‘ಅಲ್ಲು ಅರ್ಜುನ್ ಯುದ್ಧ ಗೆದ್ದಿಲ್ಲ, ಸಿನಿಮಾ ಮಾಡಿ ಹಣ ಮಾಡಿಕೊಂಡಿದ್ದಾರೆ ಅಷ್ಟೇ’; ಸಿಎಂ ರೇವಂತ್ ರೆಡ್ಡಿ

ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಬಂಧನಗೊಂಡಿದ್ದರು. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಈ ಬಂಧನವನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ಅಲ್ಲು ಅರ್ಜುನ್ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಸಂತ್ರಸ್ತರ ಕುಟುಂಬದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲು ಅರ್ಜುನ್ ಪತ್ನಿ ರೇವಂತ್ ರೆಡ್ಡಿಗೆ ಸಂಬಂಧಿಯಾಗಿದ್ದರೂ, ಈ ವಿಚಾರದಲ್ಲಿ ರೆಡ್ಡಿ ಅವರು ಸಂಬಂಧವನ್ನು ಪರಿಗಣಿಸಿಲ್ಲ ಎಂದು ಹೇಳಲಾಗಿದೆ.

‘ಅಲ್ಲು ಅರ್ಜುನ್ ಯುದ್ಧ ಗೆದ್ದಿಲ್ಲ, ಸಿನಿಮಾ ಮಾಡಿ ಹಣ ಮಾಡಿಕೊಂಡಿದ್ದಾರೆ ಅಷ್ಟೇ’; ಸಿಎಂ ರೇವಂತ್ ರೆಡ್ಡಿ
ಅಲ್ಲು ಅರ್ಜುನ್-ರೇವಂತ್ ರೆಡ್ಡಿ
Follow us
ರಾಜೇಶ್ ದುಗ್ಗುಮನೆ
|

Updated on:Dec 19, 2024 | 12:02 PM

ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣಕ್ಕೂ ಅಲ್ಲು ಅರ್ಜುನ್​ಗೂ ಕನೆಕ್ಷನ್ ಕೊಟ್ಟು ಅವರನ್ನು ಬಂಧಿಸಲಾಗಿತ್ತು. ಸದ್ಯ ಮಧ್ಯಂತರ ಜಾಮೀನು ಪಡೆದು ಅಲ್ಲು ಅರ್ಜುನ್ ಹೊರಗಿದ್ದಾರೆ. ಈ ಪ್ರಕರಣದಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೈವಾಡ ಇದೆ ಎನ್ನಲಾಗಿತ್ತು. ಈ ವಿಚಾರ ಚರ್ಚೆಯಲ್ಲಿ ಇರುವಾಗಲೇ ಅವರು ಅಲ್ಲು ಅರ್ಜುನ್ ವಿರುದ್ಧ ಕೋಪ ಹೊರಹಾಕಿದ್ದಾರೆ.

ಇತ್ತೀಚೆಗೆ ರೇವಂತ್ ರೆಡ್ಡಿ ಅವರು ಅಲ್ಲು ಅರ್ಜುನ್ ವಿರುದ್ಧ ಮಾತನಾಡಿದ್ದರು. ಈ ವೇಳೆ ಅವರು ಪೊಲೀಸ್ ಕ್ರಮವನ್ನು ಮೆಚ್ಚಿಕೊಂಡಿದ್ದಾರೆ. ‘ಅಲ್ಲು ಅರ್ಜುನ್ ಯುದ್ಧ ಗೆದ್ದಿಲ್ಲ. ಸಿನಿಮಾ ಮಾಡಿ ಹಣ ಮಾಡಿಕೊಂಡಿದ್ದಾರೆ ಅಷ್ಟೇ’ ಎಂದು ನೇರಮಾತುಗಳಲ್ಲಿ ಹೇಳಿದ್ದಾರೆ. ಅಲ್ಲದೆ, ಸಂತ್ರಸ್ತ ಕುಟುಂಬದ ಬಗ್ಗೆ ಮರುಕ ವ್ಯಕ್ತಪಡಿಸಿದ್ದಾರೆ.

‘ಇದು ಪಕ್ಕಾ ಉದ್ಯಮ. ಅವರು ಪಾಕಿಸ್ತಾನ-ಭಾರತ ಗಡಿಯಲ್ಲಿ ಯುದ್ಧ ಗೆದ್ದು ಬಂದಿಲ್ಲ. ಅವರು ಸಿನಿಮಾ ಮಾಡಿ, ಹಣ ಮಾಡಿಕೊಂಡು ಮನೆಗೆ ಹೋಗಿದ್ದಾರೆ ಅಷ್ಟೇ’ ಎಂದು ಅವರು ‘ಆಜ್ ತಕ್ ಅಜೆಂಡಾ’ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

‘ವ್ಯಕ್ತಿಯೊಬ್ಬರನ್ನು ಪೊಲೀಸರು ಕರೆದುಕೊಂಡು ಹೋಗಿದ್ದರ ಬಗ್ಗೆ ಇಷ್ಟು ದೊಡ್ಡ ಚರ್ಚೆ ಮಾಡುತ್ತಿದ್ದೀರಲ್ಲ. ಒಂದು ಪ್ರಾಣ ಹೋಗಿರುವ ಬಗ್ಗೆ ಯಾರಿಗೂ ಚಿಂತೆ ಇಲ್ಲ. ಪರಿವಾರ ಹೇಗಿದೆ ಎಂದು ಯಾರೂ ಕೇಳಿಲ್ಲ. ಅವರ ಮಗ ಆಸ್ಪತ್ರೆಯಲ್ಲಿ ಇದ್ದಾನೆ. ಅವನು ಕೋಮಾದಿಂದ ಹೊರ ಬಂದರೆ ಮುಂದೆ ಹೇಗೆ ಜೀವನ ನಡೆಸುಕೊಂಡು ಹೋಗುತ್ತಾನೆ ಎಂಬ ಬಗ್ಗೆ ಯಾರೂ ಚಿಂತಿಸಲ್ಲ’ ಎಂದಿದ್ದಾರೆ ಅವರು.

View this post on Instagram

A post shared by cartoon (@memes_raja11)

ಇದನ್ನೂ ಓದಿ: ಅಲ್ಲು ಅರ್ಜುನ್ ಅಥವಾ ವಿಜಯ್ ದೇವರಕೊಂಡ ಯಾರು ಬೆಸ್ಟ್? ರಶ್ಮಿಕಾ ಉತ್ತರವೇನು?

ವಿಶೇಷ ಎಂದರೆ ಅಲ್ಲು ಅರ್ಜುನ್ ಪತ್ನಿ ರೇವಂತ್ ರೆಡ್ಡಿಗೆ ಸಂಬಂಧಿಯಂತೆ. ಆದರೆ, ಈ ವಿಚಾರದಲ್ಲಿ ಅವರು ಸಂಬಂಧವನ್ನು ನೋಡಿಲ್ಲ. ಪೊಲೀಸರು ಅಲ್ಲು ಅರ್ಜುನ್​ನ ಬಂಧಿಸಲು ಹೋದಾಗ ಯಾವುದೇ ಪ್ರಭಾವ ಬೆಳೆಸಲು ಹೋಗಿಲ್ಲ. ‘ನಿಮ್ಮ ನೆಚ್ಚಿನ ಹೀರೋ ಯಾರು’ ಎಂದು ರೇವಂತ್​ಗೆ ಕೇಳಲಾಯಿತು. ಇದಕ್ಕೆ ಉತ್ತರಿಸಿರೋ ರೇವಂತ್ ಅವರು, ‘ನನಗೆ ನಾನೇ ಸ್ಟಾರ್​. ನಾನು ಯಾರೊಬ್ಬರ ಅಭಿಮಾನಿಯೂ ಅಲ್ಲ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:58 am, Thu, 19 December 24

ಮಕ್ಕಳು ಮತ್ತು ವಯೋವೃದ್ಧರು ಮನೆಗಳಿಂದ ಹೊರಬಾರದ ಸ್ಥಿತಿ!
ಮಕ್ಕಳು ಮತ್ತು ವಯೋವೃದ್ಧರು ಮನೆಗಳಿಂದ ಹೊರಬಾರದ ಸ್ಥಿತಿ!
ಎಲ್ಲರಿಗೂ ಟೈಮ್ ಬರುತ್ತೆ: ಡ್ರೆಸ್ಸಿಂಗ್ ರೂಮ್​ನಲ್ಲಿ ಅಶ್ವಿನ್ ಭಾವುಕ ಮಾತು
ಎಲ್ಲರಿಗೂ ಟೈಮ್ ಬರುತ್ತೆ: ಡ್ರೆಸ್ಸಿಂಗ್ ರೂಮ್​ನಲ್ಲಿ ಅಶ್ವಿನ್ ಭಾವುಕ ಮಾತು
ಬೆಂಗಳೂರು: ರಸ್ತೆಗೆ ಅಡ್ಡಲಾಗಿ ಕಂಟೈನರ್ ನಿಲ್ಲಿಸಿದ ಚಾಲಕ, ಟ್ರಾಫಿಕ್ ಜಾಮ್
ಬೆಂಗಳೂರು: ರಸ್ತೆಗೆ ಅಡ್ಡಲಾಗಿ ಕಂಟೈನರ್ ನಿಲ್ಲಿಸಿದ ಚಾಲಕ, ಟ್ರಾಫಿಕ್ ಜಾಮ್
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ದಿನ ಭವಿಷ್ಯ; ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ!
ದಿನ ಭವಿಷ್ಯ; ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ!
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಜಾಮೀನು ಸಿಕ್ಕ 6 ದಿನದ ಬಳಿಕ ಶಿವಮೊಗ್ಗ ಜೈಲಿನಿಂದ ಆರೋಪಿ ಜಗದೀಶ್ ರಿಲೀಸ್​
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಮುಖ್ಯಮಂತ್ರಿ ಮಾತಾಡುತ್ತಿದ್ದರೂ ಹೊರಗೆ ಹೋದ ವಿರೋಧಪಕ್ಷಗಳ ಶಾಸಕರು
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಜಮೀರ್ ಉತ್ತರದಿಂದ ಬಿಜೆಪಿ ಸಮಾಧಾನವಾಗದಿದ್ದಾಗ ಮುಖ್ಯಮಂತ್ರಿ ಉತ್ತರ
ಪ್ರಿನ್ಸಿಪಾಲ್​ಗೆ ಅಡುಗೆ ಮಾಡಿಕೊಡಲು 8ನೇ ಕ್ಲಾಸ್ ಹುಡುಗನಿಗೆ ಒತ್ತಾಯ
ಪ್ರಿನ್ಸಿಪಾಲ್​ಗೆ ಅಡುಗೆ ಮಾಡಿಕೊಡಲು 8ನೇ ಕ್ಲಾಸ್ ಹುಡುಗನಿಗೆ ಒತ್ತಾಯ
ಚೈತ್ರಾ ಮೋಸದಾಟ; ಮನ ಒಲಿಸಲು ಹೊಸ ಉಪಾಯ ಕಂಡುಹಿಡಿದ ರಜತ್
ಚೈತ್ರಾ ಮೋಸದಾಟ; ಮನ ಒಲಿಸಲು ಹೊಸ ಉಪಾಯ ಕಂಡುಹಿಡಿದ ರಜತ್