ಲಿ ಪ್ರದೇಶದಲ್ಲಿರುವ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಸಂದೇಶ ಬಂದಿದ್ದು, ‘ಕೃಷ್ಣಮೃಗ ಹತ್ಯೆಗೈದ ಘಟನೆಗೆ ಸಂಬಂಧಿಸಿ ಸಲ್ಮಾನ್ ಖಾನ್ ನಮ್ಮ(ಬಿಷ್ಣೋಯ್ ಸಮುದಾಯದ) ದೇವಸ್ಥಾನಕ್ಕೆ ಬಂದು ಕ್ಷಮೆಯಾಚಿಸಬೇಕು. ಅಥವಾ 5 ಕೋಟಿ ರೂ. ನೀಡಬೇಕು. ತಪ್ಪಿದರೆ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲಾಗುವುದು. ನಮ್ಮ ಗ್ಯಾಂಗ್ ಇನ್ನೂ ಸಕ್ರೀಯವಾಗಿದೆ’ ಎಂದು ಬೆದರಿಕೆ ಸಂದೇಶದಲ್ಲಿ ಉಲ್ಲೇಖವಾಗಿತ್ತು. ಅಲ್ಲದೇ ಬೆದರಿಕೆಯೊಡ್ಡಿದ ವ್ಯಕ್ತಿ ತಾನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಹೋದರ ಎಂದು ಹೇಳಿಕೊಂಡಿದ್ದ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮುಂಬೈ ಪೊಲೀಸರು, ಬೆದರಿಕೆ ಒಡ್ಡಿದವರ ಪತ್ತೆಗೆ ಬಲೆ ಬೀಸಿದ್ದರು.

ಸಲ್ಮಾನ್ ಮನೆಗೆ ಬಿಗಿ ಭದ್ರತೆ

ಅಜಿತ್ ಪವಾರ್ ಬಣದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆ  ಬೆನ್ನಲ್ಲೇ ಸಲ್ಮಾನ್ ಖಾನ್​ಗೆ ಸಹ ನಿರಂತರ ಜೀವ ಬೆದರಿಕೆಗಳು ಬರುತ್ತಿವೆ. ಹೀಗಾಗಿ ಸಲ್ಮಾನ್ ಖಾನ್ ವಾಸವಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಒದಗಿಸಿರುವ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಹತ್ಯೆಯಾಗಿರುವ ಸಿದ್ದಿಕಿ ಹಾಗೂ ಸಲ್ಮಾನ್ ಖಾನ್ ನಡುವೆ ಆತ್ಮೀಯ ಒಡನಾಟ ಇತ್ತು. ಹೀಗಾಗಿ ಸಿದ್ದಿಕಿ ಹತ್ಯೆ ಹಿಂದೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್ ಕೈವಾಡವಿರುವ ಹಿನ್ನೆಲೆ ಪೊಲೀಸ್ ತನಿಖೆ ನಡೆಯುತ್ತಿದೆ. ಬಿಷ್ಟೋಯ್ ಗ್ಯಾಂಗ್ ಹಿಂದಿನಿಂದಲೂ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯೊಡುತ್ತಿದೆ. ಜತೆಗೆ ಸಲ್ಮಾನ್ ಖಾನ್ ಗುರಿಯಾಗಿಸಿ ಕೆಲವು ದಾಳಿಗಳೂ ನಡೆದಿವೆ. ಕಳೆದ ಏಪ್ರಿಲ್ 4ರಂದು ಮುಂಬಯಿಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ನಿವಾಸದ ಹೊರಭಾಗದಲ್ಲಿ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಗುಂಡು ಹಾರಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ