AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಥುರಾ ಜನರ ಸಹಾಯಕ್ಕೆ ನಿಂತ ನಟಿ ಹೇಮಾ ಮಾಲಿನಿ; ಅವರು ಮಾಡಿದ ಸಹಾಯ ಏನು?

ಮಥುರಾ ಹೇಮಾ ಮಾಲಿನಿ ಅವರ ಲೋಕಸಭಾ ಕ್ಷೇತ್ರ. ಈ ಕಾರಣಕ್ಕೆ ಅವರು ಜಿಲ್ಲೆಯ ಬ್ರಜ್​ ಭಾಗದ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಈ ಭಾಗದಲ್ಲಿ ಅವರು ಏಳು ಆಕ್ಸಿಜನ್​ ಉತ್ಪಾದನಾ ಮಷಿನ್​ಗಳನ್ನು ಸ್ಥಾಪಿಸಿದ್ದಾರೆ.

ಮಥುರಾ ಜನರ ಸಹಾಯಕ್ಕೆ ನಿಂತ ನಟಿ ಹೇಮಾ ಮಾಲಿನಿ; ಅವರು ಮಾಡಿದ ಸಹಾಯ ಏನು?
ಹೇಮಾ ಮಾಲಿನಿ
ರಾಜೇಶ್ ದುಗ್ಗುಮನೆ
|

Updated on: May 19, 2021 | 9:50 PM

Share

ಕೊರೊನಾ ಸಂಕಷ್ಟದಲ್ಲಿರುವವರ ಸಹಾಯಕ್ಕೆ ಚಿತ್ರರಂಗದ ಸ್ಟಾರ್ಸ್​ಗಳು ಮುಂದೆ ಬಂದಿದ್ದಾರೆ. ಸ್ಯಾಂಡಲ್​ವುಡ್​, ಬಾಲಿವುಡ್, ಟಾಲಿವುಡ್​ ಸೇರಿ ಎಲ್ಲಾ ಚಿತ್ರರಂಗದವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈಗ ಬಾಲಿವುಡ್​ ನಟಿ ಹಾಗೂ ಸಂಸದೆ ಹೇಮಾ ಮಾಲಿನಿ ಕೂಡ ಕೊವಿಡ್​ ಸಂಕಷ್ಟದಲ್ಲಿರುವವರ ಸಹಾಯಕ್ಕೆ ನಿಂತಿದ್ದಾರೆ. ಬುಧವಾರ ಅವರು ಮಥುರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಆಕ್ಸಿಜನ್ ವರ್ಧಕ ಯಂತ್ರವನ್ನು ಅಳವಡಿಸಿದ್ದಾರೆ.

ಮಥುರಾ ಹೇಮಾ ಮಾಲಿನಿ ಅವರ ಲೋಕಸಭಾ ಕ್ಷೇತ್ರ. ಈ ಕಾರಣಕ್ಕೆ ಅವರು ಜಿಲ್ಲೆಯ ಬ್ರಜ್​ ಭಾಗದ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಈ ಭಾಗದಲ್ಲಿ ಅವರು ಏಳು ಆಕ್ಸಿಜನ್​ ಉತ್ಪಾದನಾ ಮಷಿನ್​ಗಳನ್ನು ಸ್ಥಾಪಿಸಿದ್ದಾರೆ. ಇದು ಕೊವಿಡ್​ ರೋಗಿಗಳಿಗೆ ಸರಿಯಾದ ಸಮಯದಲ್ಲಿ ಆಮ್ಲಜನಕ ದೊರೆಯಲು ಸಹಕಾರಿಯಾಗಲಿದೆ.

ಬ್ರಜ್ ನಿವಾಸಿಗಳಿಗೆ ಸಹಾಯವಾಗಲು ಮಥುರಾ ಜಿಲ್ಲೆಯಲ್ಲಿ 7 ಆಕ್ಸಿಜನ್ ವರ್ಧಕ ಯಂತ್ರವನ್ನು ಸ್ಥಾಪಿಸಿದ್ದೇನೆ. ಮಥುರಾ ಜಿಲ್ಲೆಯ ಗ್ರಾಮೀಣ ಪ್ರದೇಶದ ಬ್ರಜ್ ನಿವಾಸಿಗಳಿಗೆ ಮತ್ತಷ್ಟು ಆಮ್ಲಜನಕ ವರ್ಧಕ ಯಂತ್ರವನ್ನು ಶೀಘ್ರದಲ್ಲೇ ಅರ್ಪಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಕಷ್ಟದ ಸಮಯದಲ್ಲಿ ಜನರ ಸಹಾಯಕ್ಕೆ ನಿಂತಿದ್ದಾರೆ.

ಪ್ರಿಯಾಂಕಾ ಚೋಪ್ರಾ, ಅನುಷ್ಕಾ, ಶರ್ಮ, ಅಮಿತಾಭ್ ಬಚ್ಚನ್​, ಸೋನು ಸೂದ್​, ವರುಣ್​ ಧವನ್​ ಅಕ್ಷಯ್​ ಕುಮಾತ್​ ಸೇರಿ ಸಾಕಷ್ಟು ಬಾಲಿವುಡ್​ ಸೆಲೆಬ್ರಿಟಿಗಳು ಕೊವಿಡ್​ ಸಂಕಷ್ಟದ ಸಮಯದಲ್ಲಿ ಜನರ ಸಹಾಯಕ್ಕೆ ನಿಂತಿದ್ದಾರೆ.

ನಟ ಸೋನು ಸೂದ್​ ಅವರಂತೂ ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ. ಕಷ್ಟ ಎಂದು ಹೇಳಿದ ಎಲ್ಲರಿಗೂ ಅವರು ಸಹಾಯ ಮಾಡುತ್ತಿದ್ದಾರೆ. ಸದ್ಯದ ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಅದರಲ್ಲೂ ಆಸ್ಪತ್ರೆಯ ಬೆಡ್​ ಸಿಗದೇ ಒದ್ದಾಡುತ್ತಿರುವ, ಆಕ್ಸಿಜನ್​ ಸಿಲಿಂಡರ್​ ಕೊರತೆ ಅನುಭವಿಸುತ್ತಿರುವ ಕೊವಿಡ್​ ಸೋಂಕಿತರಿಗಾಗಿ ಸೋನು ಸೂದ್​ ಹಲವು ಬಗೆಯಲ್ಲಿ ನೆರವು ನೀಡುತ್ತಿದ್ದಾರೆ. ಕೊರೊನಾದಿಂದ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್​ ಪ್ಲಾಂಟ್​ಗಳನ್ನು ಸ್ಥಾಪಿಸಲು ಸೋನು ಸೂದ್​ ತೀರ್ಮಾನಿಸಿದ್ದರು. ಅದಕ್ಕಾಗಿ ಅವರು ಆಕ್ಸಿಜನ್​ ಪ್ಲಾಂಟ್​ಗಳನ್ನು ಫ್ರಾನ್ಸ್​ನಿಂದ ಆಮದು ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು.

ಇದನ್ನೂ ಓದಿ: Sonu Sood: ಸೋನು ಸೂದ್​ ಹೆಸರಲ್ಲಿ ಮಹಾಮೋಸ; ಕೊರೊನಾ ಕಾಲದಲ್ಲೂ ದುಡ್ಡು ಕಬಳಿಸಿದ ಕಿಡಿಗೇಡಿಗಳು

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!