OTT: ಒಟಿಟಿ ಪ್ರಿಯರಿಗೆ ಸಂತಸದ ಸುದ್ದಿ; ಈ ವಾರ ಬಿಡುಗಡೆಯಾಗಲಿವೆ ಬಹುನಿರೀಕ್ಷಿತ ಸೀರೀಸ್, ಚಿತ್ರಗಳು!

OTT Release: ಇತ್ತೀಚೆಗೆ ಒಟಿಟಿಯಲ್ಲಿ ಬಿಗ್ ಬಜೆಟ್ ಚಿತ್ರಗಳು ಹಾಗೂ ಒರಿಜಿನಲ್ ಸೀರೀಸ್​ಗಳ ಬಿಡುಗಡೆ ಸತತವಾಗಿ ಆಗುತ್ತಿದೆ. ಅಂತೆಯೇ ಈ ವಾರ ಕೂಡ ಹಲವು ಚಿತ್ರಗಳು, ಸೀರೀಸ್​ಗಳು ಬಿಡುಗಡೆಯಾಗುತ್ತಿದ್ದು, ಅವುಗಳ ಪಟ್ಟಿ ಇಲ್ಲಿದೆ.

OTT: ಒಟಿಟಿ ಪ್ರಿಯರಿಗೆ ಸಂತಸದ ಸುದ್ದಿ; ಈ ವಾರ ಬಿಡುಗಡೆಯಾಗಲಿವೆ ಬಹುನಿರೀಕ್ಷಿತ ಸೀರೀಸ್, ಚಿತ್ರಗಳು!
ಈ ವಾರ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಚಿತ್ರಗಳು
Follow us
TV9 Web
| Updated By: shivaprasad.hs

Updated on: Nov 18, 2021 | 9:28 AM

ಕೊರೊನಾ ನಂತರ ಚಿತ್ರ ನಿರ್ಮಾಪಕರು ನೇರವಾಗಿ ಒಟಿಟಿಯಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡಲು ಮುಂದಾಗುತ್ತಿದ್ದಾರೆ. ಸಣ್ಣ ಬಜೆಟ್ ಚಿತ್ರಗಳಿಗೆ ಸೀಮಿತ ಚಿತ್ರಮಂದಿರಗಳಿಗಿಂತ ಒಟಿಟಿ ಬಹುದೊಡ್ಡ ವೇದಿಕೆ ಎಂಬುದು ಹಲವರ ಅಭಿಪ್ರಾಯ. ಇಂತಹ ಚಿತ್ರಗಳ ಜೊತೆಜೊತೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಸ್ಟಾರ್ ಚಿತ್ರಗಳೂ, ಕೆಲ ಕಾಲದ ನಂತರ ಒಟಿಟಿಯಲ್ಲಿ ಬಿಡುಗಡೆಯಾಗುತ್ತವೆ. ಅಂತೆಯೇ ಈ ವಾರ ವಿವಿಧ ಭಾಷೆಗಳ ಹಲವು ಚಿತ್ರಗಳು ಒಟಿಟಿ ಮೂಲಕ ಬಿಡುಗಡೆಯಾಗುತ್ತಿವೆ. ಬಹುನಿರೀಕ್ಷಿತ ಸೀರೀಸ್ ಹಾಗೂ ಚಿತ್ರಗಳು ಈ ವಾರ ಬಿಡುಗಡೆಯಾಗುತ್ತಿದ್ದು, ವೀಕ್ಷಕರಿಗೆ ಮನರಂಜನೆ ನೀಡಲಿವೆ. ಆಮೆಜಾನ್ ಪ್ರೈಮ್, ನೆಟ್​​ಫ್ಲಿಕ್ಸ್, ಆಹಾ, ಡಿಸ್ನೆ+ ಹಾಟ್​​ಸ್ಟಾರ್ ಮೊದಲಾದ ಒಟಿಟಿಗಳ ಮುಖಾಂತರ ಹಲವು ಚಿತ್ರಗಳು, ಸೀರೀಸ್ ತೆರೆಕಾಣುತ್ತಿವೆ. ಅವುಗಳ ಪಟ್ಟಿ ಇಲ್ಲಿದೆ.

‘ಮೋಸ್ಟ್ ಎಲಿಜಿಬಲ್ ಬ್ಯಾಚುಲರ್’: ಪೂಜಾ ಹೆಗ್ಡೆ ಹಾಗೂ ಅಖಿಲ್ ಅಕ್ಕಿನೇನಿ ಅಭಿನಯದ ಈ ಚಿತ್ರ ದಸರಾ ಸಮಯದಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿತ್ತು. ಈಗಾಗಲೇ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿರುವ ಈ ಚಿತ್ರ ನವೆಂಬರ್ 19ರಂದು ಆಹಾ ಒಟಿಟಿ ಹಾಗೂ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆಯಾಗಲಿದೆ.

‘ಅದ್ಭುತಮ್’: ತೇಜ ಸಜ್ಜ ಮತ್ತು ಶಿವಾನಿ ರಾಜಶೇಖರ್ ಅಭಿನಯದ ಈ ಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೇ ನೇರವಾಗಿ ಒಟಿಟಿ ಮೂಲಕ ಬಿಡುಗಡೆಯಾಗುತ್ತಿದೆ. ಡಿಸ್ನೆ+ ಹಾಟ್​​ಸ್ಟಾರ್​​ನಲ್ಲಿ ಈ ಚಿತ್ರ ತೆರೆಕಾಣಲಿದೆ.

‘ಧಮಾಕಾ’: ಕಾರ್ತಿಕ್ ಆರ್ಯನ್ ನಟನೆಯ ಈ ಬಾಲಿವುಡ್ ಚಿತ್ರ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆಯಾಗಲಿದೆ. ಥ್ರಿಲ್ಲರ್ ಮಾದರಿಯ ಈ ಚಿತ್ರ ನವೆಂಬರ್ 19ರಂದು ಬಿಡುಗಡೆಯಾಗಲಿದೆ.

‘ದಿ ವೀಲ್ ಆಫ್ ಟೈಮ್’: ಆಮೆಜಾನ್ ಒರಿಜಿನಲ್ ಸೀರೀಸ್ ಆದ ಇದು, ನವೆಂಬರ್ 19ರಂದು ಬಿಡುಗಡೆಯಾಗಲಿದೆ. ಈಗಾಗಲೇ ‘ದಿ ವೀಲ್ ಆಫ್ ಟೈಮ್​’ನ ಟ್ರೈಲರ್ ಬಿಡುಗಡೆಯಾಗಿ, ಎಲ್ಲರ ಗಮನ ಸೆಳೆದಿದ್ದು, ಸೈನ್ಸ್ ಫಿಕ್ಷನ್ ಮಾದರಿಯ ಸೀರೀಸ್ ಇದಾಗಿದೆ.

‘ಚುರುಲಿ’: ಲಿಜೋ ಜೋಸ್ ಪೆಲ್ಲಿಸ್ಸೇರಿ ನಿರ್ದೇಶನದ ಫ್ಯಾಂಟಸಿ- ಅಡ್ವೆಂಚರ್ ಚಿತ್ರವಾದ ‘ಚುರುಲಿ’ ನವೆಂಬರ್ 19ರಂದು ಬಿಡುಗಡೆಯಾಗಲಿದೆ. ‘ಡಿಸ್ನೆ+ ಹಾಟ್​ಸ್ಟಾರ್​’ನಲ್ಲಿ ಚಿತ್ರ ತೆರೆ ಕಾಣಲಿದೆ.

‘ಯುವರ್ ಹೋಮರ್ ಸೀಸನ್ 2’:

ಈ ಸೀರೀಸ್ ಸೋನಿ ಲಿವ್​ನಲ್ಲಿ ನವೆಂಬರ್ 19ರಂದು ಬಿಡುಗಡೆಯಾಗಲಿದೆ.

ಇದನ್ನೂ ಓದಿ:

ಥಿಯೇಟರ್​ಗೆ ಬರದೆ ಒಟಿಟಿ ಮೊರೆ ಹೋದ ಶಾರುಖ್​ ಸಿನಿಮಾ; ಬೇಸರಗೊಂಡ ಫ್ಯಾನ್ಸ್​

ಸಲ್ಮಾನ್ ಜೊತೆ ನಟಿಸಲು ಬಹಳ ಆತಂಕಿತರಾಗಿದ್ದ ಆಯುಷ್ ಶರ್ಮಾ; ಇದಕ್ಕೆ ನೆಪೋಟಿಸಂ ಅಪವಾದವೂ ಕಾರಣವಂತೆ!

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ