AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niharika Konidela: ಚಿರಂಜೀವಿ ಮನೆ ಮಗಳು ನಿಹಾರಿಕಾ ವಿಚ್ಛೇದನಕ್ಕೆ ಇದುವೇ ಕಾರಣ..

ನಿಹಾರಿಕಾ ಕೊನಿಡೆಲಾ ಹಾಗೂ ಚೈತನ್ಯ ಜೆವಿ ಪರಸ್ಪರ ಪ್ರೀತಿಸಿ ಮದುವೆ ಆದವರು. ಆದರೆ, ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು.

Niharika Konidela: ಚಿರಂಜೀವಿ ಮನೆ ಮಗಳು ನಿಹಾರಿಕಾ ವಿಚ್ಛೇದನಕ್ಕೆ ಇದುವೇ ಕಾರಣ..
ನಿಹಾರಿಕಾ-ಚೈತನ್ಯ
ರಾಜೇಶ್ ದುಗ್ಗುಮನೆ
|

Updated on:Jul 05, 2023 | 11:58 AM

Share

ಚಿರಂಜೀವಿ ಕುಟುಂಬದ ಮಗಳು ನಿಹಾರಿಕಾ ಕೊನಿಡೆಲಾ (Niharika Konidela) ಹಾಗೂ ವೆಂಕಟ್ ಚೈತನ್ಯ ಜೊನ್ನಲಗಡ್ಡ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ಕಳೆದ ತಿಂಗಳು ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪ್ರಕ್ರಿಯೆ ಮುಗಿದಿದ್ದು, ಇವರಿಗೆ ಡಿವೋರ್ಸ್ ಸಿಕ್ಕಿದೆ. ಇದು ಚಿರಂಜೀವಿ (Chiranjeevi) ಕುಟುಂಬದ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇವರ ವಿಚ್ಛೇದನಕ್ಕೆ ಕಾರಣ ಏನು ಎಂಬ ವಿಚಾರ ಈಗ ರಿವೀಲ್ ಆಗಿದೆ. ಇಬ್ಬರೂ ಹೊಂದಾಣಿಕೆ ಮಾಡಿಕೊಂಡು ಜೀವನ ನಡೆಸಬಹುದಿತ್ತು ಎಂಬ ಮಾತು ಕೇಳಿ ಬಂದಿದೆ.

ನಿಹಾರಿಕಾ ಕೊನಿಡೆಲಾ ಹಾಗೂ ಚೈತನ್ಯ ಜೆವಿ ಪರಸ್ಪರ ಪ್ರೀತಿಸಿ ಮದುವೆ ಆದವರು. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಇವರು 2020ರ ಡಿಸೆಂಬರ್​ನಲ್ಲಿ ಉದಯಪುರದಲ್ಲಿ ಅದ್ದೂರಿಯಾಗಿ ಮದುವೆ ಆದರು. ಅನೇಕ ಸೆಲೆಬ್ರಿಟಿಗಳು ಈ ಮದುವೆಯಲ್ಲಿ ಭಾಗಿ ಆದರು. ಮದುವೆ ಆಗಿ ಎರಡು ವರ್ಷ ಕಳೆಯುವುದರೊಳಗೆ ಇವರಿಗೆ ಸಂಸಾರ ಸಾಕಾಗಿದೆ. ಇಬ್ಬರೂ ಬೇರೆ ಆಗುವ ನಿರ್ಧಾರ ತೆಗೆದುಕೊಂಡರು.

ಇದಕ್ಕೆ ಕಾರಣ ಏನು ಎಂಬುದು ಅಧಿಕೃತ ಆಗಿಲ್ಲ. ಆದರೆ, ಕೆಲ ತೆಲುಗು ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ. ಮದುವೆಗೆ ಮೊದಲು ಯಾವ ರೀತಿಯಲ್ಲಿ ಹೊಂದಾಣಿಕೆ ಇತ್ತೋ ಆ ಹೊಂದಾಣಿಕೆ ಮದುವೆ ಬಳಿಕ ಇಲ್ಲದಾಗಿದೆ. ಹಲವು ವ್ಯತ್ಯಾಸಗಳು ಎದುರಾಗಿದ್ದರಿಂದ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಚಿರಂಜೀವಿ ತಮ್ಮ ನಾಗ ಬಾಬು ಅವರ ಮಗಳು ನಿಹಾರಿಕಾ. ಅವರ ಮದುವೆಯನ್ನು ಕುಟುಂಬದವರು ಅದ್ದೂರಿಯಾಗಿ ಮಾಡಿಕೊಟ್ಟಿದ್ದರು. ಆದರೆ, ಈಗ ಇಬ್ಬರೂ ಬೇರೆ ಆಗಿದ್ದಾರೆ. ಇದು ಅನೇಕರಿಗೆ ಬೇಸರ ಮೂಡಿಸಿದೆ. ನಿಹಾರಿಕಾ ಅವರು ಟಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ಅನೇಕ ತೆಲುಗು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ.

ಇದನ್ನೂ ಓದಿ: ವಿಚ್ಛೇದನ ಪಡೆದ ನಿಹಾರಿಕಾ ಕೊನಿಡೆಲಾ-ಚೈತನ್ಯ ಜೊನ್ನಲಗಡ್ಡ; ಕಡೆಗೂ ನಿಜವಾಯ್ತು ಅನುಮಾನ

ನಿಹಾರಿಕಾ ಅವರು ನಟನೆಯ ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದರು. ವೆಬ್ ಸೀರಿಸ್ ಹಾಗೂ ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದರು. ಪಿಂಕ್ ಎಲಿಫೆಂಟ್ ಪಿಕ್ಚರ್ಸ್ ಎಂದು ಈ ಬ್ಯಾನರ್​ಗೆ ಅವರು ಹೆಸರಿಟ್ಟಿದ್ದಾರೆ. ಹೈದರಾಬಾದ್​ನಲ್ಲಿ ಅವರು ಅದ್ದೂರಿ ಕಚೇರಿ ಕೂಡ ಆರಂಭಿಸಿದ್ದಾರೆ.

ಚೈತನ್ಯ ಜೊತೆಗಿನ ಫೋಟೋ ಡಿಲೀಟ್ ಮಾಡಿದಾಗಲೇ ಅಭಿಮಾನಿಗಳಿಗೆ ಇವರ ವಿಚ್ಛೇದನದ ಬಗ್ಗೆ ಅನುಮಾನ ಶುರುವಾಗಿತ್ತು. ಇಬ್ಬರೂ ಬೇರೆ ಆಗುತ್ತಿರುವುದು ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಈ ಬಗ್ಗೆ ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Wed, 5 July 23

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?