AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆಗೆ ಹೋಗುತ್ತಾರೆಯೇ ‘ಸಪ್ತ ಸಾಗರ’ ಹೇಮಂತ್ ರಾವ್: ನಿರ್ದೇಶಕ ಹೇಳಿದ್ದೇನು?

Hemanth Rao movie: ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಮೂಲಕ ಹೇಮಂತ್ ರಾವ್ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪ್ರೇಕ್ಷಕರನ್ನು ಗಳಿಸಿಕೊಂಡಿದ್ದಾರೆ. ಇದೀಗ ಹೇಮಂತ್ ರಾವ್ ಅವರಿಗೆ ಇದೀಗ ಪರಭಾಷೆ ಚಿತ್ರರಂಗಗಳಿಂದಲೂ ಅವಕಾಶಗಳು ಅರಸಿ ಬರುತ್ತಿವೆಯಂತೆ. ಈ ಬಗ್ಗೆ ಖುದ್ದು ಹೇಮಂತ್ ರಾವ್ ಅವರೇ ಮಾತನಾಡಿದ್ದಾರೆ.

ಪರಭಾಷೆಗೆ ಹೋಗುತ್ತಾರೆಯೇ ‘ಸಪ್ತ ಸಾಗರ’ ಹೇಮಂತ್ ರಾವ್: ನಿರ್ದೇಶಕ ಹೇಳಿದ್ದೇನು?
Hemanth Rao
ಮಂಜುನಾಥ ಸಿ.
|

Updated on:Jul 10, 2026 | 1:05 PM

Share

ಸಪ್ತ ಸಾಗರದಾಚೆ ಎಲ್ಲೊ’ (Sapta Sagaradache Ello) ಸಿನಿಮಾ ಮೂಲಕ ಇಡೀ ದೇಶದ ಗಮನ ಸೆಳೆದಿದ್ದಾರೆ ನಿರ್ದೇಶಕ ಹೇಮಂತ್ ರಾವ್. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ಅವರ ಈ ಹಿಂದಿನ ಸಿನಿಮಾಗಳಾದ ‘ಕವಲುದಾರಿ’, ‘ಗೋದಿ ಬಣ್ಣ ಸಾಧಾರಣ ಮೈಕಟ್ಟು’ ಸಿನಿಮಾಗಳನ್ನು ಸಹ ಪರಭಾಷೆ ಸಿನಿಮಾ ಪ್ರೇಮಿಗಳು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪ್ರೇಕ್ಷಕರನ್ನು ಗಳಿಸಿಕೊಂಡಿರುವ ಹೇಮಂತ್ ರಾವ್ ಅವರಿಗೆ ಇದೀಗ ಪರಭಾಷೆ ಚಿತ್ರರಂಗಗಳಿಂದಲೂ ಅವಕಾಶಗಳು ಅರಸಿ ಬರುತ್ತಿವೆಯಂತೆ. ಈ ಬಗ್ಗೆ ಖುದ್ದು ಹೇಮಂತ್ ರಾವ್ ಅವರೇ ಮಾತನಾಡಿದ್ದಾರೆ.

ತೆಲುಗು ಚಾನೆಲ್​​ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಹೇಮಂತ್ ರಾವ್ ಅವರಿಗೆ ಪರಭಾಷೆ ಸಿನಿಮಾಗಳಿಂದ ಅವಕಾಶಗಳು ಬರುತ್ತಿವೆಯೇ? ಹಾಗೊಮ್ಮೆ ಬಂದರೆ ಬೇರೆ ಭಾಷೆಗಳಲ್ಲಿ ಸಿನಿಮಾ ಮಾಡುತ್ತೀರಾ? ಎಂಬ ಪ್ರಶ್ನೆ ಎದುರಾಯ್ತು. ಇದಕ್ಕೆ ಉತ್ತರಿಸಿದ ಹೇಮಂತ್ ರಾವ್, ‘ನನಗೆ ಸಾಕಷ್ಟು ಆಸಕ್ತಿಕರ ಆಫರ್​​ಗಳುಗಳು ನನಗೆ ಬಂದಿವೆ, ಬರುತ್ತಿವೆ. ಒಮ್ಮೆ ನೋಡಿದರೆ ನನ್ನ ವೃತ್ತಿ ಬದುಕಿನ ಏಳಿಗೆಗೆ ಸಾಕಷ್ಟು ಅನುಕೂಲ ಆಗಬಹುದಾದಂಥಹಾ ಅವಕಾಶಗಳು ಅವಾಗಿವೆ’ ಎಂದಿದ್ದಾರೆ.

‘ಬಹಳ ಟೆಂಪ್ಟಿಂಗ್ ಆದ ಅವಕಾಶಗಳೇ ಎದುರಿಗೆ ಇವೆ, ಇದ್ದವು. ಆದರೆ ನನಗೆ ಯಾಕೋ, ಏನೋ ಈ ಹಂತದಲ್ಲಿ ಪರ ಭಾಷೆಗೆ ಹೋಗಿ ಸಿನಿಮಾ ಮಾಡುವುದು ಸರಿ ಅನಿಸಲಿಲ್ಲ. ಹೌದು, ಒಬ್ಬ ನಿರ್ದೇಶಕನಾಗಿ ನನಗೆ, ನನ್ನ ಸಿನಿಮಾಗಳನ್ನು ಹೆಚ್ಚು ಹೆಚ್ಚು ಜನರಿಗೆ ತೋರಿಸಬೇಕು ಎಂಬ ಆಸೆ ಇದೆ. ಮಾರ್ಕೆಟ್ ಎಲ್ಲಿ ಹೆಚ್ಚಿದೆಯೋ ಅಲ್ಲಿಗೆ ಹೋಗಬೇಕು ಎಂಬುದು ಸಹ ನಿಜವೇ. ಆದರೆ ನಾನು ಒಬ್ಬ ಹೆಮ್ಮೆಯ ಕನ್ನಡಿಗ, ಭಾಷೆ, ರಾಜ್ಯದ ಬಗ್ಗೆ ಹೆಮ್ಮೆಯುಳ್ಳ ವ್ಯಕ್ತಿ. ನನ್ನ ಭಾಷೆಯಲ್ಲಿ ಸಿನಿಮಾ ಮಾಡುವುದು ನನಗೆ ಹೆಚ್ಚು ಸುಖ, ಆಪ್ತ ಎನಿಸುತ್ತದೆ’ ಎಂದಿದ್ದಾರೆ ಹೇಮಂತ್ ರಾವ್.

ಇದನ್ನೂ ಓದಿ:ಸೈಮಾನಲ್ಲಿ ಪ್ರಶಸ್ತಿಗಳ ಬಾಚಿದ ‘ಸಪ್ತ ಸಾಗರದಾಚೆ ಎಲ್ಲೋ’, ಇಲ್ಲಿದೆ ಪಟ್ಟಿ

‘ಅಲ್ಲದೆ ನನ್ನ ಕತೆಗಳು ನನ್ನ ಸುತ್ತ-ಮುತ್ತಲಿನ ಪರಿಸರದಿಂದ, ಆ ಪರಿಸರದಲ್ಲಿ ಮೂಡಿದ ನನ್ನ ಅನುಭವದಿಂದ ಹುಟ್ಟಿದವು, ಅವು ಪರಭಾಷೆಯವರಿಗೆ ಅಜ್ಞಾತ ಅನಿಸಬಹುದು ಎಂಬ ಭಯವೂ ಇದೆ. ಅಲ್ಲದೆ, ಗೊತ್ತಿಲ್ಲದ ಭಾಷೆಯಲ್ಲಿ ಸಿನಿಮಾ ಮಾಡುವುದು ಸೂಕ್ತವಲ್ಲ ಎಂಬುದು ಸಹ ನನ್ನ ನಂಬಿಕೆ. ಆಗ ನನ್ನ ಐಡಿಯಾಗಳನ್ನು, ಭಾವನೆಗಳನ್ನು ಸೂಕ್ತವಾಗಿ ಹೇಳಲಾಗುವುದಿಲ್ಲ. ಅಲ್ಲದೆ, ನನ್ನನ್ನು ಈಗ ಕನ್ನಡದ ಸಿನಿಮಾ ನಿರ್ದೇಶಕ ಎಂದು ಗುರುತಿಸುತ್ತಾರೆ. ಅದೊಂದು ಗೌರವ, ಹೆಮ್ಮೆ. ನಾನು ಅದಕ್ಕೆ ಬಹಳ ಮೌಲ್ಯ ಕೊಡುತ್ತೀನಿ. ಸದ್ಯಕ್ಕೆ ಕನ್ನಡದಲ್ಲಿ ಮಾತ್ರ ಸಿನಿಮಾ ಮಾಡುವ ಯೋಚನೆ ಇದೆ. ಮುಂದೇನಾಗುತ್ತದೆಯೋ ನೋಡಬೇಕು’ ಎಂದು ಹೇಮಂತ್ ರಾವ್ ಹೇಳಿದ್ದಾರೆ.

ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಸರಣಿಗಳು ದೇಶದಾದ್ಯಂತ ಸಿನಿಮಾ ಪ್ರೇಮಿಗಳಿಂದ ನೋಡಲ್ಪಟ್ಟಿವೆ. ಈ ಸಿನಿಮಾಗಳಿಗೆ ಪ್ರತ್ಯೇಕ ಅಭಿಮಾನಿ ವರ್ಗವೇ ಹುಟ್ಟಿಕೊಂಡಿದೆ. ಇದೀಗ ಹೇಮಂತ್ ರಾವ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಹೆಸರಿನ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಸಿನಿಮಾನಲ್ಲಿ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಒಟ್ಟಿಗೆ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Fri, 10 July 26

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ