AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​’ ಚಿತ್ರದ ಟಿಕೆಟ್​ ಬೇಕಾ? ಈ ಸಿಂಪಲ್​ ಕೆಲಸ ಮಾಡಿದರೆ ಸಿಗುತ್ತೆ ಮೊದಲ ದಿನದ ಫ್ರೀ ಟಿಕೆಟ್​

‘ಸಲಾರ್​’ ಸಿನಿಮಾದ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲು ಪ್ರಭಾಸ್​ ಅಭಿಮಾನಿಗಳಿಗೆ ಒಂದು ಅವಕಾಶ ಸಿಕ್ಕಿದೆ. ಅದಕ್ಕಾಗಿ ಒಂದು ಸಿಂಪಲ್​ ಕೆಲಸ ಮಾಡಬೇಕು. ಆ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ 5 ಮಂದಿಗೆ ಈ ಸಿನಿಮಾದ ಉಚಿತ ಟಿಕೆಟ್​ ಸಿಗಲಿದೆ. ಆ ಬಗ್ಗೆ ‘ಹೊಂಬಾಳೆ ಫಿಲ್ಸ್ಮ್​’ ಸಂಸ್ಥೆಯು ಮಾಹಿತಿ ಹಂಚಿಕೊಂಡಿದೆ.

‘ಸಲಾರ್​’ ಚಿತ್ರದ ಟಿಕೆಟ್​ ಬೇಕಾ? ಈ ಸಿಂಪಲ್​ ಕೆಲಸ ಮಾಡಿದರೆ ಸಿಗುತ್ತೆ ಮೊದಲ ದಿನದ ಫ್ರೀ ಟಿಕೆಟ್​
ಪ್ರಶಾಂತ್​ ನೀಲ್​, ಪ್ರಭಾಸ್​
ಮದನ್​ ಕುಮಾರ್​
|

Updated on: Nov 30, 2023 | 3:27 PM

Share

ಸಿನಿಮಾ ಚೆನ್ನಾಗಿ ಮಾಡುವುದು ಮಾತ್ರವಲ್ಲ, ಪ್ರಚಾರವನ್ನೂ ಅಷ್ಟೇ ಚೆನ್ನಾಗಿ ಮಾಡಬೇಕು. ಈ ವಿಚಾರದಲ್ಲಿ ಪ್ರಶಾಂತ್​ ನೀಲ್​(Prashanth Neel) ಅವರಿಗೆ ತುಂಬ ಸ್ಪಷ್ಟತೆ ಇದೆ. ಪ್ರಭಾಸ್​ ಜೊತೆ ಅವರು ಮಾಡಿರುವ ‘ಸಲಾರ್​’ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ಅದಕ್ಕೆ ತಕ್ಕಂತೆಯೇ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಈ ಸಿನಿಮಾ ಮೇಲೆ ಪ್ರಭಾಸ್​ (Prabhas) ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಸಲಾರ್​’ ಸಿನಿಮಾವನ್ನು ಮೊದಲ ದಿನ ಮೊದಲ ಶೋ ನೋಡಬೇಕು ಎಂಬ ಆಸೆ ಎಲ್ಲರಿಗೂ ಇದೆ. ಆದರೆ ಟಿಕೆಟ್​ ಸಿಗುವುದು ಅಷ್ಟು ಸುಲಭವಲ್ಲ. ಹಾಗಿದ್ದರೂ ಕೂಡ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಕಡೆಯಿಂದ ಒಂದು ಸುಲಭದ ದಾರಿ ತೋರಿಸಲಾಗಿದೆ. ಏನದು? ಇಲ್ಲಿದೆ ವಿವರ..

‘ಹೊಂಬಾಳೆ ಫಿಲ್ಮ್ಸ್​’ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಒಂದು ಹೊಸ ಫೋಟೋ ಹಂಚಿಕೊಳ್ಳಲಾಗಿದೆ. ಈ ಫೋಟೋಗೆ ಚಂದದ ಕ್ಯಾಪ್ಷನ್​ ನೀಡಲು ಸೂಚಿಸಲಾಗಿದೆ. ಕಮೆಂಟ್​ ಮಾಡುವ ಮೂಲಕ ಎಲ್ಲರೂ ಕ್ಯಾಪ್ಷನ್​ ನೀಡಬಹುದು. ಅತ್ಯುತ್ತಮ ಕ್ಯಾಪ್ಷನ್​ ನೀಡುವ 5 ಮಂದಿಗೆ ‘ಸಲಾರ್​’ ಸಿನಿಮಾದ ಫಸ್ಟ್ ಡೇ ಫಸ್ಟ್ ಶೋ ಟಿಕೆಟ್​ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಲಾಗಿದೆ. ಅದಕ್ಕಾಗಿ ಅಭಿಮಾನಿಗಳು ಮುಗಿಬಿದ್ದು ಕಮೆಂಟ್​ ಮಾಡುತ್ತಿದ್ದಾರೆ. ಒಂದು ಗಂಟೆಯೊಳಗೆ ಸಾವಿರಾರು ಕಮೆಂಟ್​ಗಳು ಬಂದಿವೆ.

‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್​ ಮತ್ತು ಶ್ರುತಿ ಹಾಸನ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾ ಎರಡು ಪಾರ್ಟ್​ನಲ್ಲಿ ಮೂಡಿಬರುತ್ತಿದೆ. ಮೊದಲ ಪಾರ್ಟ್​ ಡಿಸೆಂಬರ್​ 22ರಂದು ಬಿಡುಗಡೆ ಆಗಲಿದೆ. ಅತ್ತ, ಬಾಲಿವುಡ್​ನಲ್ಲಿ ಇದೇ ಸಮಯಕ್ಕೆ ಶಾರುಖ್​ ಖಾನ್​ ನಟನೆಯ ‘ಡಂಕಿ’ ಸಿನಿಮಾ ಕೂಡ ರಿಲೀಸ್​ ಆಗಲಿರುವುದರಿಂದ ಪೈಪೋಟಿ ಜೋರಾಗಲಿದೆ. ಹಾಗಾಗಿ ‘ಸಲಾರ್​’ ತಂಡದವರು ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಸಖತ್​ ಹೈಪ್​ ಸೃಷ್ಟಿ ಮಾಡಿದೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರೀಕರಣ ಪ್ರಾರಂಭ ಯಾವಾಗ? ‘ನನಗೂ ಅವಕಾಶ ಕೊಡಿ’ ಎಂದ ಬಾಲಿವುಡ್ ಸ್ಟಾರ್ ನಟ

ಡಿಸೆಂಬರ್​ 1ಕ್ಕೆ ಟ್ರೇಲರ್​ ‘ಸಲಾರ್​’ ಸಿನಿಮಾದ ಕಥೆಯ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಟ್ರೇಲರ್​ ಬಿಡುಗಡೆಯಾದರೆ ಕಥೆಯ ಬಗ್ಗೆ ಒಂದು ಸುಳಿವು ಸಿಗಲಿದೆ. ಡಿಸೆಂಬರ್​ 1ರಂದು ಸಂಜೆ 7.19ಕ್ಕೆ ಈ ಸಿನಿಮಾದ ಟ್ರೇಲರ್​ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಒಂದು ಪ್ರಮುಖ ಪಾತ್ರವನ್ನು ನಿಭಾಯಿಸಿದ್ದಾರೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ‘ಕೆಜಿಎಫ್​: ಚಾಪ್ಟರ್​ 2’ ರೀತಿಯೇ ಈ ಸಿನಿಮಾ ಕೂಡ ಅಬ್ಬರಿಸುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್