ಲಸಿಕೆ ಪಡೆದ ನಂತರವೂ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಹೇಗೆ? ವೈದ್ಯರು ಹೇಳಿದ್ದಿಷ್ಟು

ಕೆಲ ತಿಂಗಳ ಹಿಂದೆ ಕಮಲ್​ ಹಾಸನ್​ ಕೊವಿಡ್​ ಎರಡನೇ ಡೋಸ್​ ಪಡೆದುಕೊಂಡಿದ್ದರು. ಆ ಬಗ್ಗೆ ಟ್ವೀಟ್​ ಕೂಡ ಮಾಡಿದ್ದರು. ಆದಾಗ್ಯೂ ಅವರಿಗೆ ಕೊರೊನಾ ಅಂಟಿದೆ. ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಲಸಿಕೆ ಪಡೆದ ನಂತರವೂ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಹೇಗೆ? ವೈದ್ಯರು ಹೇಳಿದ್ದಿಷ್ಟು
ಕಮಲ್​ ಹಾಸನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 29, 2021 | 5:10 PM

ಕಮಲ್​ ಹಾಸನ್​ ಅವರು ಕೊವಿಡ್​ ವಿರುದ್ಧ ಹೋರಾಡಲು ಎರಡೂ ಡೋಸ್​ ಲಸಿಕೆ ಪಡೆದುಕೊಂಡಿದ್ದಾರೆ. ಆದಾಗ್ಯೂ ಅವರಿಗೆ ಕೊರೊನಾ ವೈರಸ್​ ಅಂಟಿದೆ. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.  ಲಸಿಕೆ ಪಡೆದ ನಂತರವೂ ಅವರಿಗೆ ಕೊವಿಡ್​ ಅಂಟಿದ್ದು ಹೇಗೆ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆ ಬಗ್ಗೆ ಆಸ್ಪತ್ರೆ ವೈದ್ಯರಿಂದ ಸ್ಪಷ್ಟನೆ ಸಿಕ್ಕಿದೆ. ಹಾಗಾದರೆ, ಅವರು ಹೇಳೋದೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈಚೆಗಷ್ಟೇ ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ಕಮಲ್​. ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಟ್ವೀಟ್​ ಮಾಡಿದ್ದ ಕಮಲ್​ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್​.

ಕೆಲ ತಿಂಗಳ ಹಿಂದೆ ಕಮಲ್​ ಹಾಸನ್​ ಕೊವಿಡ್​ ಎರಡನೇ ಡೋಸ್​ ಪಡೆದುಕೊಂಡಿದ್ದರು. ಆ ಬಗ್ಗೆ ಟ್ವೀಟ್​ ಕೂಡ ಮಾಡಿದ್ದರು. ಆದಾಗ್ಯೂ ಅವರಿಗೆ ಕೊರೊನಾ ಅಂಟಿದೆ. ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ‘ಕೊವಿಡ್​ ಲಸಿಕೆ ಪಡೆದರೂ ಕೊರೊನಾ ಬರಬಹುದು. ಆದರೆ, ಕೊರೊನಾ ಬಂದರೆ ಅದರಿಂದ ಗಂಭೀರ ತೊಂದರೆಗಳು ಆಗುವುದಿಲ್ಲ’ ಎಂದಿದ್ದಾರೆ ವೈದ್ಯರು.

ನವೆಂಬರ್​ 7ರಂದು ಕಮಲ್​ ಜನ್ಮದಿನ ಆಚರಿಸಿಕೊಂಡಿದ್ದರು. ಸೆಲೆಬ್ರಿಟಿಗಳು, ಅಭಿಮಾನಿಗಳು, ಸ್ನೇಹಿತರು ಕಮಲ್​ ಹಾಸನ್​ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು. ಬರ್ತ್​ಡೇ ಪ್ರಯುಕ್ತ ಬಹುನಿರೀಕ್ಷಿತ ‘ವಿಕ್ರಮ್​’ ಸಿನಿಮಾ ತಂಡದಿಂದ ಟೀಸರ್​ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ವಿಜಯ್​ ಸೇತುಪತಿ, ಫಹಾದ್​ ಫಾಸಿಲ್​ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟೀಸರ್​ನಲ್ಲಿ ಅನಿರುದ್ಧ್​ ರವಿಚಂದರ್​ ಅವರ ಹಿನ್ನೆಲೆ ಸಂಗೀತ ಕೂಡ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದೆ.

ಇದನ್ನೂ ಓದಿ: Kamal Haasan Health: ಕಮಲ್​ ಹಾಸನ್​ ಆರೋಗ್ಯ ಸ್ಥಿರವಾಗಿದೆ; ವೈದ್ಯರಿಂದ ಹೆಲ್ತ್​ ಬುಲೆಟಿನ್​

ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ